ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಾಜ್ಯ ಪ್ರವಾಸ ಮುಂದೂಡಿಕೆ

ಬೆಂಗಳೂರು, ಜನವರಿ 07 : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕರ್ನಾಟಕ ಪ್ರವಾಸ ಮುಂದೂಡಿಕೆಯಾಗಿದೆ. ಜನವರಿ 9ರಂದು ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಾಗಿತ್ತು.

ಅಮಿತ್ ಶಾ ಅವರು ಜನವರಿ 9ರಂದು ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ತುಮಕೂರಿನಲ್ಲಿ ನಡೆಯುವ ಪಕ್ಷದ ಕಾರ್ಯಕಾರಣಿ ಸಭೆ, ವಿವಿಧ ಸಭೆಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ರಾಜ್ಯ ಭೇಟಿ ಮುಂದಕ್ಕೆ ಹೋಗಿದೆ.

ಸಂಸತ್‌ನ ಚಳಿಗಾಲದ ಅಧಿವೇಶನ ವಿಸ್ತರಣೆಯಾಗಿದೆ. ರಾಜ್ಯಸಭಾ ಸದಸ್ಯರೂ ಅಗಿರುವ ಅಮಿತ್ ಶಾ ಅವರು ಅಧಿವೇಶನದಲ್ಲಿ ಪಾಲ್ಗೊಳ್ಳಬೇಕಿದೆ. ಆದ್ದರಿಂದ, ಕರ್ನಾಟಕ ಭೇಟಿಯನ್ನು ಮುಂದೂಡಲಾಗಿದೆ.

Amit Shah

ಸಂಸತ್ ಅಧಿವೇಶನ ಮುಗಿದ ಬಳಿಕ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸುವ ದಿನಾಂಕವನ್ನು ಅಂತಿಮಗೊಳಿಸಲಾಗುತ್ತದೆ. ಲೋಕಸಭಾ ಚುನಾವಣೆ ಸಿದ್ಧತೆಗಳ ಕುರಿತು ಅವರು ರಾಜ್ಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ಕರ್ನಾಟಕ ಬಿಜೆಪಿ ರಾಜ್ಯದ 28 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಿದೆ. ಪಟ್ಟಿ ಬಗ್ಗೆ ಅಮಿತ್ ಶಾ ಅವರ ಜೊತೆ ರಾಜ್ಯ ನಾಯಕರು ಚರ್ಚೆ ನಡೆಸಲಿದ್ದಾರೆ.

ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶವನ್ನು ರಾಜ್ಯದಲ್ಲಿ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ಈ ಸಮಾವೇಶದ ಬಗ್ಗೆಯೂ ಅಮಿತ್ ಶಾ ಅವರು ಸಭೆಗಳನ್ನು ನಡೆಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+