ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿಂಚೋಳಿ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ದಿಢೀರ್ ಬದಲಾವಣೆ!

|
Google Oneindia Kannada News

ಬೆಂಗಳೂರು, ಏಪ್ರಿಲ್ 26 : ನಾಮಪತ್ರ ಸಲ್ಲಿಕೆಗೆ ಮೂರು ದಿನಗಳು ಉಳಿದಿರುವಾಗ ಚಿಂಚೋಳಿ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಯನ್ನು ಬದಲಾವಣೆ ಮಾಡಲಾಗಿದೆ. ಮೇ 19ರಂದು ಉಪ ಚುನಾವಣೆ ನಡೆಯಲಿದೆ.

ಲೋಕಸಭಾ ಚುನಾವಣೆ ವಿಶೇಷ ಪುಟ

ಶುಕ್ರವಾರ ಕರ್ನಾಟಕ ಬಿಜೆಪಿ ಘಟಕ ಅವಿನಾಶ್ ಜಾಧವ್ ಅವರು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿ ಎಂದು ಹೇಳಿದೆ. ಕೇಂದ್ರ ಚುನಾವಣಾ ಸಮಿತಿಗೆ ಹೆಸರನ್ನು ಶಿಫಾರಸು ಮಾಡಲಾಗಿದೆ. ಶನಿವಾರ ಅಧಿಕೃತವಾಗಿ ಹೆಸರು ಘೋಷಣೆಯಾಗಲಿದೆ.

ಚಿಂಚೋಳಿ, ಕುಂದಗೋಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಅಂತಿಮಚಿಂಚೋಳಿ, ಕುಂದಗೋಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಅಂತಿಮ

ರಾಜ್ಯ ಬಿಜೆಪಿ ಘಟಕ ಗುರುವಾರ ಕೋರ್ ಕಮಿಟಿ ಸಭೆ ನಡೆಸಿ ರಾಮಚಂದ್ರ ಜಾಧವ್ ಅವರು ಅಭ್ಯರ್ಥಿ ಎಂದು ತೀರ್ಮಾನ ಕೈಗೊಂಡಿತ್ತು. ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿತ್ತು. ಆದರೆ, ಶುಕ್ರವಾರ ಅಭ್ಯರ್ಥಿ ಬದಲಾಗಿದ್ದಾರೆ.

2 ಕ್ಷೇತ್ರದ ಉಪ ಚುನಾವಣೆ : ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ2 ಕ್ಷೇತ್ರದ ಉಪ ಚುನಾವಣೆ : ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

ಡಾ.ಉಮೇಶ್ ಜಾಧವ್ ರಾಜೀನಾಮೆಯಿಂದಾಗಿ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಡಾ.ಉಮೇಶ್ ಜಾಧವ್ ಅವರು ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದಾರೆ. ಅವರ ಪುತ್ರ ಅವಿನಾಶ್ ಜಾಧವ್ ಉಪ ಚುನಾವಣೆ ಅಭ್ಯರ್ಥಿಯಾಗಿದ್ದಾರೆ.

ಸಹೋದರನ ಬದಲು ಪುತ್ರನಿಗೆ ಟಿಕೆಟ್

ಸಹೋದರನ ಬದಲು ಪುತ್ರನಿಗೆ ಟಿಕೆಟ್

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಡಾ.ಉಮೇಶ್ ಜಾಧವ್ ಅವರ ಸಹೋದರನ ಬದಲು ಪುತ್ರನಿಗೆ ಟಕೆಟ್ ನೀಡಲಾಗಿದೆ. ಮೊದಲು ಸಹೋದರ ರಾಮಚಂದ್ರ ಜಾಧವ್ ಅಭ್ಯರ್ಥಿ ಎಂದು ಶಿಫಾರಸು ಮಾಡಲಾಗಿತ್ತು. ಈಗ ಪುತ್ರ ಅವಿನಾಶ್ ಜಾಧವ್ ಅಭ್ಯರ್ಥಿ ಎಂದು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಗಿದೆ.

ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆ

ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಲು ಏಪ್ರಿಲ್ 29 ಕೊನೆಯ ದಿನವಾಗಿದೆ. ಶನಿವಾರ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಅಧಿಕೃತವಾಗಿ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದ್ದು, ಸೋಮವಾರ ಅವಿನಾಶ್ ಜಾಧವ್ ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.

ರಾಜೀನಾಮೆಯಿಂದ ಕ್ಷೇತ್ರ ತೆರವು

ರಾಜೀನಾಮೆಯಿಂದ ಕ್ಷೇತ್ರ ತೆರವು

2018ರ ವಿಧಾನಸಭಾ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಾ.ಉಮೇಶ್ ಜಾಧವ್ ಗೆಲುವು ಸಾಧಿಸಿದ್ದರು. ಮಾರ್ಚ್‌ನಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದಾರೆ. 2019ರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಗುಲ್ಬರ್ಗ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಣಕ್ಕಿಳಿದಿದ್ದಾರೆ.

ಕಾಂಗ್ರೆಸ್ ಇನ್ನೂ ಘೋಷಣೆ ಮಾಡಿಲ್ಲ

ಕಾಂಗ್ರೆಸ್ ಇನ್ನೂ ಘೋಷಣೆ ಮಾಡಿಲ್ಲ

ಚಿಂಚೋಳಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಶನಿವಾರ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ.

English summary
Karnataka BJP on Friday evening recommended the Avinash Jadhav name for the Chincholi assembly seat by elections. Avinash Jadhav son of Dr.Umesh Jadhav who quits Chincholi MLA post and Joined BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X