ಕೆಜೆ ಜಾರ್ಜ್ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದೂಡಿಕೆ?

Posted By: Gururaj
Subscribe to Oneindia Kannada
   ಕೆಜೆ ಜಾರ್ಜ್ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದೂಡಿಕೆ? | Oneindia Kannada

   ಬೆಂಗಳೂರು, ಅಕ್ಟೋಬರ್ 27 : ಸಚಿವ ಕೆ.ಜೆ.ಜಾರ್ಜ್ ವಿರುದ್ಧ ನಡೆಸಬೇಕಿದ್ದ ಪ್ರತಿಭಟನೆಯನ್ನು ಕರ್ನಾಟಕ ಬಿಜೆಪಿ ಮುಂದೂಡಿದೆ?. ಶುಕ್ರವಾರ ಬಿಜೆಪಿ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಒಂದು ದಿನದ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು.

   ಸಿಎಂಗೆ ನಾಚಿಕೆ ಮಾನ ಮರ್ಯಾದೆ ಇದ್ರೆ, ಜಾರ್ಜ್ ರಾಜೀನಾಮೆ ಪಡೆಯಲಿ'

   ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪಿಯೂಷ್ ಗೋಯೆಲ್ ಸಲಹೆಯಂತೆ ಪ್ರತಿಭಟನೆಯನ್ನು ಮುಂದೂಡಲಾಗಿದೆ. ಒಂದು ದಿನದ ಪ್ರತಿಭಟನೆ ನಡೆಸುವ ಬದಲು ತೀವ್ರ ಹೋರಾಟದ ರೂಪುರೇಷೆ ರೂಪಿಸುವಂತೆ ಅವರು ಸಲಹೆ ನೀಡಿದ್ದಾರೆ. ಆದ್ದರಿಂದ ಪ್ರತಿಭಟನೆ ಮುಂದೂಡಲಾಗಿದೆ.

   BJP protest against minister KJ George postponed

   ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಲಾಗಿದೆ. ಸಿಬಿಐ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದೆ. ಆದ್ದರಿಂದ, ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಒಂದು ದಿನದ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿತ್ತು.

   ಎಂಕೆ ಗಣಪತಿ ಸಾವಿನ ಪ್ರಕರಣ : ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಫ್ ಐಆರ್

   ನವೆಂಬರ್ 14ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಆದ್ದರಿಂದ, ಸಚಿವರ ವಿರುದ್ಧ ಹೋರಾಟ ಆರಂಭಿಸಿ ಅಧಿವೇಶನದಲ್ಲಿಯೂ ಈ ವಿಚಾರದ ಬಗ್ಗೆ ಹೋರಾಟ ನಡೆಸಲು ಬಿಜೆಪಿ ಯೋಜನೆ ರೂಪಿಸುತ್ತಿದೆ. ಆದ್ದರಿಂದ, ಒಂದು ದಿನದ ಸಾಂಕೇತಿಕ ಹೋರಾಟ ಮುಂದೂಡಲಾಗಿದೆ.

   ಸಚಿವರ ಜೊತೆ ಸಭೆ : ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವರ ಜೊತೆ ಸಭೆ ನಡೆಸಲಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Karnataka BJP protest postponed. BJP plan for a one day protest aganist Minister for urban planning and development K.J.George after CBI FIR filed against him in MK Ganapati suicide case. ಕೆಜೆ ಜಾರ್ಜ್ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದೂಡಿಕೆ?

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ