ಶಾಂಗ್ರಿಲಾ ಹೋಟೆಲ್‌ನಲ್ಲಿ ಗೌಪ್ಯ ಸಭೆಯ ರಹಸ್ಯವೇನು...? ಇದು 85% ಡೀಲ್ ಫಿಕ್ಸಿಂಗ್ ಸಭೆಯೇ..? : ಬಿಜೆಪಿ ಪ್ರಶ್ನೆ
ಬೆಂಗಳೂರು, ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ #ATMSarkara ದ ಗೌಪ್ಯ ಸಭೆಯ ರಹಸ್ಯವೇನು...? ಇದು 85% ಡೀಲ್ ಫಿಕ್ಸಿಂಗ್ ಸಭೆಯೇ..? ಎಂದು ಪೋಟೋವನ್ನ ಹಂಚಿಕೊಂಡು ರಾಜ್ಯ ಬಿಜೆಪಿ ಪ್ರಶ್ನಿಸಿದೆ.
ಈ ಕುರಿತು ಟ್ವೀಟ್ ಮೂಲಕ ಪ್ರಶ್ನಿಸಿರುವ ರಾಜ್ಯ ಬಿಜೆಪಿ, ರಾಜ್ಯ ಸರಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರಿಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ..? ಇದು 85% ಡೀಲ್ ಫಿಕ್ಸಿಂಗ್ ಸಭೆಯೇ..? ಪ್ರಶ್ನಿಸಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉತ್ತರಿಸಬೇಕು ಎಂದು ಟ್ವೀಟ್ ಮೂಲಕ ಬಿಜೆಪಿ ಕಿಡಿಕಾರಿದೆ.

ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಸರ್ಕಾರ ರಚಿಸಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನ ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ಹಲವು ತಂತ್ರಗಾರಿಕೆಯ ಜೊತೆಗೆ ಸಚಿವರ ಹೆಗಲಿಗೆ ಲೋಕಸಭಾ ಚುನಾವಣಾ ಜವಾಬ್ಧಾರಿಯನ್ನ ನೀಡಿದೆ. ಅದಕ್ಕೂ ಮುನ್ನವೇ ಬಿಬಿಎಂಪಿ ಚುನಾವಣೆಯನ್ನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ #ATMSarkara ದ ಗೌಪ್ಯ ಸಭೆಯ ರಹಸ್ಯವೇನು...?
— BJP Karnataka (@BJP4Karnataka) June 13, 2023
ರಾಜ್ಯ ಸರಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರಿಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ..?
ಇದು 85% ಡೀಲ್ ಫಿಕ್ಸಿಂಗ್ ಸಭೆಯೇ..?… pic.twitter.com/yBV88KPvhe
ಈ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೀವಾಲಾ ನೇತೃತ್ವದಲ್ಲಿ ಚುನಾವಣಾ ಪೂರ್ವ ಸಿದ್ದತೆಗಳ ಕುರಿತಾಗಿ ಚರ್ಚೆ ನಡೆಯಿತು. ಇನ್ನು ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಸಹ ಪಾಲ್ಗೊಂಡಿರುವುದಕ್ಕೆ ರಾಜ್ಯ ಬಿಜೆಪಿ ಕೆಂಡಾಮಂಡಲಗೊಂಡು ಸಭೆಯ ಪೋಟೋ ಹಂಚಿಕೊಂಡು ಪ್ರಶ್ನಿಸಿದೆ.
ಇದು ಸರ್ಕಾರಿ ಸಭೆಯಾಗಿದ್ದರೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ @rssurjewala ರಿಗೆ ಅಲ್ಲೇನು ಕೆಲಸ? ಪಕ್ಷದ ಸಭೆಯಾಗಿದ್ದರೆ, #BBMP ಅಧಿಕಾರಿಗಳಿಗೆ ಅಲ್ಲೇನು ಕೆಲಸ? ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಈ ಸಭೆಯ ನೈಜ ಉದ್ದೇಶವಾದರೂ ಏನು?
— Nalinkumar Kateel (@nalinkateel) June 13, 2023
ಉತ್ತರಿಸಿ ಮಾನ್ಯ @siddaramaiah, @DKShivakumar ಅವರೇ... pic.twitter.com/gRuxcendbX
ಬಿಬಿಎಂಪಿ ಚುನಾವಣೆ ತಯಾರಿ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಉಪಸ್ಥಿತಿಗೆ ಬಿಜೆಪಿ ಕಿಡಿಕಾರಿದೆ. ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಿಪಡಿಸಿರುವ ಬಿಜೆಪಿ, ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಸರ್ಕಾರದೊಟ್ಟಿಗಾಗಲಿ, ರಣದೀಪ್ ಸುರ್ಜೇವಾಲಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ? ಎಂದು ಪ್ರಶ್ನಿಸಿದೆ.
ಇನ್ನೂ ಈ ವಿಚಾರವಾಗಿ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದು, ಇದು ಸರ್ಕಾರಿ ಸಭೆಯಾಗಿದ್ದರೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲರಿಗೆ ಅಲ್ಲೇನು ಕೆಲಸ? ಪಕ್ಷದ ಸಭೆಯಾಗಿದ್ದರೆ, #BBMP ಅಧಿಕಾರಿಗಳಿಗೆ ಅಲ್ಲೇನು ಕೆಲಸ? ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ನಡೆದ ಈ ಸಭೆಯ ನೈಜ ಉದ್ದೇಶವಾದರೂ ಏನು? ಎಂದು ಪ್ರಶ್ನಿಸಿದ್ದಾರೆ.












Click it and Unblock the Notifications