ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಿನೇಶ್ ಗುಂಡೂರಾವ್ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಭಾರೀ ಪ್ರತಿಭಟನೆ

By Sachhidananda Acharya
|
Google Oneindia Kannada News

ಬೆಂಗಳೂರು, ಏಪ್ರಿಲ್ 15: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಏಕವಚನ ಬಳಸಿ ವಾಗ್ದಾಳಿ ನಡೆಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮೇಲೆ ಬಿಜೆಪಿ ಕೆಂಡಕಾರಲು ಆರಂಭಿಸಿದೆ. ದಿನೇಶ್ ಗುಂಡೂರಾವ್ ಅವರನ್ನು ವಜಾಗೊಳಿಸಿ ಎಂದು ಆಗ್ರಹಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಚುನಾವಣಾ ಆಯೋಗಕ್ಕೆ ದಿನೇಶ್ ಗುಂಡೂರಾವ್ ವಿರುದ್ಧ ದೂರು ಕೂಡ ಸಲ್ಲಿಸಿದ್ದಾರೆ. ಇದೇ ವೇಳೆ ಗುಂಡೂರಾವ್ ಮಾತನಾಡಿದ್ದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತೀವ್ರವಾಗಿ ಖಂಡಿಸಿದ್ದಾರೆ.

ಯೋಗಿ ಬಗ್ಗೆ ದಿನೇಶ್ ಹೇಳಿಕೆಗೆ ಬಿಜೆಪಿ ಖಂಡನೆಯೋಗಿ ಬಗ್ಗೆ ದಿನೇಶ್ ಹೇಳಿಕೆಗೆ ಬಿಜೆಪಿ ಖಂಡನೆ

"ದಿನೇಶ್ ಅವರ ಮಾತು ನನಗೆ ತೀವ್ರ ಆಘಾತ ತಂದಿದೆ. ಮುಖ್ಯಮಂತ್ರಿ ಹಾಗೂ ನಾಥ ಪಂಥದ ಸಂತರಿಗೆ ನೀಡುವ ಮರ್ಯಾದೆ ಇದಲ್ಲ. ಇದರಿಂದ ಕರ್ನಾಟಕದಲ್ಲಿರುವ ಲಕ್ಷಾಂತರ ನಾಥ ಪಂಥ ಅನುಯಾಯಿಗಳಿಗೆ ತೀವ್ರ ಅವಮಾನವಾಗಿದೆ. ದಿನೇಶರ ಕಾಂಗ್ರೆಸ್ ನ ಸಂಸ್ಕೃತಿಯನ್ನು ಕಟುವಾಗಿ ಖಂಡಿಸುತ್ತೇವೆ," ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಉನ್ನಾವೋ ಮತ್ತು ಕಥುವಾ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಮೇಣದಬತ್ತಿ ಹಿಡಿದು ಪ್ರತಿಭಟನೆ ಮಾಡುತ್ತಾ ದಿನೇಶ್ ಗುಂಡೂರಾವ್, "ಯೋಗಿ ಅವರು ಢೋಂಗಿ, ಅವರನ್ನು ಸಿಎಂ ಸ್ಥಾನದಿಂದ ಪ್ರಧಾನಿ ಕೂಡಲೇ ಕಿತ್ತು ಹಾಕಬೇಕು. ಜಮ್ಮು ಹಾಗೂ ಉತ್ತರ ಪ್ರದೇಶದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳನ್ನು ಕೆಪಿಸಿಸಿ ತೀವ್ರವಾಗಿ ಖಂಡಿಸುತ್ತದೆ," ಎಂದು ಗುಂಡೂರಾವ್ ಹೇಳಿದ್ದರು.

ಮುಂದುವರಿದು ಮಾತನಾಡಿದ್ದ ಅವರು 'ಯೋಗಿ ಆದಿತ್ಯನಾಥ್ ಅವರು ಕರ್ನಾಟಕಕ್ಕೆ ಬಂದರೆ, ವಾಪಸ್ ಕಳಿಸಿ. ಚಪ್ಪಲಿಯನ್ನು ಹೊಡೆದು ಹೊರಕ್ಕೆ ಹಾಕಿ" ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

BJP protests against Congress leader Dinesh Gunduraos inciting remarks on Yogi

ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈ ಸಂಬಂಧ ಕ್ಷಮೆಯಾಚಿಸಬೇಕು. ದಿನೇಶ್ ಗುಂಡೂರಾವ್ ಅವರನ್ನು ವಜಾಗೊಳಿಸಿ, ಇಲ್ಲದಿದ್ದರೆ ರಾಜ್ಯವ್ಯಾಪ್ತಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

English summary
BJP protest in Bengaluru against Congress leader Dinesh Gundurao's 'inciting remarks' on UP CM Yogi Adityanath. BJP State General Secretary N Ravikumar has also complained to EC against Dinesh Gundu Rao.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X