ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿವರ್ತನಾಯಾತ್ರೆ ಸಮಾರೋಪ ಸಮಾರಂಭ ದಿನಾಂಕ ಬದಲು!

|
Google Oneindia Kannada News

ಬೆಂಗಳೂರು, ಜನವರಿ 12 : ಕರ್ನಾಟಕ ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ದಿನಾಂಕ ಬದಲಾಗಿದೆ. ಫೆ.4ರಂದು ಸಮಾರಂಭ ನಿಗದಿಯಾಗಿದೆ.

ರಾಜ್ಯ ಬಿಜೆಪಿ ಘಟಕ ಜನವರಿ 28ರಂದು ಪರಿವರ್ತಯಾ ಯಾತ್ರೆ ಸಮಾರೋಪ ಸಮಾರಂಭವನ್ನು ನಿಗದಿ ಮಾಡಿತ್ತು. ಆದರೆ, ಶುಕ್ರವಾರ ದಿನಾಂಕವನ್ನು ಬದಲಾವಣೆ ಮಾಡಲಾಗಿದ್ದು ಫೆ.4ರ ಭಾನುವಾರ ಸಮಾರಂಭ ನಡೆಯಲಿದೆ.

ಪರಿವರ್ತನಾ ಯಾತ್ರೆ : ಬಿಜೆಪಿ ಸಾಧಿಸಿದ್ದೇನು?ಪರಿವರ್ತನಾ ಯಾತ್ರೆ : ಬಿಜೆಪಿ ಸಾಧಿಸಿದ್ದೇನು?

BJP parivarthana yatra to end with Modi's rally on Feb 4

ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 2017ರ ನವೆಂಬರ್ 2ರಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಪರಿವರ್ತನಾ ಯಾತ್ರೆಗೆ ಚಾಲನೆ ಕೊಟ್ಟಿದ್ದರು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆಸಿ, ಚುನಾವಣಾ ಪ್ರಚಾರ ನಡೆಸಲಾಗಿದೆ.

ಬಿಜೆಪಿಯ ಪರಿವರ್ತನಾ ಯಾತ್ರೆ : ಕಾಂಗ್ರೆಸ್ಸಿಗೆ ಆಗುವ 5 ಲಾಭಗಳು!ಬಿಜೆಪಿಯ ಪರಿವರ್ತನಾ ಯಾತ್ರೆ : ಕಾಂಗ್ರೆಸ್ಸಿಗೆ ಆಗುವ 5 ಲಾಭಗಳು!

ಅಮಿತ್ ಶಾ ಆಗಮನ : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಈಗಾಗಲೇ ಮೂರು ಬಾರಿ ರಾಜ್ಯಕ್ಕೆ ಬಂದು ಹೋಗಿದ್ದು, ಚುನಾವಣಾ ಸಿದ್ಧತೆಗಳ ಕುರಿತು ಸರಣಿ ಸಭೆ ನಡೆಸಿದ್ದಾರೆ. ಜನವರಿ 27ರಂದು ಅವರು ಪುನಃ ರಾಜ್ಯಕ್ಕೆ ಆಗಮಿಸಲಿದ್ದಾರೆ.

ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ಫೆ.4ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಅಂದು ಮೋದಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದು, ಅಮಿತ್ ಶಾ ಸಹ ಉಪಸ್ಥಿತರಿರುತ್ತಾರೆ.

English summary
Karnataka BJP parivarthana yatra to end on February 4, 2018. Party kick-start the election campaign with the 75-day Parivarthana Yatra in all assembly constituency. Prime Minister Narendra Modi will address yatra in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X