ಕೊಡಗು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿಯಿಂದ 3 ನಾಮಪತ್ರ

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮಡಿಕೇರಿ, ಡಿಸೆಂಬರ್, 10: ಕೊಡಗಿನಲ್ಲಿ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕಾರ್ಯ ಚುರುಕುಗೊಂಡಿದ್ದು, ಬಿಜೆಪಿ ಪಕ್ಷದಿಂದ ಮೂರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಅಭ್ಯರ್ಥಿ ಆಯ್ಕೆಯ ಗೊಂದಲ ಮುಂದುವರೆದಿದೆ.

ಜೆಡಿಎಸ್ ನಿಂದ ಆಯ್ಕೆಯಾದ 2ನೇ ಅಭ್ಯರ್ಥಿ ವಿನೋದ್ ಕುಮಾರ್‍ ಬದಲು ಸಂಕೇತ್ ಪೂವಯ್ಯ ಎಂಬುವವರು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಒಬ್ಬರು ಅಧಿಕೃತ, ಮತ್ತೊಬ್ಬರು ಡಮ್ಮಿ, ಇನ್ನೊಬ್ಬರು ಬಂಡಾಯ ಅಭ್ಯರ್ಥಿಗಳೆಂದು ಒಟ್ಟು ಮೂವರನ್ನು ಕಣಕ್ಕಿಳಿಸಿದ್ದಾರೆ.[ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ]

BJP party selected 3 contestants to Legislative council election at Madikeri

ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಸಹೋದರ ಸುಜಾಕುಶಾಲಪ್ಪ ಅಧಿಕೃತ ಅಭ್ಯರ್ಥಿಯಾಗಿ, ಸುನೀಲ್ ಸುಬ್ರಹ್ಮಣಿ ಡೆಮ್ಮಿಯಾಗಿ, ಬಿಜೆಪಿಯ ಮತ್ತೊಬ್ಬ ಮುಖಂಡ ಎಸ್.ಜಿ.ಮೇದಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್ ನಿಂದ ಸಂಕೇತ್ ಪೂವಯ್ಯ ನಾಮಪತ್ರ ಸಲ್ಲಿಸಿದ್ದು, ಚಿಂತಾಮಣಿ ಶಾಸಕ ಹಾಗೂ ಕೃಷ್ಣಾರೆಡ್ಡಿ, ಜಿಲ್ಲಾಧ್ಯಕ್ಷ ಎಸ್.ಬಿ.ಭರತ್ ಕುಮಾರ್, ಆಕಾಂಕ್ಷಿ ಪಟ್ಟಿಯಲ್ಲಿದ್ದ ವಿನೋದ್ ಕುಮಾರ್, ಪಕ್ಷದ ವಕ್ತಾರ ಪಿ.ಎಸ್.ಭರತ್ ಮತ್ತು ಇತರ ಮುಖಂಡರುಗಳ ಸಮ್ಮುಖದಲ್ಲಿ ಸಂಕೇತ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.[ಡಿಸೆಂಬರ್ 27ರ ವಿಧಾನಪರಿಷತ್ ಚುನಾವಣೆ ಬಗ್ಗೆ ತಿಳಿಯಿರಿ]

ಶಿಕ್ಷಕರ, ಪದವೀಧರರ ಕ್ಷೇತ್ರಗಳು ಹಾಗೂ ಸ್ಥಳೀಯ ಸಂಸ್ಥೆಗಳಿಂದ 25 ವಿಧಾನಪರಿಷತ್ ಸದಸ್ಯರ ಆಯ್ಕೆಗೆ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದ್ದು, ಇದೀಗ ಅಭ್ಯರ್ಥಿಗಳ ಆಯ್ಕೆ ಪಕ್ಷದಲ್ಲಿ ಜೋರಾಗಿಯೇ ನಡೆದಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP party selected 3 contestants like Suja kushalappa, Sunil subramanya, S.G Medappa to Legislative council election at Madikeri, Kodagu
Please Wait while comments are loading...