ಚನ್ನಗಿರಿಯಿಂದ ಸ್ಪರ್ಧಿಸಲು ಒತ್ತಡ ಹೇರುತ್ತಿರುವ ಬಿಜೆಪಿ: ಜೆಡಿಯು ಅಧ್ಯಕ್ಷ ಮಹಿಮಾ ಪಟೇಲ್ ಸ್ಪೋಟಕ ಮಾಹಿತಿ

ಬಿಜೆಪಿಯು ಮಧ್ಯ ಕರ್ನಾಟಕದ ಲಿಂಗಾಯತ ಮುಖಂಡರನ್ನು ಸೆಳೆಯಲು ಯತ್ನ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ

ಚನ್ನಗಿರಿ, ಮಾರ್ಚ್‌ 17: ಕರ್ನಾಟಕ ಚುನಾವಣೆ ಹತ್ತಿರವಾಗುತ್ತಿದಂತೆ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಜೆಡಿಎಸ್‌ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ತುರಾತುರಿಯಲ್ಲಿದೆ. ಗೆಲ್ಲುವ ಅಭ್ಯರ್ಥಿಗಳಿಗಾಗಿ ಬಿಜೆಪಿ ಹುಡುಕಾಟ ನಡೆಸಿದೆ. ಬಿಜೆಪಿ ಹೆಚ್ಚಾಗಿ ಲಿಂಗಾಯತರ ಮುಖಂಡರ ಮೇಲೆ ಕಣ್ಣಿಟ್ಟಿದೆ ಎಂದು ಹೇಳಲಾಗುತ್ತಿದೆ.

 ಲಿಂಗಾಯರ ಮುಖಂಡರನ್ನು ಸೆಳೆಯಲು ಬಿಜೆಪಿ ಯತ್ನ

ಲಿಂಗಾಯರ ಮುಖಂಡರನ್ನು ಸೆಳೆಯಲು ಬಿಜೆಪಿ ಯತ್ನ

ಇದರ ಭಾಗವಾಗಿ ಬಿಜೆಪಿಯು ಮಧ್ಯ ಕರ್ನಾಟಕದ ಲಿಂಗಾಯತ ಮುಖಂಡರನ್ನು ಸೆಳೆಯಲು ಯತ್ನ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಚನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ವಿವಾದ ಮಧ್ಯ ಕರ್ನಾಟಕದಲ್ಲಿ ಕೇಸರಿ ಪಡೆಗೆ ದೊಡ್ಡ ಹಿನ್ನೆಡೆ ಮಾಡಿದೆ ಎಂಬ ಮಾತುಗಳನ್ನು ರಾಜಕೀಯ ಪಂಡಿತರು ಹೇಳಿದ್ದಾರೆ.

 ಮಹಿಮಾ ಪಟೇಲ್ ಸ್ಪೋಟಕ ಮಾಹಿತಿ

ಮಹಿಮಾ ಪಟೇಲ್ ಸ್ಪೋಟಕ ಮಾಹಿತಿ

ಮಧ್ಯ ಕರ್ನಾಟಕ ಭಾಗದ ಲಿಂಗಾಯತ ಮುಖಂಡ ಹಾಗೂ ರಾಜ್ಯ ಜೆಡಿಯು ಅಧ್ಯಕ್ಷ ಮಹಿಮಾ ಪಟೇಲರನ್ನು ಸೆಳೆಯಲು ಬಿಜೆಪಿ ಯತ್ನಿಸಿದೆ. ಈ ಬಗ್ಗೆ ಮಾತನಾಡಿರುವ ಅವರು, 'ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚನ್ನಗಿರಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಕೇಳಿಕೊಂಡಿದ್ದಾರೆ' ಎಂದು ರಾಜ್ಯ ಜೆಡಿಯು ಅಧ್ಯಕ್ಷ ಮಹಿಮಾ ಜೆ ಪಟೇಲ್ ಹೇಳಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದೂ ಅವರು ತಿಳಿಸಿದ್ದಾರೆ.

 ಬಿಜೆಪಿ ನಾಯಕರ ಒತ್ತಡ

ಬಿಜೆಪಿ ನಾಯಕರ ಒತ್ತಡ

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಜೆಎಚ್ ಪಟೇಲ್ ಅವರ ಪುತ್ರ ಮಹಿಮಾ ಪಟೇಲ್, 'ಚನ್ನಗಿರಿಯಿಂದ ಪಕ್ಷದ ಅಭ್ಯರ್ಥಿಯಾಗುವಂತೆ ಬಿಜೆಪಿ ನಾಯಕರು ನನ್ನ ಮೇಲೆ ಒತ್ತಡ ಹೇರಿದ್ದಾರೆ. ಆದರೆ ನನ್ನ ಸಿದ್ಧಾಂತವು ಬಿಜೆಪಿಯೊಂದಿಗೆ ಹೊಂದಿಕೆಯಾಗುವುದಿಲ್ಲ. ಹಾಗಾಗಿ ನನ್ನಂತಹವರಿಗೆ ಅಲ್ಲಿ ಧ್ವನಿ ಇರುವುದಿಲ್ಲ. ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವವಿಲ್ಲ. ಹಾಗಾಗಿ ನಾನು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ' ಎಂದು ಅವರು ಹೇಳಿದ್ದಾರೆ.

 ಕಾಂಗ್ರೆಸ್‌, ಜೆಡಿಎಸ್‌ನಿಂದಲೂ ಮನವಿ

ಕಾಂಗ್ರೆಸ್‌, ಜೆಡಿಎಸ್‌ನಿಂದಲೂ ಮನವಿ

ಚನ್ನಗಿರಿ ಕ್ಷೇತ್ರದಿಂದ ಚುನಾವಣೆ ಎದುರಿಸಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮುಖಂಡರು ಕೂಡ ತಮ್ಮನ್ನು ಸಂಪರ್ಕಿಸಿದ್ದಾರೆ ಎಂದು ಮಹಿಮಾ ಪಟೇಲ್‌ ಹೇಳಿದ್ದಾರೆ. ಆದರೆ, ವಿಧಾನಸಭೆ ಚುನಾವಣೆ ಎದುರಿಸುವ ಕುರಿತು ನಾನು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಂಬರುವ ಚುನಾವಣೆಯಲ್ಲಿ ಜೆಡಿಯು 50 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದರು.

 ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಗ್ಗೆ ಹೇಳಿಕೆ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಗ್ಗೆ ಹೇಳಿಕೆ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಆರೋಪ ಮತ್ತು ಲೋಕಾಯುಕ್ತ ದಾಳಿಯನ್ನು ಉಲ್ಲೇಖಿಸಿದ ಅವರು, ಇದು ಕೇವಲ ಚನ್ನಗಿರಿಗೆ ಸೀಮಿತವಾಗಿಲ್ಲ. ವ್ಯವಸ್ಥೆಯಲ್ಲಿ ಸುಧಾರಣೆ ತರುವ ಅಗತ್ಯವಿದೆ. ಜನರು ತಮ್ಮ ಆಲೋಚನೆಗಳು ಮತ್ತು ಆಕಾಂಕ್ಷೆಗಳನ್ನು ಬದಲಾಯಿಸಬೇಕಾಗಿದೆ ಎಂದು ತಿಳಿಸಿದ್ದಾರೆ. ಮಾಡಾಳ್‌ ವಿರೂಪಾಕ್ಷಪ್ಪ ಬಿಜೆಪಿ ಶಾಸಕರಾಗಿದ್ದು, ಕಳೆದ ವಾರ ಲಂಚ ಪ್ರಕರಣದಲ್ಲಿ ಸಿಕ್ಕು ಹಾಕಿಕೊಂಡಿದ್ದಾರೆ. ಇದು ವಿರೋಧ ಪಕ್ಷಗಳ ವ್ಯಾಪಕ ಟೀಕೆಗಳಿಗೆ ಕಾರಣವಾಗಿತ್ತು.

 ಸಮಾನ ಮನಸ್ಕ ಸಂಘಟನೆಗಳೊಂದಿಗೆ ಚರ್ಚೆ

ಸಮಾನ ಮನಸ್ಕ ಸಂಘಟನೆಗಳೊಂದಿಗೆ ಚರ್ಚೆ

ಈಗಾಗಲೇ ಸಮಾನ ಮನಸ್ಕ ಸಂಘಟನೆಗಳು ಮತ್ತು 2,000 ಕ್ಕೂ ಹೆಚ್ಚು ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ರಾಜಕೀಯದಲ್ಲಿ ಹೊಸ ಧ್ವನಿ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

 ದಾವಣಗೆರೆ ಜಿಲ್ಲೆಯಲ್ಲಿ ಜೆಡಿಯು ಸ್ಪರ್ಧೆ

ದಾವಣಗೆರೆ ಜಿಲ್ಲೆಯಲ್ಲಿ ಜೆಡಿಯು ಸ್ಪರ್ಧೆ

ದಾವಣಗೆರೆ ಜಿಲ್ಲೆಯಲ್ಲಿ ದಾವಣಗೆರೆ ದಕ್ಷಿಣ, ದಾವಣಗೆರೆ ಉತ್ತರ ಮತ್ತು ಮಾಯಕೊಂಡ ಕ್ಷೇತ್ರಗಳಲ್ಲಿ ಪಕ್ಷವು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದರು. ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಗತಿಯಲ್ಲಿದ್ದು, ಮಾರ್ಚ್ ಕೊನೆಯ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. ಮಾಜಿ ಶಾಸಕ ಮಹಿಮಾ ಜೆ ಪಟೇಲ್ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜೆ.ಎಚ್ ಪಟೇಲ್ ಅವರ ಪುತ್ರರಾಗಿದ್ದಾರೆ. ಕರ್ನಾಟಕದಲ್ಲಿ ಜನತಾ ದಳ (ಯುನೈಟೆಡ್) ಪಕ್ಷದ ಮುಖ್ಯಸ್ಥರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+