ಜಗದೀಶ್‌ ಶೆಟ್ಟರ್ ವಿರುದ್ಧ ಫಿಲ್ಡಿಗಿಳಿದ RSS: ಹುಬ್ಬಳ್ಳಿಗೆ ಬಂದಿಳಿದ ನಾಗಪುರದ ಸ್ವಯಂಸೇವಕರು- ಇದು ರಾಜಕಾರಣದ ಸ್ಪೋಟಕ ಮಾಹಿತಿ

ಹುಬ್ಬಳ್ಳಿ, ಏಪ್ರಿಲ್‌ 21: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರಿದ ಕೆಲವೇ ದಿನಗಳಲ್ಲಿ ಅವರನ್ನು ಸೋಲಿಸಲು ಬಿಜೆಪಿ ಭಾರೀ ಕಾರ್ಯತಂತ್ರ ರೂಪಿಸಿದೆ. ಹುಬ್ಬಳ್ಳಿ- ಧಾರವಾಡ ಭಾಗದಲ್ಲಿ ತಮ್ಮ ಮತ ಬ್ಯಾಂಕ್ ಯಥಾಸ್ಥಿತಿಯಲ್ಲಿ ಉಳಿಯುವಂತೆ ನೋಡಿಕೊಳ್ಳಲು ಬಿಜೆಪಿ ಹೊಸ ಯೋಜನೆಗೆ ಕೈ ಹಾಕಿದೆ. ಜಗದೀಶ್‌ ಶೆಟ್ಟರ್‌ ವಿರುದ್ಧ ಆರೆಸ್ಸೆಸ್ ಕಾರ್ಯಕರ್ತರನ್ನು ನಿಯೋಜಿಸುವ ಮೂಲಕ ಹುಬ್ಬಳ್ಳಿ-ಧಾರವಾಡ (ಕೇಂದ್ರ) ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿರುವ ಅವರನ್ನು ಸೋಲಿಸಲು ಕೇಸರಿ ಪಕ್ಷ ಮುಂದಾಗಿದೆ.

ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಧಾರವಾಡ ಜಿಲ್ಲೆಗೆ ಭೇಟಿ ನೀಡಿ ಎರಡು ಜನಪ್ರಿಯ ಲಿಂಗಾಯತ ಮಠಗಳಿಗೆ ಪೂಜೆ ಸಲ್ಲಿಸಿ ಸಮುದಾಯವನ್ನು ಓಲೈಸುವ ಪ್ರಯತ್ನ ಮಾಡಿದರು. ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಅವರ ಗೆಲುವನ್ನು ಖಚಿತಪಡಿಸಿಕೊಳ್ಳಲು ಪಕ್ಷವು ವಿಸ್ತಾರವಾದ ಯೋಜನೆಯನ್ನು ರೂಪಿಸುತ್ತಿದೆ.

BJP plays RSS card to counter Jagadish Shettar factor in Karnatakas Hubballi

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹುಬ್ಬಳ್ಳಿಗೆ ಭೇಟಿ ನೀಡಿ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಸಭೆ ನಡೆಸಿದರು. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡರೊಂದಿಗೆ ಪ್ರತ್ಯೇಕ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ವರದಿಗಳ ಪ್ರಕಾರ, ಮಾಜಿ ಸಿಎಂ ಜಗದೀಶ್ಅವರಿಗೆ ಟಿಕೆಟ್ ತಪ್ಪಲು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರು ಕಾರಣ ಎನ್ನಲಾಗಿದೆ. ಶೆಟ್ಟರ್ ಅವರನ್ನು ಸೋಲಿಸಲು ಬಿಜೆಪಿ ಮತ್ತು ಆರೆಸ್ಸೆಸ್ ಜಂಟಿ ಯೋಜನೆಗಳನ್ನು ರೂಪಿಸಿದೆ. ನಾಗಪುರದ ಸುಮಾರು 50 ಆರೆಸ್ಸೆಸ್ ಕಾರ್ಯಕರ್ತರನ್ನು ಹುಬ್ಬಳ್ಳಿಯಲ್ಲಿ ನಿಯೋಜಿಸಲಾಗಿದೆ ಮತ್ತು ಅವರಿಗೆ ವಿವಿಧ ಸಂಘಟನಾ ಕಾರ್ಯಗಳನ್ನು ನೀಡಲಾಗಿದೆ ಎಂದು ಹೇಳಲಾಗಿದೆ.

ಲಿಂಗಾಯತ ಸಮುದಾಯಕ್ಕೆ ಸೇರಿದ ನಾಯಕರನ್ನು ಪಕ್ಷದಿಂದ ದೂರವಿಡಲಾಗುತ್ತಿದೆ ಎಂಬ ಪ್ರತಿಪಕ್ಷ ಕಾಂಗ್ರೆಸ್‌ನ ನಿರೂಪಣೆಯನ್ನು ಬಿಜೆಪಿ ನಾಶಗೊಳಿಸಲು ಈ ತಂತ್ರವನ್ನು ರೂಪಿಸಿದೆ.

BJP plays RSS card to counter Jagadish Shettar factor in Karnatakas Hubballi

ಏತನ್ಮಧ್ಯೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ನಿವಾಸದಲ್ಲಿ ಶೆಟ್ಟರ್ ಅವರನ್ನು ಭೇಟಿ ಮಾಡಿ ಕ್ಷೇತ್ರದಲ್ಲಿ ಪಕ್ಷದೊಳಗಿನ ಭಿನ್ನಾಭಿಪ್ರಾಯವನ್ನು ಕೊನೆಗೊಳಿಸಲು ಪ್ರಯತ್ನಿಸಿದ್ದಾರೆ.

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅಳಿಯ ರಜತ್ ಮತ್ತು ಅನಿಲ್ ಕುಮಾರ್ ಹುಬ್ಬಳ್ಳಿ-ಧಾರವಾಡ (ಕೇಂದ್ರ) ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಕಾಂಗ್ರೆಸ್ ಶೆಟ್ಟರ್‌ಗೆ ಟಿಕೆಟ್ ನೀಡಿತು. ಅಂದಿನಿಂದ ಪಕ್ಷದೊಳಗೆ ಭಿನ್ನಾಭಿಪ್ರಾಯ ಉಂಟಾಗಿದೆ. ಗುರುವಾರ ಎರಡೂ ಬಣಗಳನ್ನು ಕರೆಸಿ ಶೆಟ್ಟರ್ ಪರ ಕೆಲಸ ಮಾಡುವಂತೆ ಸುರ್ಜೇವಾಲಾ ಹೇಳಿದ್ದಾರೆ.

ಕಾಂಗ್ರೆಸ್ 40 ನಾಯಕರ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಶೆಟ್ಟರ್ ಹೆಸರಿದ್ದು, ಕಿತ್ತೂರು-ಕರ್ನಾಟಕ ಭಾಗದಲ್ಲಿ ಅವರನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಲಿಂಗಾಯತ ಮುಖಂಡ ಮಹೇಶ ಟೆಂಗಿನಕಾಯಿ ಅವರನ್ನು ಕಣಕ್ಕಿಳಿಸಿದೆ. ಹೊಸ ತಲೆಮಾರಿನ ನಾಯಕರನ್ನು ಉತ್ತೇಜಿಸಲು ಪಕ್ಷವು ಬಯಸಿದ್ದರಿಂದ ಮಹೇಶ್ ಟೆಂಗಿನಕಾಯಿ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ ಎಂದು ವರದಿಗಳು ಹೇಳಿವೆ.

ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಬಿಜೆಪಿ ಭದ್ರಕೋಟೆ ಹೊಂದಿದೆ. ಟೆಂಗಿನಕಾಯಿ ಎರಡು ದಶಕಗಳಿಂದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿದ್ದಾರೆ. 52 ವರ್ಷದ ಅವರು ಪಕ್ಷ ಸಂಘಟನೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಯಶಸ್ವಿ ಉದ್ಯಮಿ ಮತ್ತು ಸಮಾಜ ಸೇವಕರಾಗಿಯೂ ತಮ್ಮ ಚಾಣಾಕ್ಷತೆಯನ್ನು ತೋರಿಸಿದ್ದಾರೆ.

ಟೆಂಗಿನಕಾಯಿ ಕ್ಷೇತ್ರದಿಂದ ಮಂಗಳವಾರ ನಾಮಪತ್ರ ಸಲ್ಲಿಸಿದರು. ಅವರು 2018 ರಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನೀಡಿತು. ಇಬ್ಬರೂ ನಾಯಕರು ಪ್ರಭಾವಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಜಗದೀಶ್ ಶೆಟ್ಟರ್ ಅವರ ಪ್ರಭಾವವನ್ನು ಕಡಿಮೆ ಮಾಡಲು ಬಿಜೆಪಿ ಈ ಬಾರಿ ಟೆಂಗಿನಕಾಯಿಯನ್ನು ಆಯ್ಕೆ ಮಾಡಿದೆ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+