Get Updates
Get notified of breaking news, exclusive insights, and must-see stories!

ಹೆಬ್ಬಾಳದ ಅಕ್ರಮ ಗುರುತಿನ ಚೀಟಿ ಸೃಷ್ಟಿ: ಸಮಗ್ರ ತನಿಖೆಗೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಿಜೆಪಿ!

ಬೆಂಗಳೂರು, ಅಕ್ಟೋಬರ್‌ 26: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಮತದಾರರ ನಕಲಿ ಗುರುತುಚೀಟಿ ಸಿದ್ಧಪಡಿಸಿ ನೀಡಲಾಗುತ್ತಿತ್ತು. ಇದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ಮನವಿ ತಿಳಿಸಿದೆ.
ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, ಎನ್‍ಐಎ ಅಥವಾ ಸಿಬಿಐಗೆ ಇದನ್ನು ಒಪ್ಪಿಸಲು ಶಿಫಾರಸು ಮಾಡುವಂತೆ ಮನವಿ ಮಾಡಲಾಯಿತು.

BJP Requests A Comprehensive Investigation Into The Case Of Illegal Identity Card Creation

ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ಪ್ರಕಾರ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್‍ಸ್ಪೆಕ್ಟರ್ ಅವರು ಇದೇ 19ರಂದು ಆರ್‍ಟಿ ನಗರದ ಸುಲ್ತಾನ ಪಾಳ್ಯ ಬನಶಂಕರಿ ಕಾಂಪ್ಲೆಕ್ಸ್‍ನ ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಗುರುತಿನ ಚೀಟಿಗಳನ್ನು ಸಿದ್ಧಪಡಿಸಲಾಗುತ್ತಿತ್ತು ಎಂದು ತಿಳಿಸಿದ್ದಾರೆ. ಇವರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಾನ್ ಕಾರ್ಡ್ ಮತ್ತಿತರ ದಾಖಲಾತಿಗಳನ್ನು ತಮ್ಮ ಅಂಗಡಿಯ ಕಂಪ್ಯೂಟರ್‍ನಲ್ಲಿ ಸುಳ್ಳು ಸೃಷ್ಟಿ ಮಾಡಿ ತಮ್ಮ ಸ್ವಂತ ಲಾಭಕ್ಕಾಗಿ ಸಾರ್ವಜನಿಕರಿಗೆ, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದವರಿಗೆ ಸಹಕರಿಸುತ್ತಿದ್ದರು.

ನಿಜವಾದ ಗುರುತಿನ ಚೀಟಿಗಳೆಂದು ಹೆಚ್ಚಿನ ಹಣಕ್ಕೆ ನೀಡಿ ಸರಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದರು. ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್ ಮಾಲೀಕ ಮೌನೇಶ್ ಕುಮಾರ್ ಹಾಗೂ ಈತನ ಕೃತ್ಯಕ್ಕೆ ಸಹಕರಿಸಿದ ಭಗತ್, ರಾಘವೇಂದ್ರ ವಿರುದ್ಧ ಎಫ್‍ಐಆರ್ ದಾಖಲಾಗಿದೆ ಎಂದು ಮನವಿ ವಿವರಿಸಿದೆ.

ನಕಲಿ ಮತದಾರರ ಗುರುತು ಚೀಟಿ ಸಿದ್ಧಪಡಿಸುವುದು ಕೂಡ ರಾಷ್ಟ್ರೀಯ ಅಪರಾಧ. ರಾಷ್ಟ್ರೀಯ ಭದ್ರತೆಯ ವಿರುದ್ಧ ನಡೆದ ಕುಕೃತ್ಯ ಇದಾಗಿದೆ ಎಂದು ಗಮನ ಸೆಳೆಯಲಾಯಿತು. ರಾಜ್ಯದ ಮಾಜಿ ಸಚಿವ ಎಸ್.ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮುಖಂಡ ಭಾಸ್ಕರ ರಾವ್, ವಕೀಲರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಮತ್ತು ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಯೋಗೇಂದ್ರ ಹೂಡಘಟ್ಟ, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮುಖಂಡರಾದ ಕಟ್ಟಾ ಜಗದೀಶ್ ಅವರ ನಿಯೋಗವು ಈ ಮನವಿ ಸಲ್ಲಿಸಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+