ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಎಬಿವಿಪಿ ಪ್ರತಿಭಟನೆ ಹಿಂದೆ ಬಿಜೆಪಿ ಕೈವಾಡವಿದೆ'

|
Google Oneindia Kannada News

ಬೆಂಗಳೂರು, ಆಗಸ್ಟ್ 19 : 'ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಎಬಿವಿಪಿಯ ಪ್ರತಿಭಟನೆ ಹಿಂದೆ ಬಿಜೆಪಿ ಕೈವಾಡವಿದೆ ಎಂದು' ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಸಿದ್ದರಾಮಯ್ಯ ಅವರು, 'ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ವಿರುದ್ಧ ದಾಖಲಾಗಿರುವ ರಾಜದ್ರೋಹದ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ಬಳಿಕ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ' ಎಂದು ಹೇಳಿದರು.[ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಕಚೇರಿಗಳಿಗೆ ಬೀಗ!]

BJP politicizing Amnesty International issue says Siddaramaiah

'ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ವಿರುದ್ಧ ಎಬಿವಿಪಿ ನಡೆಸುತ್ತಿರುವ ಪ್ರತಿಭಟನೆ ಹಿಂದೆ ಬಿಜೆಪಿ ಕೈವಾಡವಿದೆ. ಬಿಜೆಪಿಯ ಅಂಗ ಸಂಸ್ಥೆ ಎಬಿವಿಪಿ ಈ ವಿಚಾರದಲ್ಲಿ ರಾಜಕೀಯ ಲಾಭ ಪಡೆದುಕೊಳ್ಳಲು ಪ್ರಯತ್ನ ನಡೆಸಿದೆ' ಎಂದು ಸಿದ್ದರಾಮಯ್ಯ ದೂರಿದರು.[Amnesty International ಬಗ್ಗೆ ತಿಳಿಯಿರಿ]

ಪರಿಶೀಲನೆ ನಡೆಯುತ್ತಿದೆ : ಎಬಿವಿಪಿ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, 'ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದ ವಿಡಿಯೋ ಪರಿಶೀಲನೆ ನಡೆಯುತ್ತಿದೆ. ಘೋಷಣೆ ಕೂಗಿರುವ ಕುರಿತು ಸಾಕ್ಷಿಗಳು ಸಿಕ್ಕರೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ' ಎಂದರು.

English summary
Karnataka Chief Minister Siddaramaiah said that, BJP politicizing Amnesty International India issue. Case of sedition was filed against Amnesty International.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X