Siddaramaiah: ಬಿಜೆಪಿಯಿಂದ ಕಾಂಗ್ರೆಸ್​ನ 50 ಶಾಸಕರಿಗೆ ತಲಾ 50 ಕೋಟಿ ಬಿಗ್ ಆಫರ್‌ಗೆ ಸಿದ್ದರಾಮಯ್ಯ ಗರಂ : ಉರುಳುತ್ತಾ ಸರ್ಕಾರ?

ಮೈಸೂರು, ನವೆಂಬರ್‌ 14: ರಾಜ್ಯ ಸರ್ಕಾರವನ್ನು ಪದಚ್ಯುತಗೊಳಿಸಲು ಪ್ರತಿಪಕ್ಷ ಬಿಜೆಪಿ ನಾಯಕರು 50 ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್‌ ನೀಡಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಆರೋಪಿಸಿದ್ದಾರೆ.

ಈ ಬಾರಿ ಹೇಗಾದರೂ ಸರಿ ಸಿದ್ದರಾಮಯ್ಯ ಸರ್ಕಾರ ಕಿತ್ತೊಗೆಯಲು 50 ಶಾಸಕರಿಗೆ 50 ಕೋಟಿ ಆಫ಼ರ್ ನೀಡಲಾಗಿತ್ತು. ಅದಕ್ಕೆ ನಮ್ಮ ಶಾಸಕರು ಒಪ್ಪಿರಲಿಲ್ಲ. ಅದಕ್ಕಾಗಿಯೇ ನನ್ನ ಮುಖಕ್ಕೆ ಮಸಿ ಬಳಿಯುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

BJP offered Rs 50 crore each to 50 Congress MLAs to remove Karnataka govt CM Siddaramaiah

ಕಾಂಗ್ರೆಸ್‌ನ ಯಾವೊಬ್ಬ ಶಾಸಕರೂ ಇದನ್ನು ಒಪ್ಪಲಿಲ್ಲ, ಈ ಕಾರಣದಿಂದ ಬಿಜೆಪಿಯವರು ಈಗ ತಮ್ಮ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಸರಕಾರವನ್ನು ಹೇಗಾದರೂ ಉರುಳಿಸಲು ಬಿಜೆಪಿಯವರು 50 ಶಾಸಕರಿಗೆ 50 ಕೋಟಿ ರೂ ಎಲ್ಲಿಂದ ತಂದರು? ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಿಂಟ್ ಹಾಕಿದ್ದಾ ಈ ಹಣ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ. ಆದರೆ ನಮ್ಮ ಶಾಸಕರು ಇವರ ಆಮಿಷಕ್ಕೆ ಒಳಗಾಗಲಿಲ್ಲ ಎಂದರು.

ಅದೆಲ್ಲ ಲಂಚದ ಹಣ. ಕೋಟ್ಯಂತರ ರೂಪಾಯಿ ಸಂಪಾದನೆ ಮಾಡಿದ್ದಾರೆ, ಆ ಹಣವನ್ನು ಬಳಸಿಕೊಂಡು ಪ್ರತಿ ಶಾಸಕರಿಗೆ 50 ಕೋಟಿ ರೂ. ನೀಡುವುದಾಗಿ ಆಫರ್‌ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಆದರೆ ಈ ಬಾರಿ ನಮ್ಮ ಯಾವೊಬ್ಬ ಶಾಸಕರೂ ಅದಕ್ಕೆ ಒಪ್ಪಿಗೆ ನೀಡಲಿಲ್ಲ.ಅದಕ್ಕಾಗಿಯೇ ಹೇಗಾದರೂ ಮಾಡಿ ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂಬ ಹುನ್ನಾರ ಆರಂಭಿಸಿದ್ದಾರೆ.ಅದಕ್ಕಾಗಿಯೇ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಅಬಕಾರಿ ಇಲಾಖೆಯಲ್ಲಿ ಒಂದೇ ಒಂದು ಪೈಸೆ ಭಷ್ಟಾಚಾರ ಮಾಡಿದ್ದರೆ ನಾನು ರಾಜಕೀಯ ಬಿಡ್ತೀನಿ. ಇಲ್ಲಾಂದ್ರೆ ಮೋದಿ ಅವರು ಪ್ರಧಾನಿ ಸ್ಥಾನ ಬಿಡ್ತಾರಾ ಕೇಳಿ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿದ್ದಾರೆ. ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಮೋದಿ ಕರ್ನಾಟಕ ಸರ್ಕಾರದ ವಿರುದ್ಧ ನಡೆಸಿದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ಅವರಿಗೆ ತಿರುಗೇಟು ನೀಡಿದ್ದಾರೆ.

ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ. 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ 49 ಕೋಟಿ ರೂ ವೆಚ್ಚದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 3,4 ನೇ ಅಂತಸ್ತಿನ ಕಟ್ಟಡ ಹಾಗೂ ವಸತಿ ನಿಲಯದ 3 ನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನೂ ನೆರವೇರಿಸಿದರು.

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ನಾವು ಜಾರಿಗೆ ತಂದಿದ್ದೇವೆ ಎಂದ ಮುಖ್ಯಮಂತ್ರಿಗಳು, ನೀವು ವಿದ್ಯಾರ್ಥಿನಿಯರು ಬಸ್ ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದೀರಿ ತಾನೇ ಎಂದು ಪ್ರಶ್ನಿಸಿದರು. ವಿದ್ಯಾರ್ಥಿನಿಯರು ಹೌದೂ ಎಂದು ಎರಡೂ ಕೈಗಳನ್ನು ಎತ್ತಿ ಹರ್ಷೋದ್ಗಾರ ವ್ಯಕ್ತಪಡಿಸಿದರು.

ಇಲ್ಲಿಯವರೆಗೂ 325 ಕೋಟಿ ಫ್ರೀ ಟಿಕೆಟ್ ಮೂಲಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಮಹಿಳೆಯರು, ಯುವತಿಯರು ಸ್ವಾಭಿಮಾನಿ ಮತ್ತು ಸ್ವಾವಲಂಬಿಗಳಾಗಲು ಸಾಧ್ಯ ಎಂದರು. ಮಹಿಳೆಯರಿಗೆ ಮೊದಲಿಗೆ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದು ಬಸವಣ್ಣನರಾದರೆ, ಶಿಕ್ಷಣ ಮಹಿಳೆಯರ ಹಕ್ಕಾಗಿಸಿದ್ದು ಡಾ.ಬಿ.ಆರ್.ಅಂಬೇಡ್ಕರ್ ಅವರು. ಆದ್ದರಿಂದ ನೀವೆಲ್ಲಾ ಜಾತ್ಯತೀತರಾಗಿ, ವಿಶ್ವ ಮಾನವರಾಗಿ ಬೆಳೆದು ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿ, ಶಿಕ್ಷಣ ಕಲಿತೂ ಜಾತಿವಾದಿಗಳಾದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+