ರಾಜ್ಯ ಚುನಾವಣಾ ದಿನಾಂಕ ಘೋಷಣೆ: ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಮಾರ್ಚ್ 29: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚುನಾವಣಾ ಕಾರ್ಯ ಚಟುವಟಿಕೆ ಜೋರಾಗಿದೆ. ರಾಜ್ಯಕೀಯ ಪಕ್ಷಗಳು ಈಗಾಗಲೇ ರಾಜ್ಯಾದ್ಯಂತ ಚುನಾವಣಾ ಪ್ರಚಾರವನ್ನ ಆರಂಭಿಸಿದ್ದು,ಚುನಾವಣೆಗೆಗಾಗಿ ಹೊಸ ಹೊಸ ತಂತ್ರಗಳನ್ನ ಆರಂಭಿಸಿವೆ.

ಇನ್ನೂ ಚುನಾವಣಾ ದಿನಾಂಕ ಘೋಷಣೆಯ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಮೇ 10 ನಡೆಯಲಿರುವ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ. ಬಿಜೆಪಿ ಬಲಿಷ್ಟ ಕೇಡರ್ ಇರುವ, ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಈಗಾಗಲೇ ಹಲವಾರು ಅಭಿಯಾನ ಮಾಡಿದೆ.ನಿರಂತರವಾಗಿ ಪಕ್ಷದ ಸಂಘಟನೆ ಮಾಡಿಕೊಂಡು ಬಂದಿದ್ದು, ಬೂತ್ ಮಟ್ಟದ ಅಭಿಯಾನ, ಮೋರ್ಚಾಗಳ ಸಮ್ಮೇಳನ, ಸಂಕಲ್ಪ ಯಾತ್ರೆ, ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ.ಚುನಾವಣೆ ಎದುರಿಸಲು ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದರು.

BJP Party Ready For Assembly Elections Says Cm Basavaraj Bommai

ಜನತಾ ಜನಾರ್ದನ ನಮ್ಮ ಪರ

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ಯೋಜನೆಗಳು, ಮೂಲಸೌಕರ್ಯಕ್ಕೆ ನೀಡಿರುವ ಅನುದಾನ, ರಾಜ್ಯ ಸರ್ಕಾರ ಕೈಗೊಂಡಿರುವ ಹಲವಾರು ಜನೋಪಯೋಗಿ ಕಾರ್ಯಕ್ರಮ ಗಳು, ರೈತಾಪಿ ವರ್ಗ, ಮಹಿಳೆಯರು, ಯುವಕರು, ಎಸ್ಸಿ ಎಸ್ಟಿ , ಒಬಿಸಿ ವರ್ಗಕ್ಕೆ, ಸಾಮಾಜಿಕವಾಗಿ, ಆರ್ಥಿಕವಾಗಿ ತೆಗೆದುಕೊಂಡ ತೀರ್ಮಾನಗಳು, ಬಡವರಿಗೆ ನೀಡಿರುವ ಪ್ರೋತ್ಸಾಹ, ಗ್ರಾಮೀಣ ಪ್ರದೇಶಗಳಲ್ಲಿ ನೀಡಿರುವ ಕುಡಿಯುವ ನೀರಿನ ಯೋಜನೆ, ಕೋವಿಡ್ ಸಂದರ್ಭದಲ್ಲಿ 10 ಕೆಜಿ ಅಕ್ಕಿ, ಸ್ತ್ರೀ ಸಾಮರ್ಥ್ಯ, ಸ್ವಾಮಿ ವಿವೇಕಾನಂದ ಯೋಜನೆ, ರೈತ ವಿದ್ಯಾ ನಿಧಿ, ಯೋಜನೆಗಳನ್ನು ನೀಡಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ, ಮಾಡಿದೆ. ಒಳಮೀಸಲಾತಿ ಹೆಚ್ಚಳ, ನೆನೆಗುದಿಗೆ ಬಿದ್ದ ಸಮಸ್ಯೆಗಳಿಗೆ ಪರಿಹಾರ, ಒಬಿಸಿ ಯಲ್ಲಿ ಬದಲಾವಣೆ ಜನಮಾನಸದಲ್ಲಿ ಪಕ್ಷ ಹಾಗೂ ಸರ್ಕಾರದ ಪರವಾಗಿ ಜನತಾ ಜನಾರ್ದನ ಇದೆ. ಈ ಬಾರಿ ನಮ್ಮ ಕೆಲಸಗಳ ಆಧಾರದ ಮೇಲೆ ಸಕಾರಾತ್ಮಕ ತೀರ್ಪನ್ನು ಕೇಳುತ್ತಿದ್ದೇವೆ. ಜನರ ಆಶೀರ್ವಾದ ನಮ್ಮ ಪರವಾಗಿದೆ ಎಂದರು.

ವಿರೋಧ ಪಕ್ಷದವರು ಹಲವಾರು ಆರೋಪಗಳನ್ನು ಮಾಡಿದ್ದು ಅವರು ಮಾಡಿರುವ ಯಾವುದೇ ಆರೋಪ ಯಶಸ್ವಿ ಆಗಿಲ್ಲ. ಜನರ.ಮಧ್ಯೆ ನಿಂತಿಲ್ಲ. ಭ್ರಷ್ಟಾಚಾರದ ವಿಚಾರ ಸೇರಿದಂತೆ ಎಲ್ಲವೂ ಅವರಿಗೆ ತಿರುಗುಬಾಣವಾಗಿದೆ. ಅವರ ಮೇಲೆಯೇ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ನಮ್ಮ ಶಾಸಕರ ಮೇಲೆ ದಾಳಿ ಮಾಡಿರುವುದು, ನಾವು ಲೋಕಾಯುಕ್ತವನ್ನು ಬಲ ಪಡಿಸಿದ್ದರಿಂದ‌.ನ್ಯಾಯಸಮ್ಮತವಾಗಿ ಅಧಿಕಾರ ನೀಡಿದ್ದರಿಂದ ಶಾಸಕರ ವಿರುಧ್ಧ ಪ್ರಕರಣ ದಾಖಲಾಗಿದೆ ಎಂದರು.

BJP Party Ready For Assembly Elections Says Cm Basavaraj Bommai

ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತ ಬ್ಯಾಂಕ್ ಸಂಪೂರ್ಣ ಛಿದ್ರವಾಗಿದೆ.ಹೀಗಾಗಿ ಅವರು ಹತಾಶರಾಗಿ ಕೀಳುಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ಅವರ ಕೀಳು ಮಟ್ಟದ ಭಾಷೆಯೇ ಅವರ ಹತಾಶೆಯನ್ನು ತೋರಿಸುತ್ತದೆ ಎಂದ ಅವರು, ನಮ್ಮ ಪಕ್ಷದ ಯಾವುದೇ ಶಾಸಕರು ಕಾಂಗ್ರೆಸ್ ಹೋಗುವುದಿಲ್ಲ. ಎಲ್ಲರೂ ನಮ್ಮವರೇ ಯಾರೂ ವಲಸಿಗರಲ್ಲ. ಡಿಕೆ ಶಿವಕುಮಾರ್‌ ಕರೆ ಮಾಡಿ ಟಿಕೆಟ್ ಕೊಡುವ ಭರವಸೆ ನೀಡಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ. ಶಾಸಕರ ವಿರುಧ್ದ ಕಾಂಗ್ರೆಸ್ ನಲ್ಲೂ ಅಸಮಾಧಾನ ಇದೆ ಎಂದರು.

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿನ ಕಳೆದ ಮೊಕರು ತಿಂಗಳು ಮಾಡಿರುವ ಪ್ರವಾಸ ಸಕಾರಾತ್ಮಕ ಪರಿಣಾಮ ಬೀರಿದೆ. 2023 ರ ಮೇ 13 ರಂದು ಸ್ಪಷ್ಟವಾದ ಬಹುಮತ ಭಾರತೀಯ ಜನತಾ ಪಕ್ಷಕ್ಕೆ ಸಿಗಲಿದೆ. ಮತ್ತೆ ನಮ್ಮ ಸರ್ಕಾರ‌ 5 ವರ್ಷ ಆಡಳಿತ ಮಾಡುವುದರಲ್ಲಿ ಸಂಶಯವಿಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+