ಧನಂಜಯ್ ಕುಮಾರ್, ಬಸವರಾಜ್ ಅತಂತ್ರ!

ಹಳೆಯ ಎಲ್ಲಾ ನೋವುಗಳನ್ನು ಮರೆತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಮರಳಿದ್ದಾರೆ. ಅವರ ಜೊತೆಗೆ ಕೆಜೆಪಿಯಲ್ಲಿದ್ದ ಕೆಲವು ನಾಯಕರು ಕಮಲ ಪಕ್ಷಕ್ಕೆ ಮರಳಿದ್ದಾರೆ. ಆದರೆ, ಕೆಜೆಪಿ ಪಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ಮತ್ತು ತುಮಕೂರು ಸಂಸದ ಜಿ.ಎಸ್.ಬಸವರಾಜ್ ಅವರ ಸ್ಥಿತಿ ಅತಂತ್ರವಾಗಿದೆ.[ಯಡಿಯೂರಪ್ಪ ಬಗ್ಗೆ ಬಿಜೆಪಿ ನಾಯಕರು ಹೇಳಿದ್ದೇನು]
ಧನಂಜಯ್ ಕುಮಾರ್ ಮತ್ತು ಬಸವರಾಜ್ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಮೇಲೆ ತೀವ್ರವಾದ ವಾಗ್ದಾಳಿ ನಡೆಸಿದ್ದರು. ಅದರ ನೆನಪು ಬಿಜೆಪಿ ನಾಯಕರ ಮನಸ್ಸಿನಲ್ಲಿ ಇನ್ನೂ ಹಸಿರಾಗಿದ್ದು, ಆದ್ದರಿಂದ ಇವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದು ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.[ಧನಂಜಯ್ ಕುಮಾರ್ ಸೇರ್ಪಡೆಗೆ ಅಡ್ವಾಣಿ ಒಪ್ಪಬೇಕು]
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಗೆ ಮರಳಿದ ಬಳಿಕ ಗುರುವಾರ ಸಂಜೆ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಧನಂಜಯ್ ಕುಮಾರ್ ಮತ್ತು ಬಸವರಾಜ್ ಅವರ ಬಗ್ಗೆ ಚರ್ಚೆಗಳು ನಡೆದಿವೆ. ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದ ನಾಯಕರು ಈ ಇಬ್ಬರು ನಾಯಕರು ಪುನಃ ಪಕ್ಷಕ್ಕೆ ಮರಳುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ನಿಧಾನವಾಗಿ ಏರುತ್ತಿದ್ದ ಸಂದರ್ಭದಲ್ಲಿ ಕೆಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ್ ಕುಮಾರ್ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಮತ್ತು ಇತರ ರಾಷ್ಟ್ರೀಯ ನಾಯಕರು ಬಿ.ಎಸ್.ಯಡಿಯೂರಪ್ಪ ಅವರಿಂದ ಹಣ ಪಡೆದಿದ್ದಾರೆ ಎಂದು ಆರೋಪ ಮಾಡಿ ಅಡ್ವಾಣಿ ವಿರೋಧ ಕಟ್ಟಿಕೊಂಡಿದ್ದರು. ಈ ಹೇಳಿಕೆ ರಾಜ್ಯದ ಬಿಜೆಪಿ ನಾಯಕರ ಕೆಂಗಣ್ಣಿಗೂ ಗುರಿಯಾಗಿತ್ತು. [ಧನಂಜಯ್ ಕಿಕ್ ಬ್ಯಾಕ್ ಕಿರಿಕ್]
ಲೋಕ ಸಭೆಯಲ್ಲಿ ಯಾವುದಾದರೂ ವಿಷಯದ ಕುರಿತು ಚರ್ಚೆ ನಡೆಯುವ ವೇಳೆ ಮಾತನಾಡಲು ಮುಂದಾಗುವ ಕರ್ನಾಟಕದ ಸಂಸದರಿಗೆ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವಕಾಶ ನೀಡುವುದಿಲ್ಲ ಎಂದು ಸಂಸದ ಜಿ.ಎಸ್. ಬಸವರಾಜು ಗಂಭೀರ ಆರೋಪ ಮಾಡಿದ್ದರು. ಇದು ಸಹ ರಾಜ್ಯದ ನಾಯಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಆದ್ದರಿಂದ ಉಭಯ ನಾಯಕರ ಪಕ್ಷ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಎಲ್ಲವನ್ನು ಮರೆತು ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಆದರೆ, ಅವರ ಇಬ್ಬರು ಬೆಂಬಲಿಗರ ಸ್ಥಿತಿ ಮಾತ್ರ ಈಗ ಅತಂತ್ರವಾಗಿ ಯಡಿಯೂರಪ್ಪ ರಾಜ್ಯ ನಾಯಕರ ಮನವೊಲಿಸಿ ಧನಂಜಯ್ ಕುಮಾರ್ ಮತ್ತು ಬಸವರಾಜ್ ಅವರ ಸೇರ್ಪಡೆಗೆ ವೇದಿಕೆ ಸಿದ್ಧಗೊಳಿಸುತ್ತಾರೆಯೇ?
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications