ಬಿಜೆಪಿ ನವ ಕರ್ನಾಟಕ ಪರಿವರ್ತನಾ ಯಾತ್ರೆ ಲಾಂಛನ ಬಿಡುಗಡೆ

Posted By: Gururaj
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 23 : 'ನವ ಕರ್ನಾಟಕ ಪರಿವರ್ತನಾ ಯಾತ್ರೆ'ಗೆ ಕರ್ನಾಟಕ ಬಿಜೆಪಿ ಸಿದ್ಧವಾಗಿದೆ. ನವೆಂಬರ್ 2ರಂದು ಯಾತ್ರೆಗೆ ಚಾಲನೆ ಸಿಗಲಿದ್ದು, 75 ದಿನಗಳ ಕಾಲ ರಾಜ್ಯಾದ್ಯಂತ ಯಾತ್ರೆ ನಡೆಯಲಿದೆ.

'ಯಡಿಯೂರಪ್ಪನವರಿಗೆ ವಯಸ್ಸಾಗಿದೆ ವಿಶ್ರಾಂತಿ ಪಡೆಯಲಿ'

ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಯಾತ್ರೆ ಬಗ್ಗೆ ಚಾಲನೆ ನೀಡಿದರು. 'ನವ ಕರ್ನಾಟಕ ಪರಿವರ್ತನಾ ಯಾತ್ರೆ'ಯ ಲಾಂಛನ ಬಿಡುಗಡೆ ಮಾಡಿದರು.

BJP releases Nava Karnataka Parivarthana Yatra logo

ಬೆಂಗಳೂರಿನ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಆವರಣದಲ್ಲಿ ನವೆಂಬರ್ 2ರಂದು ಯಾತ್ರೆಗೆ ಚಾಲನೆ ದೊರೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯಾತ್ರೆಗೆ ಚಾಲನೆ ನೀಡಲಿದ್ದಾರೆ. 75 ದಿನಗಳ ಕಾಲ ರಾಜ್ಯಾದ್ಯಂತ ಯಾತ್ರೆ ನಡೆಯಲಿದೆ.

ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಸದಸ್ಯರ ಪಟ್ಟಿ

BJP releases Nava Karnataka Parivarthana Yatra logo

ಲಾಂಛನ ಬಿಡುಗಡೆ ಸಮಾರಂಭದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ ಮುಂತಾದ ಮುಖಂಡರು ಉಪಸ್ಥಿತರಿದ್ದರು.

ಕರ್ನಾಟಕಕ್ಕೆ ಅಮಿತ್ ಶಾ ರಣತಂತ್ರ 'ಉತ್ತರ'ವೇ?

ಕುಮಾರಸ್ವಾಮಿ ರಾಜ್ಯ ಪ್ರವಾಸ : ನವೆಂಬರ್‌ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪ್ರವಾಸ ಮಾಡಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP on Monday, October 23, 2017 unveiled its logo for the upcoming Nava Karnataka Parivarthana Yatra. Bharatiya Janata Party president Amit Shah will inaugurate yatra on Noveber 2, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ