ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಲಿದ್ದಾರೆ: ಆರ್‌. ಅಶೋಕ್ ಭವಿಷ್ಯ?

ಬೆಂಗಳೂರು, ಆಗಸ್ಟ್ 14: ರಾಜ್ಯದಲ್ಲಿ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆ, ಸ್ಥಗಿತಗೊಳ್ಳುವ ಕುರಿತು ಮತ್ತೆ ಚರ್ಚೆಗಳು ಶುರುವಾಗಿದೆ. ಕಾಂಗ್ರೆಸ್‌ ಸರ್ಕಾರವು ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ ನುಡಿದರು.

ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿ ಎಂದರು.

BJP Prediction About 5 Guarantees schemes of Karnataka Congress Government

ಬೆಂಗಳೂರಿಗೆ ನಿಗದಿಯಾದ ಅನುದಾನಗಳನ್ನು ಈ ಹಿಂದೆಯೂ ವಾಪಸ್‌ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಲಾಗಿದೆ. ಬಿಬಿಎಂಪಿ ಅನುದಾನ ಬಿಟ್ಟು, ಬಿಜೆಪಿ ಸರ್ಕಾರ 8-9 ಸಾವಿರ ಕೋಟಿ ರೂ. ನೀಡಿತ್ತು. ಈಗ ಸರ್ಕಾರ ಪಾಪರ್‌ ಆಗಿದೆ ಎಂದು ಲೇವಡಿ ಮಾಡಿದರು.

ಜನ ಔಷಧಿ ಯೋಜನೆ ಕೇಂದ್ರ ಸರ್ಕಾರದ್ದು. ಇದರಿಂದ ಅತಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವರಿಗೆ ಲಾಬಿಗಳು ತಲೆ ಸವರಿದೆ. ಆದ್ದರಿಂದ ಇಂತಹ ಕೆಲಸ ಮಾಡಲು ಹೊರಟಿದ್ದಾರೆ. ಇವರಿಗೆ ಕಮಿಶನ್‌ ಸಿಗಲಿದೆ ಎಂಬ ಕಾರಣಕ್ಕೆ ಜನರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಪಾದಯಾತ್ರೆ ಯಶಸ್ವಿಯಾಗಿದೆ

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಉತ್ತಮವಾಗಿ ಬಿಜೆಪಿ ಸಾಮೂಹಿಕ ನಾಯಕತ್ವದಲ್ಲಿ ಪಾದಯಾತ್ರೆ ನಡೆದಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ನನಗೆ ಕರೆ ಮಾಡಿ, ಈ ಪಾದಯಾತ್ರೆಯಲ್ಲಿ ಎಲ್ಲರೂ ಭಾಗವಹಿಸಿ ಎಂದು ಹೇಳಿದ್ದರು.

BJP Prediction About 5 Guarantees schemes of Karnataka Congress Government

ಪಾದಯಾತ್ರೆ ಯಶಸ್ವಿಯಾಗಿರುವುದರಿಂದಲೇ ಕಾಂಗ್ರೆಸ್‌ ನಾಯಕರು ಭಯಕ್ಕೊಳಗಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಸರ್ಕಾರದ ಎರಡು ಹಗರಣಗಳ ವಿರುದ್ಧ ಪಾದಯಾತ್ರೆಯ ಜೊತೆಗೆ, ಕೆಲವರು ರಾಜಭವನಕ್ಕೂ ದೂರು ಸಲ್ಲಿಸಿದ್ದಾರೆ.

ಬಿಜೆಪಿಯ ಭಿನ್ನಮತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಬೆಳವಣಿಗೆಯನ್ನು ಕೇಂದ್ರದ ನಾಯಕರ ಗಮನಕ್ಕೆ ತರುತ್ತೇನೆ. ಈಗಾಗಲೇ ಕೇಂದ್ರದ ನಾಯಕರು ಇದನ್ನು ಗಮನಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಜಕೀಯ ಪಕ್ಷವಲ್ಲ. ಆದ್ದರಿಂದ ರಾಜಕೀಯದ ಸಭೆ ಮಾಡುವ ಪದ್ಧತಿ ಸಂಘದಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರದ ಒಪ್ಪಿದರೆ ಬಳ್ಳಾರಿ ಪಾದಯಾತ್ರೆಯಲ್ಲಿ ಭಾಗಿ

ಬಳ್ಳಾರಿ ಪಾದಯಾತ್ರೆಗೆ ಕೇಂದ್ರದ ನಾಯಕರು ಒಪ್ಪಿಗೆ ನೀಡಿದರೆ ನಾವು ಕೂಡ ಅದರಲ್ಲಿ ಭಾಗವಹಿಸುತ್ತೇವೆ. ಸಣ್ಣ ಪುಟ್ಟ ವ್ಯತ್ಯಾಸ ಇರುವುದು ನನ್ನ ಗಮನಕ್ಕೂ ಬಂದಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಮೊದಲಾದವರನ್ನು ಕೇಂದ್ರದ ನಾಯಕರು ಕರೆಸಿ ಈ ಹಿಂದೆಯೂ ಚರ್ಚೆ ಮಾಡಿದ್ದಾರೆ. ಈ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯ ಮಾಡುತ್ತೇವೆ. ಜನರು ಕೂಡ ನಮ್ಮಿಂದ ಅದನ್ನೇ ನಿರೀಕ್ಷೆ ಮಾಡುತ್ತಾರೆ ಎಂದು ಹೇಳಿದರು.

ಸಿ.ಪಿ.ಯೋಗೇಶ್ವರ್‌ ಅವರ ಮನೆಗೆ ಹೋಗಿ ಚರ್ಚೆ ಮಾಡಲಾಗಿದೆ. ಅವರಿಗೆ ಟಿಕೆಟ್‌ ನೀಡುವ ಬಗ್ಗೆ ಎನ್‌ಡಿಎ ನಿರ್ಧಾರ ಮಾಡಬೇಕಿದ್ದು, ಆ ಬಗ್ಗೆಯೂ ಮನವರಿಕೆ ಮಾಡಿಕೊಡುತ್ತೇವೆ. ಬಂಡಾಯ ಸ್ಪರ್ಧೆ ಮಾಡುವುದು ಸರಿಯಲ್ಲ. ಏಕ ಅಭ್ಯರ್ಥಿ ಸ್ಪರ್ಧಿಸುವಂತೆ ಮಾಡಲು ಎಲ್ಲ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+