ಸಿದ್ದರಾಮಯ್ಯನವರ ದಿವಂಗತ ಪುತ್ರನ ಹೆಸರನ್ನು ಎಳೆದು ತಂದ ಬಿಜೆಪಿ
ಬೆಂಗಳೂರು, ನ 18: ಬಿಟ್‌ಕಾಯಿನ್ ಮತ್ತು ಡ್ರಗ್ಸ್ ವಿಚಾರದಲ್ಲಿ ಬಿಜೆಪಿಯ ಐಟಿ ಘಟಕ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ದಿವಂಗತ ಪುತ್ರ ರಾಕೇಶ್ ಸಿದ್ದರಾಮಯ್ಯನವರ ಹೆಸರನ್ನು ಎಳೆದು ತಂದಿದೆ. ಈ ವಿಚಾರದಲ್ಲಿ ಬಿಜೆಪಿ ಸಾಲುಸಾಲು ಟ್ವೀಟ್ ಅನ್ನು ಮಾಡಿದೆ.
ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, "ಬಿಟ್‌ಕಾಯಿನ್ ವಿಚಾರದಲ್ಲಿ ದಾಖಲೆ ಇದೆ ಎಂದು ನಾನು ಎಲ್ಲೂ ಹೇಳಿಲ್ಲ. ಬಿಜೆಪಿ ಸರಕಾರವಿದೆ, ತನಿಖೆ ಮೂಲಕ ಸತ್ಯ ಹೊರ ಬರಲಿ, ಅದರ ಬಗ್ಗೆ ಮಾತನಾಡುತ್ತೇನೆ ಎಂದಷ್ಟೇ ನಾನು ಹೇಳಿರುವುದು. ರಾಕೇಶ್ ಸಿದ್ದರಾಮಯ್ಯ ಈಗ ಬದುಕಿದ್ದಾನಾ, ನನ್ನ ಕಾಲದಲ್ಲಿ ಈ ದಂಧೆ ಇದ್ದಿದ್ದರೆ ಆಗಲೇ ಮಟ್ಟ ಹಾಕುತ್ತಿದ್ದೆ"ಎಂದು ತಿರುಗೇಟು ನೀಡಿದ್ದಾರೆ.
ಬಿಟ್‌ಕಾಯಿನ್ ಅಕ್ರಮ: ವೈರಲ್ ಅಡಿಯೋ ಜಾಡು ಪತ್ತೆ ಮಾಡಿದ ಸಿಐಡಿ
"ಮಾನ್ಯ ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ನಡೆದಿದೆ ಎನ್ನಲಾದ #BitCoin ಹಗರಣದ ಬಗ್ಗೆ ತಾವು ಪ್ರಸ್ತಾಪಿಸಿದ್ದೀರಿ. ಈಗ ನಮಗೆ ಒಂದಿಷ್ಟು ಪ್ರಶ್ನೆಗಳಿವೆ. ಒಂದಷ್ಟು ಚಿತ್ರಗಳಿವೆ, ಅದನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತೇವೆ. ಉತ್ತರಿಸಿ"ಎಂದು ಬಿಜೆಪಿ ಐಟಿ ಸೆಲ್ ಟ್ವೀಟ್ ಮಾಡಿದೆ.
ಬಿಟ್‌ಕಾಯಿನ್ ರಗಳೆ: ಕಾಂಗ್ರೆಸ್ ಪಟಾಕಿಗೆ ಬೆಂಕಿ ಹಚ್ಚಿದ ಬಿಜೆಪಿ?
ಇನ್ನೊಂದು ಟ್ವೀಟ್ ಮಾಡಿರುವ ಬಿಜೆಪಿ, "ಬಿಟ್ ಕಾಯಿನ್ ಹ್ಯಾಕರ್ ಶ್ರೀಕಿ ಜೊತೆಗೆ ಹೇಮಂತ್ ಮುದ್ದಪ್ಪ ಹಾಗೂ ಸುನೀಶ್ ಹೆಗ್ಡೆ ಗಾಢ ಸ್ನೇಹ ಹೊಂದಿದ್ದರು. ಶ್ರೀಕಿ ಮೂಲಕ ಗೇಮಿಂಗ್ ಸೈಟ್ & ಇ-ಪೋರ್ಟಲ್ ಹ್ಯಾಕ್ ಮಾಡಿಸಿದ್ದರು ಎಂಬುದು ಪೊಲೀಸ್ ದಾಖಲೆಯಲ್ಲಿದೆ!? ಇಲ್ಲಿ ನೋಡಿ, ಸುನೀಶ್ ಹೆಗ್ಡೆ & ಹೇಮಂತ್ ಯಾರ ಜೊತೆಗಿದ್ದಾರೆ ಎಂದು ಒಮ್ಮೆ ನೋಡಿ"ಎಂದು ಹೇಳಿದೆ.
|
ಚಿತ್ರದಲ್ಲಿರುವ ಎಲ್ಲರನ್ನು ನೀವು ಗುರುತಿಸಬಲ್ಲಿರಿ
"ಮಾನ್ಯ #Bitcoinಬುರುಡೆರಾಮಯ್ಯ ಅವರೇ, ಈ ಚಿತ್ರದಲ್ಲಿರುವ ಸುನೀಶ್ ಹೆಗ್ಡೆ & ಹೇಮಂತ್ ಜೊತೆಗಿರುವ ಎಲ್ಲರನ್ನು ನೀವು ಗುರುತಿಸಬಲ್ಲಿರಿ ಎಂಬುದು ನಮ್ಮ ನಂಬಿಕೆ. ಆ ನಂಬಿಕೆ ನಿಜವೇ ಆದರೆ #Bitcoin ಹ್ಯಾಕಿಂಗ್ ದಂಧೆ ನಿಮ್ಮ ಕಾಲದಲ್ಲೇ ಆರಂಭವಾಗಿತ್ತು. ಸಿದ್ದರಾಮಯ್ಯನವರೇ, ಆ ಬಗ್ಗೆ ನೀವು ಸ್ಪಷ್ಟ ಮಾಹಿತಿ ಹೊಂದಿದ್ದೀರಿ ಅಲ್ಲವೇ?" ಎಂದು ಬಿಜೆಪಿ ಐಟಿ ಘಟಕ ಸಿದ್ದರಾಮಯ್ಯನವರ ಕಾಲೆಳೆದಿದೆ.

ಒಂದೆರಡು ಕಡೆ ದಾಳಿ ನಡೆದರೂ ತನಿಖೆ ಹಠಾತ್ ಸ್ಥಗಿತಗೊಂಡಿತು
"ಮಾನ್ಯ ಸಿದ್ದರಾಮಯ್ಯನವರೇ, ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಅವ್ಯವಹಾರ ಬಹಿರಂಗವಾಗಿದ್ದು ನಿಮ್ಮ ಕಾಲದಲ್ಲಿ. ಒಂದೆರಡು ಕಡೆ ದಾಳಿ ನಡೆದರೂ ತನಿಖೆ ಹಠಾತ್ ಸ್ಥಗಿತಗೊಂಡಿತು. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್‌ನಲ್ಲಿ ನಡೆಯುತ್ತಿದ್ದ ಹುಕ್ಕಾ ಬಾರ್ ಆ ಎಲ್ಲ ಚಟುವಟಿಕೆಯ ಕೇಂದ್ರವಾಗಿತ್ತು. ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ, ಶ್ರೀಕಿಯಂಥವರು ಆಗ ನಿಮ್ಮ ಮನೆಯ ಸುತ್ತಮುತ್ತಲೂ ಓಡಾಡಿರಲೂ ಬಹುದಲ್ಲವೇ!?" ಎಂದು ಇನ್ನೊಂದು ಟ್ವೀಟ್ ಅನ್ನು ಬಿಜೆಪಿ ಮಾಡಿದೆ.

ಬಿಜೆಪಿ ಸಾಮಾಜಿಕ ಜಾಲತಾಣದ ಘಟಕ, ಸಿದ್ದರಾಮಯ್ಯನವರನ್ನು ಪ್ರಶ್ನಿಸಿದೆ
"ಮಾನ್ಯ #Bitcoinಬುರುಡೆರಾಮಯ್ಯ, ನಿಮ್ಮ ಅವಧಿಯಲ್ಲಿ ನಡೆದ ಈ ಹಗರಣವನ್ನು ಮುಚ್ಚಿ ಹಾಕುವುದು ನಿಮಗೆ ತೀರಾ ಅನಿವಾರ್ಯವಾಗಿತ್ತು. ಅಪ್ರಿಯವಾದ ಸತ್ಯ ಹೇಳುತ್ತೇವೆ, ಇಲ್ಲಿ ನಿಮ್ಮ ಅತ್ಯಾಪ್ತರೇ ಇದ್ದರು ಎಂಬ ಅನುಮಾನಕ್ಕೆ ಈ ಚಿತ್ರ ಪುಷ್ಠಿ ನೀಡುತ್ತಿದೆ. ಸತ್ಯ ಅನಾವರಣವಾಗುವ ಭಯಕ್ಕೆ ನೀವು #UTurn ತೆಗೆದುಕೊಳ್ಳುತ್ತಿದ್ದೀರಿ ಅಲ್ಲವೇ?"ಎಂದು ಬಿಜೆಪಿ ಸಾಮಾಜಿಕ ಜಾಲತಾಣದ ಘಟಕ, ಸಿದ್ದರಾಮಯ್ಯನವರನ್ನು ಪ್ರಶ್ನಿಸಿದೆ.

ಸಿದ್ದರಾಮಯ್ಯನವರು ಈಗ ದಾಖಲೆಯೇ ಇಲ್ಲ ಎನ್ನುತ್ತಿದ್ದಾರೆ
"ಬಿಟ್ ಕಾಯಿನ್ ಹಗರಣದಲ್ಲಿ ಪ್ರಭಾವಿಗಳು ಇದ್ದಾರೆ ಎಂದು ಸಿದ್ದರಾಮಯ್ಯ ಅವರು ಆರೋಪಿಸಿದ್ದರು. ಆದರೆ ಈಗ ದಾಖಲೆಯೇ ಇಲ್ಲ ಎನ್ನುತ್ತಿದ್ದಾರೆ. ನಿಮ್ಮ ಅತ್ಯಾಪ್ತರ ವಹಿವಾಟು ನಿಮ್ಮನ್ನು ಅಸಹಾಯಕನನ್ನಾಗಿ ಮಾಡಿದೆಯೇ? ಬಿಟ್ ಕಾಯಿನ್ ಪ್ರಭಾ ವಲಯ ನಿಮ್ಮನ್ನೇ ಸುತ್ತಿಕೊಳ್ಳಬಹುದೆಂಬ ಭಯ ಕಾಡುತ್ತಿದೆಯೇ? ಮುಳುಗುತ್ತಿರುವವನಿಗೆ ಹುಲ್ಲುಕಡ್ಡಿ ಆಸರೆ ಎಂಬಂತೆ ತಮ್ಮ ನಾಯಕತ್ವ ದುರ್ಬಲವಾಗುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರಿಗೆ #Bitcoin ಆಸರೆಯಾಗಿದೆ. ಆದರೆ, ಒಂದು ಚಿತ್ರ ಸಾವಿರ ಕತೆ ಹೇಳುತ್ತದೆ. ಮತ್ತೊಮ್ಮೆ ಆಗ್ರಹ ಈ ಚಿತ್ರದಲ್ಲಿರುವ ವ್ಯಕ್ತಿಗಳನ್ನು ಗುರುತಿಸಿ"ಎಂದು ಬಿಜೆಪಿ ಐಟಿ ಘಟಕ, ಸಿದ್ದರಾಮಯ್ಯನವರಿಗೆ ಸವಾಲು ಎಸೆದಿದೆ.