Mallikarjun Kharge: 'ಇಂಡಿಯಾ' ಮುಖಸ್ಥರಾಗಿ ಖರ್ಗೆ ನೇಮಕ ಬಗ್ಗೆ ಭವಿಷ್ಯ ಹೇಳಿದ ಪ್ರಹ್ಲಾದ್ ಜೋಶಿ
ಬೆಂಗಳೂರು, ಜನವರಿ 15: ಮೈತ್ರಿಕೂಟ 'ಇಂಡಿಯಾ'ದಲ್ಲಿ ಹೊಂದಾಣಿಕೆ ಇಲ್ಲ. ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒಕ್ಕೂಟದಿಂದ ಹೊರ ಬರುವ ವಿಚಾರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸೋತರೇ ಗಾಂಧಿ ಕುಟುಂಬದ ಮೇಲೆ ಬರಬಾರದು, ಬಲಿಪಶು ಮಾಡಲೆಂದೇ ಮಲ್ಲಿಕಾರ್ಜುನ ಖರ್ಗೆ ಅವರನ್ನು 'ಘಮಂಡಿ ಘಟಬಂಧನ್' ನಾಯಕನನ್ನಾಗಿ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.
ಸ್ವಚ್ಛತೀರ್ಥ ಅಭಿಯಾನಕ್ಕೆ ಪ್ರಧಾನಿ ಮೋದಿ ಕರೆ ನೀಡಿದ ಹಿನ್ನೆಲೆಯಲ್ಲಿ ಪ್ರಹ್ಲಾದ್ ಜೋಶಿ ಉಣಕಲ್ ಸಿದ್ದಪ್ಪಜ್ಜ ಮೂಲ ಗದ್ದುಗೆ ಮಠದಲ್ಲಿ ಸ್ವಚ್ಛತೆ ಮಾಡಿದರು. ನಂತರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.

ಘಟಬಂಧನ್. ಮಹಾರಾಷ್ಟ, ಉತ್ತರಪ್ರದೇಶ, ಪಶ್ಚಿಮ ಬಂಗಾಳಗದಲ್ಲಿ ಜಗಳ ಆಡುತ್ತಿದ್ದಾರೆ. ಕೇರಳದಲ್ಲಿ ಕಮ್ಯುನಿಸ್ಟ್ ಸರ್ಕಾರವಿದೆ. ಕಮ್ಯುನಿಸ್ಟ್ ಸರ್ಕಾರ ನಮ್ಮ ಮೇಲೆ ಅತ್ಯಾಚಾರ ಮಾಡುತ್ತಿದೆ, ನಮ್ಮ ಕಾರ್ಯಕರ್ತರನ್ನ ಹೊಡಿಯುತ್ತಿದ್ದಾರೆ ಅಂತ ಅಲ್ಲಿನ ಕಾರ್ಯಕರ್ತರು ಹೇಳುತ್ತಿದ್ದಾರೆ. ನಿಮ್ಮಲ್ಲಿಯೇ ಹೊಂದಾಣಿಕೆ ಇಲ್ಲ ಎಂದು ಮೈತ್ರಿಕೂಟ ಇಂಡಿಯಾಗೆ ಅವರು ಕುಟುಕಿದರು.
ಕಾಂಗ್ರೆಸ್‌ಗೆ ಅಸಹಾಯಕ ಸ್ಥಿತಿ: ಜೋಶಿ ಆರೋಪ
ಕಾಂಗ್ರೆಸ್ ನಾಯಕರ ಅಸಹಾಯಕ ಸ್ಥಿತಿಗೆ ಬಂದಿದ್ದಾರೆ. ಅವರು ಸೋಲುವುದು ಗ್ಯಾರೆಂಟಿ, ಜಗ್ಗೇಶ್ ಬಾಷೆಯಲ್ಲಿ ಹೇಳೋದಾದರೆ ಢಮಾರ್ ಆಗೋದು ಗ್ಯಾರೆಂಟಿ. ಅದಕ್ಕೆ ಮಲ್ಲಿಕಾರ್ಜುನ್ ಖರ್ಗೆಯವರನ್ನು ಬಲಿ ಕೊಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
'ಭಾರತ ನ್ಯಾಯ ಯಾತ್ರೆ'ಗೆ ಬಿಜೆಪಿ ಸರ್ಕಾರದ ರಾಜ್ಯಗಳು ಅನುಮತಿ ನೀಡದ ಆರೋಪ ವಿಚಾರವಾಗಿ ಮಾತನಾಡಿದ ಅವರು ಮಣಿಪುರ ಸರ್ಕಾರ ಅನುಮತಿ ಕೊಟ್ಟಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದ್ದಕ್ಕೆ ಉತ್ತರ ಕೊಟ್ಟಿದ್ದೆ. ರಾಹುಲ್ ಗಾಂಧಿ ಪ್ರಚಾರ ಮಾಡದೇ ಇರುವುದು ದುರ್ದೈವ ಅಂದಿದ್ದೆ. ಅವರು ಹೆಚ್ಚು ಅಡ್ಡಾಡಿದಷ್ಟು ಒಳ್ಳೆಯದು. ಎಲ್ಲೆಲ್ಲಿ ಹೋಗುತ್ತಾರೆ? ಅವರು ಏನು ಅಂತಾ ಜನ ನೋಡುತ್ತಾರೆ. ಅವರಿಗೆ ಎಲ್ಲಾ ವ್ಯವಸ್ಥೆಯನ್ನು ನಾವು ಮಾಡುತ್ತೇವೆ.

ಶೆಟ್ಟರ್ ಮರಳಿ ಪಕ್ಷ ಸೇರ್ಪಡೆ ನನಗೆ ಸಂಬಂಧವಿಲ್ಲ
ಇನ್ನು ಬಿಜೆಪಿಯಿಂದ ಕಾಂಗ್ರೆಸ್ ತೆರಳಿದ್ದ, ಜಗದೀಶ್ ಶೆಟ್ಟರ್ ಘರ್ ವಾಪಸಿ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಚರ್ಚೆ ಮಾಡಿಲ್ಲ, ನನಗೆ ಅದು ಸಂಬಂಧವಿಲ್ಲ ಎಂದು ಜೋಶಿ ಸ್ಪಷ್ಟಪಡಿಸಿದರು.
ರಾಮಮಂದಿರ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ, ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಯಾರು ರಾಜಕಾರಣ ಮಾಡುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಎಲ್ಲರಿಗೂ ಆಹ್ವಾನ ಇತ್ತು, ಸಹಜವಾಗಿ ಬಂದಿದ್ದರೇ ಚರ್ಚೆ ಆಗುತ್ತಿರಲಿಲ್ಲ. ಎಲ್ಲಿ ವೋಟ್ ಸಿಗುತ್ತದೆ ಅಲ್ಲಿಗೆ ಹೋಗುವ ವಿಚಾರ ಕಾಂಗ್ರೆಸ್ನದ್ದು ಎಂದರು.
ಜವಾಬ್ದಾರಿಯುತ ಸ್ಥಾನದಲ್ಲಿರುವವರು ಆ ರೀತಿ ಮಾತನಾಡಬಾರದು. ರಾಜಕಾರಣ ಮಾಡುತ್ತಿರುವುದು ಕಾಂಗ್ರೆಸ್ನವರೇ. ಅಯೋಧ್ಯೆಗೆ ಕಾಂಗ್ರೆಸ್ಸಿಗರು ಬಂದರೇ ಸಂತೋಷ, ಬರದಿದ್ದರೂ ಸಂತೋಷ.
ಹಾವೇರಿ ಪ್ರಕರಣದಲ್ಲಿ ತುಷ್ಟಿಕರಣದ ವಾಸನೆ
ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ರಾಜ್ಯ ಸರ್ಕಾರ ತುಷ್ಟೀಕರಣ ರಾಜಕಾರಣ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ. ಸರ್ಕಾರ ಯಾರನ್ನೋ ರಕ್ಷಿಸಲು ಹೊರಟಿದೆ ಅನ್ನೋದು ಕಾಣುತ್ತಿದೆ. ದಕ್ಷ ಅಧಿಕಾರಿಗಳನ್ನು ನೇಮಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.
ಅನ್ಯಜಾತಿಯವರು ಮಾಡಿದ್ದರೆ ಇದು ದೊಡ್ಡದಾಗುತ್ತಿತ್ತು. ಆಕೆ ನಮ್ಮ ಸಮುದಾಯದವರೇ ಕೃತ್ಯವೆಸಗಿದ್ದಾರೆಂದು ಹೇಳಿದ್ದಾಳೆ. ಇದರಲ್ಲಿ ತುಷ್ಟೀಕರಣ ರಾಜಕಾರಣದ ವಾಸನೆ ಇದೆ. ಯಾವುದೇ ಜಾತಿಯವರು ಇದ್ದರೂ ಅಪರಾಧಿಗಳು ಅಪರಾಧಿಗಳೇ. ಸರ್ಕಾರ ಇದರಲ್ಲಿ ತಮ್ಮ ನಿಯತ್ತನ್ನು ತೋರಿಸಲಿ ಎಂದು ಅವರು ಒತ್ತಾಯಿಸಿದರು.












Click it and Unblock the Notifications