Metro: ನಮ್ಮ ಮೆಟ್ರೊ ಟಿಕೆಟ್ ದರ ಏರಿಕೆ ಮಾಡಿದ್ದು ನಾವಲ್ಲ: ಮತ್ಯಾರು? ಬಸವರಾಜ ಬೊಮ್ಮಾಯಿ ಹೇಳಿದ್ದಿಷ್ಟು?
ಹುಬ್ಬಳ್ಳಿ: ಫೆಬ್ರವರಿ 16: ಬೆಂಗಳೂರು ಮೆಟ್ರೋ ದರ ಏರಿಕೆ, ಕೊಂಚ ಇಳಿಕೆಗೆ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜನರು ಮೆಟ್ರೋ ಬಿಟ್ಟು ರಸ್ತೆಗೆ ಇಳಿದಿದ್ದಾರೆ. ಇದೀಗ ನಮ್ಮ ಮೆಟ್ರೋ ಬೆಲೆ ಏರಿಕೆಗೆ ನಾವು ಕಾರಣವಲ್ಲ ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ ದರ ಏರಿಕೆಗೆ ಶಿಫಾರಸು ಮಾಡಿಲ್ಲ ಎಂದು ಅವರು ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮಿತಿ ಇದೆ. ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯದ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ ನಿರ್ದೇಶನ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ ಎಂದು ಜನತೆಗೆ ತಿಳಿಸಿದರು.
ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ವಿದ್ಯುತ್, ನೀರು, ಹಾಲಿನ ದರ ಸೇರಿದಂತೆ ಎಲ್ಲ ದರ ಏರಿಸಿದೆ. ಸರ್ಕಾರ ಹಣಕಾಸಿನ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ಅವರು ರಾಜ್ಯ ಸರ್ಕಾರದ ಆಡಳಿತ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರಿನ ಉದಯಗಿರಿ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾವಾಗ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣವನ್ನು ಹಿಂತೆಗೆದರೋ ಆಗ ಸರ್ಕಾರ ಯಾರ ಪರ ಇದೆ ಅನ್ನುವುದು ಗೊತ್ತಾಗಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದರ ಹಿಂದೆ ಯಾರ ಕುಮ್ಮಕ್ಕು ಇದೆ ಅನ್ನುವುದು ಗೊತ್ತಾಗುತ್ತದೆ. ಈ ಹಿಂದೆ ತನ್ವೀರ್ ಸೇಠ್ ಮೇಲೆ ಪಿಎಫ್ ಐ ದಾಳಿ ಮಾಡಿತ್ತು. ಇಂದು ಆ ಶಕ್ತಿಗಳು ಮತ್ತೆ ಒಂದಾಗಿವೆ ಎಂದು ದೂರಿದರು.
ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವವರೇ ಆತಂಕದಲ್ಲಿದ್ದಾರೆ. ಜನರಿಗೆ ರಕ್ಷಣೆ ಕೊಡುವ ಶಕ್ತಿಯೇ ಅವರಲ್ಲಿ ಇಲ್ಲ. ಮುಖ್ಯಮಂತ್ರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ದಾಳಿ ವಿಚಾರವಾಗಿ ಪೊಲೀಸರಿಗೆ ಎಲ್ಲವೂ ಗೊತ್ತಿದೆ. ಆದರೆ, ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದರು.
ಸರ್ಕಾರ ಯಾರ ಪರ ಎಂಬುದು ಗೊತ್ತಿದೆ!
ರಾಜಕೀಯ ಒತ್ತಡದಿಂದ ಕ್ರಮ ಕೈಗೊಳ್ಳುತ್ತಿಲ್ಲ. ಮೈಸೂರು ಗಲಿಭೆ ವಿಚಾರದಲ್ಲಿ ಸರ್ಕಾರ ಒತ್ತಡದಲ್ಲಿದೆ. ಹೀಗಾಗಿ ಧಮನಕಾರಿ ಶಕ್ತಿಗಳು ಇಂತಹ ಕೃತ್ಯ ಮಾಡಿವೆ ಎಂದು ಅವರು ಮೈಸೂರು ಗಲಾಟೆ ಖಂಡಿಸಿದರು. ಯಾವಾಗ ಸರ್ಕಾರ ಹಳೇ ಹುಬ್ಬಳ್ಳಿ ಪ್ರಕರಣವನ್ನ ಹುಂತೆಗೆದರೋ ಆಗ ಸರ್ಕಾರ ಯಾರ ಪರ ಇದೆ ಅನ್ನೋದು ಗೊತ್ತಾಗಿದೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡೋದರ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವುದು ಗೊತ್ತಾಗುತ್ತದೆ ಎಂದರು.












Click it and Unblock the Notifications