ಸರ್ಕಾರದ ಗುಂಡಿ ಭಾಗ್ಯ: ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಿ ಬಿಜೆಪಿಯಿಂದ ಪ್ರತಿಭಟನೆ
ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಸರ್ಕಾರ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವುದನ್ನು ವಿರೋಧಿಸಿ ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿಯ ಕಾಮಾಕ್ಯ ಲೇಔಟ್ ಬಳಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಯಿತು. ಶಾಸಕ ಎಲ್.ವಿ. ರವಿಸುಬ್ರಮಣ್ಯ ಮತ್ತು ಕಾರ್ಯಕರ್ತರು ರಸ್ತೆ ಸಂಚಾರ ತಡೆ ಚಳವಳಿಯಲ್ಲಿ ಭಾಗವಹಿಸಿದ್ದರು. ರಸ್ತೆ ಗುಂಡಿಗಳನ್ನು ಮುಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತ್ವರಿತವಾಗಿ ರಸ್ತೆ ಗುಂಡಿ ದುರಸ್ತಿಯ ಬಗ್ಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ರಸ್ತೆ ಗುಂಡಿಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಇಂದು ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಅವರು ತಿಳಿಸಿದ್ದಾರೆ.

ಯಲಹಂಕ ಹಳೆ ನಗರ, ಕೆಂಪೇಗೌಡ ವಾರ್ಡ್ ನಂಬರ್ 01 ರಲ್ಲಿ ಇಂದು ಬೆಳಿಗ್ಗೆ ರಸ್ತೆ ತಡೆ ನಡೆಸಲಾಯಿತು. ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚಿಸಬೇಕೆಂದು ನೇತೃತ್ವ ವಹಿಸಿದ್ದ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಆಗ್ರಹಿಸಿದರು. ರಾಜ್ಯ ಸರ್ಕಾರ ಗುಂಡಿ ಭಾಗ್ಯವನ್ನ ನೀಡಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕಾಟಾಚಾರಕ್ಕೆ, ಅವೈಜ್ಞಾನಿಕವಾಗಿ ಹಾಗೂ ಕಳಪೆ ಡಾಂಬರೀಕರಣ ಕೆಲಸ ಮಾಡಿದ್ದು, ಕ್ಷೇತ್ರದ ಎಲ್ಲಾ ರಸ್ತೆಗಳಲ್ಲೂ ಈಗಾಗಲೇ ಗುಂಡಿಗಳು ಬಿದ್ದಿದೆ ಎಂದು ಅವರು ಆಕ್ಷೇಪಿಸಿದರು.
ಇದರಿಂದ ಸಾಕಷ್ಟು ರಸ್ತೆ ಅಪಘಾತಗಳು ಹಾಗೂ ಸಾವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ರಸ್ತೆ ತಡೆದು ಗುಂಡಿ ಮುಚ್ಚುವ ಹೋರಾಟ ನಡೆಸಲಾಯಿತು. ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಚಳವಳಿ ಹಮ್ಮಿಕೊಳ್ಳಲಾಗಿತ್ತು. ಹೋರಾಟದಲ್ಲಿ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
'ಇಡೀ ಬೆಂಗಳೂರನ್ನು ಗುಂಡಿ ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ', ವಾಹನ ಸವಾರರಿಗೆ ತೊಂದರೆ ಕೊಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, 'ಬ್ರಾಂಡ್ ಬೆಂಗಳೂರು ಎಂದು ಹೇಳಿ ಬ್ಯಾಡ್ ಬೆಂಗಳೂರು ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರದ ಘೋಷಣೆ ಕೂಗಿದರು. ಮುಚ್ಚಿಸಿ ಮುಚ್ಚಿಸಿ ಗುಂಡಿ ಮುಚ್ಚಿಸಿ ಘೋಷಣೆ ಕೂಗಿದರು.
ಇಂದು ಬೆಳಿಗ್ಗೆ ಯಲಹಂಕ ಹಳೆ ನಗರ, ಕೆಂಪೇಗೌಡ ವಾರ್ಡ್ ನಂ.01 ರಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಕಾಟಾಚಾರಕ್ಕೆ, ಅವೈಜ್ಞಾನಿಕವಾಗಿ ಹಾಗೂ ಕಳಪೆ ಡಾಂಬರೀಕರಣ ಕೆಲಸ ಮಾಡಿದ್ದು, ಕ್ಷೇತ್ರದ ಎಲ್ಲಾ ರಸ್ತೆಗಳಲ್ಲೂ ಈಗಾಗಲೇ ಗುಂಡಿಗಳು ಬಿದ್ದಿದೆ, ಇದರಿಂದ ಸಾಕಷ್ಟು ರಸ್ತೆ ಅಪಘಾತಗಳು ಹಾಗೂ ಸಾವುಗಳು ಸಂಭವಿಸಿವೆ, ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ರಸ್ತೆ ತಡೆದು ಗುಂಡಿ ಮುಚ್ಚುವ ಅಭಿಯಾನ ವನ್ನು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಆರ್.ವಿಶ್ವನಾಥ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಅಭಿಯಾನದಲ್ಲಿ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು..
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ತಡೆ: ಅಶ್ವತ್ಥನಾರಾಯಣ್
ಅಭಿವೃದ್ಧಿ ಶೂನ್ಯತೆ ಹಾಗೂ ರಸ್ತೆ ಗುಂಡಿಯ ವಿಷಯವನ್ನು ಸರಕಾರಕ್ಕೆ ಮನವರಿಕೆ ಮಾಡುವ ದೃಷ್ಟಿಯಿಂದ ರಾಜ್ಯದಲ್ಲಿ ಎಲ್ಲ ಕಡೆ ರಸ್ತೆ ತಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಸಾಂಕೇತಿಕವಾಗಿ ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ಸರಕಾರವು ಜನವಿರೋಧಿಯಾಗಿದ್ದು, ಆಡಳಿತದಲ್ಲಿ ವಿಫಲವಾಗಿದೆ. ಜನರನ್ನು ಬೆದರಿಸುವ ಸರಕಾರ ಇದೆಂದು ಟೀಕಿಸಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ವರ್ತನೆಯನ್ನು ಖಂಡಿಸಿ ಮತ್ತು ತಕ್ಷಣ ರಸ್ತೆಗಳ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications