ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರ್ಕಾವತಿ ಹೋರಾಟ ಮುಂದುವರೆಸಲಿದೆ ಬಿಜೆಪಿ

|
Google Oneindia Kannada News

ಬೆಂಗಳೂರು, ಆ.7 : ಅರ್ಕಾವತಿ ಬಡಾವಣೆ ಅಕ್ರಮ ಡಿನೋಟಿಫಿಕೇಶನ್ ವಿರುದ್ಧದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಕರ್ನಾಟಕ ಬಿಜೆಪಿ ಘಟಕ ತೀರ್ಮಾನ ಕೈಗೊಂಡಿದೆ. ಡಿನೋಟಿಫಿಕೇಶನ್ ನಲ್ಲಿ ಆಗಿರುವ ಅಕ್ರಮದ ಕುರಿತು ಅಧ್ಯಯನ ನಡೆಸಿ ಕಾನೂನು ಹೋರಾಟ ರೂಪಿಸಲು ಪಕ್ಷ ಸಮಿತಿಯೊಂದನ್ನು ರಚನೆ ಮಾಡಿದೆ.

ಬುಧವಾರ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಬಿಜೆಪಿ ಹೋರಾಟದ ಬಗ್ಗೆ ಮಾಹಿತಿ ನೀಡಿದರು. ಈಗಾಗಲೇ ಪ್ರತಿಪಕ್ಷದ ನಾಯಕ ಜಗದೀಶ್‌ ಶೆಟ್ಟರ್‌ ಅವರು ಹಲವು ದಾಖಲೆಗಳನ್ನು ಬಿಡುಗಡೆಗೊಳಿಸಿದ್ದಾರೆ. ಆದರೂ ಸಿದ್ದರಾಮಯ್ಯ ಅವರು ತಮ್ಮನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಜೋಶಿ ಹೇಳಿದರು.

Prahlad Joshi

ಅಕ್ರಮ ಡಿನೋಟಿಫಿಕೇಶನ್ ವಿರುದ್ಧದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಬಿಜೆಪಿ ನಿರ್ಧರಿಸಿದೆ. ಆದ್ದರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಿ, ಮತ್ತಷ್ಟು ಮಾಹಿತಿಗಳನ್ನು ಸಂಗ್ರಹಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದರು. [ಅರ್ಕಾವತಿ ವಿವಾದ ಏಕೆ?, ಏನು?]

ಮಾಜಿ ಸಚಿವರಾದ ಸುರೇಶ್‌ ಕುಮಾರ್‌ ಮತ್ತು ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಯಲ್ಲಿ ವಿಧಾನಸಭಾ ಸದಸ್ಯರಾದ ಬಿ.ಎನ್‌.ವಿಜಯಕುಮಾರ್‌, ಎಸ್‌.ಆರ್‌.ವಿಶ್ವನಾಥ್‌ ಹಾಗೂ ವಿಧಾನಪರಿಷತ್‌ ಸದಸ್ಯ ಅಶ್ವತ್ಥನಾರಾಯಣ ಇದ್ದಾರೆ. ಪಕ್ಷದ ಕಾನೂನು ಘಟಕ ಈ ಸಮಿತಿಗೆ ಅಗತ್ಯ ನೆರವು ನೀಡಲಿದೆ ಎಂದರು.

ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು ಅಥವಾ ಅವರನ್ನು ಕಾಂಗ್ರೆಸ್‌ ಪಕ್ಷ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು. ಅಲ್ಲಿವರೆಗೂ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಸಮಿತಿ ನೀಡುವ ವರದಿ ಅನ್ವಯ ಮುಂದಿನ ಹೋರಾಟದ ಬಗ್ಗೆ ಯೋಜನೆ ತಯಾರಿಸಲಾಗುತ್ತದೆ ಎಂದು ತಿಳಿಸಿದರು.

ಡಿನೋಟಿಫಿಕೇಶನ್ ಹಗರಣ ಕರ್ನಾಟಕದ ಅತಿದೊಡ್ಡ ಹಗರಣ ಎಂಬುದು ಪಕ್ಷದ ರಾಷ್ಟ್ರೀಯ ನಾಯಕರಿಗೆ ಮನವರಿಕೆಯಾಗಿದೆ. ಆದ್ದರಿಂದ ಈ ಪ್ರಕರಣವನ್ನು ಕಡೆಗಣಿಸದಂತೆ ರಾಷ್ಟ್ರೀಯ ನಾಯಕರೂ ಸೂಚನೆ ನೀಡಿದ್ದಾರೆ. ನಾವು ತಾರ್ತಿಕ ಅಂತ್ಯ ಕಾಣುವ ತನಕ ಹೋರಾಟವನ್ನು ಮುಂದುವರೆಸುತ್ತೇವೆ ಎಂದು ಜೋಶಿ ಹೇಳಿದರು.

ಅರ್ಕಾವತಿ ಬಡಾವಣೆಯ 541 ಎಕರೆ ಅಕ್ರಮ ಡಿನೋಟಿಫಿಕೇಷನ್‌ ಪೈಕಿ 119 ಎಕರೆಯ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಎಲ್ಲಾ ನಿಯಮಾವಳಿಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ. ಆದರೂ ಸಿಎಂ ತಮ್ಮನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ. ಅವರೊಬ್ಬ ಮಹಾನ್‌ ಸುಳ್ಳುಗಾರ ಎಂದು ಜೋಶಿ ಆರೋಪಿಸಿದರು.

English summary
Karnataka BJP unit forms a team to delve into Siddaramaiah’s alleged role in Arkavathi Layout denotification case. BJP is set to take up the ‘target Chief Minister Siddaramaiah’ campaign on a mission mode following directions from its national leaders said, State BJP president Prahlad Joshi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X