ಲೋಕಸಭಾ ಚುನಾವಣೆ : ಈಶ್ವರಪ್ಪ ನೇತೃತ್ವದಲ್ಲಿ ರಾಜ್ಯ ಪ್ರವಾಸ

Recommended Video

      Lok Sabha Elections 2019 : ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯ ಪ್ರವಾಸ ಶುರು ಮಾಡಿದ ಕೆ ಎಸ್ ಈಶ್ವರಪ್ಪ

      ಬೆಂಗಳೂರು, ಜನವರಿ 03 : 2019ರ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಕರ್ನಾಟಕದ ಬಿಜೆಪಿ ನಾಯಕರು ರಾಜ್ಯ ಪ್ರವಾಸ ಮಾಡಲಿದ್ದಾರೆ. ಪಕ್ಷದ ಓಬಿಸಿ ಮೋರ್ಚಾದ ನಾಯಕರು 28 ಲೋಕಸಭಾ ಕ್ಷೇತ್ರಕ್ಕೂ ಭೇಟಿ ನೀಡಲಿದ್ದಾರೆ.

      ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತು ಬಿ.ಜೆ.ಪುಟ್ಟಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯ ಪ್ರವಾಸ ಕೈಗೊಳ್ಳಲಾಗುತ್ತದೆ.

      ಎರಡು ತಿಂಗಳ ಕಾಲ ರಾಜ್ಯಾದ್ಯಂತ ಪ್ರವಾಸ ಮಾಡಲಾಗುತ್ತದೆ. ಬೂತ್ ಮಟ್ಟದ ಸಭೆಗಳನ್ನು ನಡೆಸಿ ಕಾರ್ಯಕರ್ತರ ಜೊತೆ ಸಂವಾದ ನಡೆಸಲಾಗುತ್ತದೆ. ಜನವರಿ 10ರೊಳಗೆ ಪಕ್ಷ ಬೂತ್ ಮಟ್ಟದ ಸಮಿತಿಗಳನ್ನು ರಚನೆ ಮಾಡಲಿದೆ.

      BJP OBC morcha state tour for Lok Sabha Elections 2019

      ಪಾಟ್ನಾದಲ್ಲಿ ನಡೆದ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಪರಿಶಿಷ್ಟ ಪಂಡಗಳ ಬೃಹತ್ ಸಮಾವೇಶವನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

      ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟು ಹಬ್ಬದ ದಿನ ರಾಜ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಸಮಾವೇಶದ ಸ್ಥಳವನ್ನು ಶೀಘ್ರದಲ್ಲಿಯೇ ಅಂತಿಮಗೊಳಿಸಲಾಗುತ್ತದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+