BJP Protests: ಶಾಸಕರ ಅಮಾನತು, ಐಎಎಸ್ ಅಧಿಕಾರಿಗಳ ದುರ್ಬಳಕೆ; ಸರ್ಕಾರದ ವಿರುದ್ದ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಬೆಂಗಳೂರು, ಜುಲೈ 22: ವಿಧಾನಸಭೆಯಲ್ಲಿ ಹತ್ತು ಮಂದಿ ಶಾಸಕರ ಅಮಾನತು ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ಸಭೆಗೆ ಆಗಮಿಸಿದ ರಾಜಕೀಯ ಪಕ್ಷಗಳ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳ ಬಳಕೆ ಮಾಡಿರುವುದನ್ನ ವಿರೋಧಿಸಿ ರಾಜ್ಯ ಬಿಜೆಪಿ ರಾಜ್ಯಾಧ್ಯಂತ ಪ್ರತಿಭಟನೆ ನಡೆಸುತ್ತಿದೆ.
ಶನಿವಾರ ನಗರದ ಫ್ರೀಡಂ ಪಾರ್ಕ್‌ನಲ್ಲೂ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದರು. ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಸ್ಪೀಕರ್ ಪೀಠಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿತ್ತು. ಹತ್ತು ಮಂದಿ ಸದಸ್ಯರನ್ನು ಎರಡು ದಿನಗಳ ಕಾಲ ಅಧಿವೇಶನಕ್ಕೆ ಅಮಾನತು ಮಾಡಿರುವುದನ್ನ ಖಂಡಿಸಿ ರಾಜ್ಯ ಬಿಜೆಪಿ ಪ್ರತಿಭಟನೆ ನಡೆಸಿತು.

ಇನ್ನೂ ಸ್ವೀಕರ್ ಯು ಟಿ ಖಾದರ್ ಅವರ ವಿರುದ್ದ ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದ್ದು, ಇಂದು(ಶನಿವಾರ) ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ಮಾತನಾಡಿ, ದಲಿತರ ಪರ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದಲಿತರ ಬಗ್ಗೆ ಕಾಳಜಿ ಇದ್ರೆ ದಲಿತರಿಗೆ ಸಿಎಂ ಸ್ಥಾನ ಬಿಟ್ಟು ಕೊಡಲಿ. ತಾಖತ್ ಇದ್ರೆ ಪರಮೇಶ್ವರ್ ಅಥವಾ ಮಲ್ಲಿಕಾರ್ಜುನ ಖರ್ಗೆಯನ್ನ ಮುಖ್ಯಮಂತ್ರಿ ಮಾಡಿ ಎಂದು ಸವಾಲು ಹಾಕಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಬಡವರ ವಿರೋಧಿ. ಆಟೋ ಡ್ರೈವರ್ ಗಳ ಜೀವನ ಬೀದಿಗೆ ಬಂದಿದೆ, ಆಟೋ ದವರ ಬಗ್ಗೆ ಕಾಳಜಿ ಇದ್ರೆ ಪ್ರತಿ ತಿಂಗಳು ಐದು ಸಾವಿರವನ್ನ ಕೊಡಿ. ಅಲ್ಲದೇ ವಿದ್ಯುತ್ ಬಿಲ್‌ಹೆಚ್ಚಳವನ್ನ ಮಾಡಿದ್ದಾರೆ. 200ಯುನಿಟ್‌ವರೆಗೂ ಫ್ರೀ ಕೊಡ್ತಿವಿ ಎಂದಿದ್ದರು. ಆದರೆ, ಈಗ ಕಂಡಿಷನ್ ಹಾಕಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು.
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀವ್ರವಾಗಿ ಕುಸಿದಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ 48 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 12 ಕೊಲೆಗಳು ನಡೆದಿವೆ. ವಿದ್ಯುತ್ ಸೇರಿದಂತೆ ಜೀವನಾವಶ್ಯಕ ಬೆಲೆಗಳು ತೀವ್ರವಾಗಿ ಹೆಚ್ಚಾಗಿದ್ದು, ಜನರು ಜೀವನ ಮಾಡುವುದೇ ದುಸ್ತರವಾಗಿದೆ. ರಾಜ್ಯ ಸರಕಾರದ ಬಜೆಟ್ ಅಲ್ಪಸಂಖ್ಯಾತರ ಪರ ಮಾತ್ರವಲ್ಲ; ಹಿಂದೂಗಳ ವಿರೋಧಿ, ರೈತ ವಿರೋಧಿ, ನೀರಾವರಿ ವಿರೋಧಿ ಮತ್ತು ಶಿಕ್ಷಣ ವಿರೋಧಿಯಾಗಿದೆ ಎಂದು ಹೇಳಿದರು.
ಇನ್ನೂ ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಗೌಡ ಅವರು ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಯತೀಂದ್ರ ಸಿದ್ದರಾಮಯ್ಯ ಶಾಡೋ ಮುಖ್ಯಮಂತ್ರಿಯಾಗಿದ್ದಾರೆ. ಎಲ್ಲೋ ಕೂತು ಭೈರತಿ ಸುರೇಶ್, ಯತೀಂದ್ರ ಸಿದ್ದರಾಮಯ್ಯ ವರ್ಗಾವಣೆ ಕೆಲಸ ಮಾಡ್ತಾರೆ. ಕೋಟ್ಯಂತರ ಹಣ ಮಾಡ್ತಿದಾರೆ ಎಂದು ಗಂಭೀರವಾಗಿ ಆರೋಪಿಸಿದರು.
ಇನ್ನೂ ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಶ್ವತ್ಥ ನಾರಾಯಣ, ವಿಧಾನಪರಿಷತ್ ರಾದ ಎನ್ ರವಿ ಕುಮಾರ್, ಛಲವಾದಿ ನಾರಾಯಣ ಸ್ವಾಮಿ, ಮಾಜಿ ಶಾಸಕರು ಹಾಗೂ ಇತರ ಮುಖಂಡರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.












Click it and Unblock the Notifications