ಚುನಾವಣೆಗೂ ಮುನ್ನ ಬಿಜೆಪಿಯಿಂದ ಐಟಿ ಟಾರ್ಗೆಟ್: ಕಾಂಗ್ರೆಸ್,ಜೆಡಿಎಸ್ ನ 50 ಮುಖಂಡರ ಮೇಲೆ ಐಟಿ ದಾಳಿ : ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ,ಏಪ್ರಲ್30: ನನ್ನನ್ನೂ ಸೇರಿದಂತೆ ರಾಜ್ಯದ ಸುಮಾರು 50 ಮುಖಂಡರ ಮೇಲೆ ಲೋಕಾಯುಕ್ತ ದಾಳಿ ಮಾಡಿಸುವ ಸಂಚನ್ನು ಬಿಜೆಪಿ ಸರಕಾರ ರೂಪಿಸಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.
ಈ ಕುರಿತು ಬೆಳಗಾವಿಯಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಕೇವಲ 10 ದಿನ ಬಾಕಿ ಉಳಿದಿದ್ದು, ನಮಗೆ ಈಗ ಪ್ರತಿ ಕ್ಷಣವೂ ಮುಖ್ಯ. ಆದರೆ ಈ ಸಂದರ್ಭದಲ್ಲಿ ನಾವು ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲು ಸಾಧ್ಯವಾಗದಂತೆ ಕಟ್ಟಿ ಹಾಕುವ ಸಂಚು ರೂಪಿಸಲಾಗಿದೆ ಎಂದು ಬಿಜೆಪಿ ವಿರುದ್ದ ಕಿಡಿಕಾರಿದರು.

ಇನ್ನೂ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ರಾಜ್ಯದಲ್ಲಿ ಒಟ್ಟು 50 ಮುಖಂಡರ ಮೇಲೆ ಇನ್ನು ಒಂದೆರಡು ದಿನದಲ್ಲಿ ದಾಳಿ ನಡೆಸುವ ಬಗ್ಗೆ ಮಾಹಿತಿ ಬಂದಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನನ್ನನ್ನೂ ಸೇರಿ ಒಟ್ಟು ಮೂವರು ಕಾಂಗ್ರೆಸ್ ಮುಖಂಡರು ಸೇರಿದ್ದಾರೆ ಎಂದು ತಿಳಿದು ಬಂದಿದೆ ಬಿಜೆಪಿ ಸರ್ಕಾರದ ವಿರುದ್ ಗಂಬೀರವಾಗಿ ಆರೋಪಿಸಿದ್ದಾರೆ.
ಬಿಜೆಪಿಯವರು ಅಭಿವೃದ್ಧಿ ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುವ ಮೂಲಕ ಚುನಾವಣೆಯಲ್ಲಿ ಹೋರಾಡಬೇಕೇ ವಿನಃ ಈ ರೀತಿ ವಾಮ ಮಾರ್ಗ ಹಿಡಿಯುವುದು ಸರಿಯಲ್ಲ. ಈ ರೀತಿ ಬೆದರಿಕೆಯ ತಂತ್ರ ಅನುಸರಿಸಿದರೆ ಅದು ಅವರಿಗೇ ಮುಳುವಾಗುತ್ತದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಸಿದರು












Click it and Unblock the Notifications