ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಜೆ ಜಾರ್ಜ್ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದೂಡಿಕೆ?

|
Google Oneindia Kannada News

Recommended Video

ಕೆಜೆ ಜಾರ್ಜ್ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದೂಡಿಕೆ? | Oneindia Kannada

ಬೆಂಗಳೂರು, ಅಕ್ಟೋಬರ್ 27 : ಸಚಿವ ಕೆ.ಜೆ.ಜಾರ್ಜ್ ವಿರುದ್ಧ ನಡೆಸಬೇಕಿದ್ದ ಪ್ರತಿಭಟನೆಯನ್ನು ಕರ್ನಾಟಕ ಬಿಜೆಪಿ ಮುಂದೂಡಿದೆ?. ಶುಕ್ರವಾರ ಬಿಜೆಪಿ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಒಂದು ದಿನದ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು.

ಸಿಎಂಗೆ ನಾಚಿಕೆ ಮಾನ ಮರ್ಯಾದೆ ಇದ್ರೆ, ಜಾರ್ಜ್ ರಾಜೀನಾಮೆ ಪಡೆಯಲಿ'ಸಿಎಂಗೆ ನಾಚಿಕೆ ಮಾನ ಮರ್ಯಾದೆ ಇದ್ರೆ, ಜಾರ್ಜ್ ರಾಜೀನಾಮೆ ಪಡೆಯಲಿ'

ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪಿಯೂಷ್ ಗೋಯೆಲ್ ಸಲಹೆಯಂತೆ ಪ್ರತಿಭಟನೆಯನ್ನು ಮುಂದೂಡಲಾಗಿದೆ. ಒಂದು ದಿನದ ಪ್ರತಿಭಟನೆ ನಡೆಸುವ ಬದಲು ತೀವ್ರ ಹೋರಾಟದ ರೂಪುರೇಷೆ ರೂಪಿಸುವಂತೆ ಅವರು ಸಲಹೆ ನೀಡಿದ್ದಾರೆ. ಆದ್ದರಿಂದ ಪ್ರತಿಭಟನೆ ಮುಂದೂಡಲಾಗಿದೆ.

BJP protest against minister KJ George postponed

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಲಾಗಿದೆ. ಸಿಬಿಐ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲು ಮಾಡಿದೆ. ಆದ್ದರಿಂದ, ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಒಂದು ದಿನದ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿತ್ತು.

ಎಂಕೆ ಗಣಪತಿ ಸಾವಿನ ಪ್ರಕರಣ : ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಫ್ ಐಆರ್ಎಂಕೆ ಗಣಪತಿ ಸಾವಿನ ಪ್ರಕರಣ : ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಫ್ ಐಆರ್

ನವೆಂಬರ್ 14ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಆದ್ದರಿಂದ, ಸಚಿವರ ವಿರುದ್ಧ ಹೋರಾಟ ಆರಂಭಿಸಿ ಅಧಿವೇಶನದಲ್ಲಿಯೂ ಈ ವಿಚಾರದ ಬಗ್ಗೆ ಹೋರಾಟ ನಡೆಸಲು ಬಿಜೆಪಿ ಯೋಜನೆ ರೂಪಿಸುತ್ತಿದೆ. ಆದ್ದರಿಂದ, ಒಂದು ದಿನದ ಸಾಂಕೇತಿಕ ಹೋರಾಟ ಮುಂದೂಡಲಾಗಿದೆ.

ಸಚಿವರ ಜೊತೆ ಸಭೆ : ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವರ ಜೊತೆ ಸಭೆ ನಡೆಸಲಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ.

English summary
Karnataka BJP protest postponed. BJP plan for a one day protest aganist Minister for urban planning and development K.J.George after CBI FIR filed against him in MK Ganapati suicide case. ಕೆಜೆ ಜಾರ್ಜ್ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದೂಡಿಕೆ?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X