ಸಿದ್ದರಾಮಯ್ಯ ಅಲ್ಲ ಸಾಲರಾಮಯ್ಯ ಎಂದ ಬಿಜೆಪಿಗೆ ಗುಮ್ಮಿದ 'ಟಗರು'
ಬೆಂಗಳೂರು ಏಪ್ರಿಲ್ 8:ಲೋಕಸಭಾ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಪ್ರಬಲ ಪಕ್ಷಗಳ ಆರೋಪ ಪ್ರತ್ಯಾರೋಪಗಳು ಹೆಚ್ಚಾಗಿವೆ. ಈ ನಡುವೆ ಬಿಜೆಪಿ ಸಿಎಂ ಸಿದ್ದರಾಮಯ್ಯ ಅವರನ್ನು ಸಾಲರಾಮಯ್ಯ ಎಂದು ಕರೆಯುವ ಮೂಲಕ ಟ್ವೀಟ್ ಮಾಡಿದೆ. ಇದಕ್ಕೆ ಸಿಎಂ ಖಡಕ್ಕಾಗಿ ಉತ್ತರ ಕೊಟ್ಟಿದ್ದಾರೆ.
ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಯಾರ ಆಡಳಿತದ ಅವಧಿಯಲ್ಲಿ ಎಷ್ಟು ಸಾಲ ಮಾಡಿದ್ದಾರೆಂದು ವಿವರಿಸಿದ್ದಾರೆ. 'ಎಕ್ಸ್' ನಲ್ಲಿ ಸಿದ್ದರಾಮಯ್ಯ ಹೀಗೆ ಬರೆದಿದ್ದಾರೆ-' ಸನ್ಮಾನ್ಯ ಬಿಜೆಪಿ ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ. ದಿನಕ್ಕೊಂದು ಸುಳ್ಳು ಹೇಳುತ್ತಾ, ಆ ಸುಳ್ಳು ಬಯಲಾದಾಗ ಮತ್ತೆ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನು ನೀವೇ ಬೆತ್ತಲೆ ಮಾಡಿಕೊಳ್ಳಬೇಡಿ' ಎಂದು ವಾಗ್ದಾಳಿ ಮಾಡಿದ್ದಾರೆ.

'ಕಳೆದ ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ರೂ.10,000 ಕೋಟಿ ಸಾಲ ಮಾಡಿದ್ದ ಕಾರಣಕ್ಕಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದು ಬೊಬ್ಬಿಡುತ್ತಿರುವ ನೀವು, ನಿಮ್ಮ ಸರ್ಕಾರದ ಕಾಲದಲ್ಲಿನ ಸಾಲದ ಲೆಕ್ಕವನ್ನು ಪರಿಶೀಲಿಸುವ ಕಷ್ಟ ತೆಗೆದುಕೊಂಡಿದ್ದರೆ ಈ ರೀತಿ ನಮ್ಮ ಕೈಗೆ ಬಡಿಗೆ ಕೊಟ್ಟು ಹೊಡೆಸಿಕೊಳ್ಳುತ್ತಿರಲಿಲ್ಲ' ಎಂದು ಕಿಡಿ ಕಾರಿದ್ದಾರೆ.
'ನಿಮ್ಮ ಪಕ್ಷದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ ರೂ.84,528 ಕೋಟಿ, ಅವರು 2021-22ರಲ್ಲಿ ರೂ.67,332 ಕೋಟಿ ಮತ್ತು 2022-23ರ ಅವಧಿಯಲ್ಲಿ ರೂ.72,000 ಕೋಟಿ ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ ರೂ.43,580 ಕೋಟಿ ಬಳಕೆ ಮಾಡಿದ್ದರು. ಈಗ ಆ ಸಾಲವನ್ನು ನಾವು ತೀರಿಸಬೇಕಾಗಿದೆ. ನಮ್ಮ ಸರ್ಕಾರದ ಮೇಲೆ ಆರೋಪ ಮಾಡುವ ಮೊದಲು ಕನಿಷ್ಠ ಬಸವರಾಜ ಬೊಮ್ಮಾಯಿ ಅವರನ್ನಾದರೂ ಕೇಳುವುದು ಬೇಡವೇ? ಎಂದು ತಿರುಗೇಟು ಕೊಟ್ಟಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ 2018ರ ವರೆಗಿನ ರಾಜ್ಯ ಸರ್ಕಾರದ ಒಟ್ಟು ಸಾಲದ ಮೊತ್ತ ರೂ.2.42 ಲಕ್ಷ ಕೋಟಿ ಆಗಿತ್ತು. 2018ರಿಂದ 2023ರ ವರೆಗಿನ ಐದು ವರ್ಷಗಳ ಅವಧಿಯಲ್ಲಿ ಈ ಸಾಲ ರೂ.5.40 ಲಕ್ಷ ಕೋಟಿಗಳಿಗೆ ಏರಿತ್ತು. ಕೇವಲ ಐದು ವರ್ಷಗಳ ಅವದಿಯಲ್ಲಿ ರಾಜ್ಯದ ಸಾಲ 3 ಲಕ್ಷ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದ್ದು ಯಾವ ಪಕ್ಷದ ಆಡಳಿತದಲ್ಲಿ ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಂಡು ರಾಜ್ಯದ ಜನತೆಗೆ ತಿಳಿಸುವಂತವರಾಗಿ ಬಿಜೆಪಿ ಅವರೇ...
ನಿಮ್ಮ ಪಕ್ಷದ @BSBommai ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ ರೂ.84,528 ಕೋಟಿ, ಅವರು 2021-22ರಲ್ಲಿ ರೂ.67,332 ಕೋಟಿ ಮತ್ತು 2022-23ರ ಅವಧಿಯಲ್ಲಿ ರೂ.72,000 ಕೋಟಿ ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ ರೂ.43,580 ಕೋಟಿ ಬಳಕೆ ಮಾಡಿದ್ದರು. ಈಗ ಆ ಸಾಲವನ್ನು ನಾವು… pic.twitter.com/ilhKkFyH9i
— Siddaramaiah (@siddaramaiah) April 8, 2024
ಬಿಜೆಪಿ ನಾಯಕರೇ, ಈ ಆಡಳಿತ, ಆರ್ಥಿಕತೆ, ಅಭಿವೃದ್ದಿ ವಿಚಾರಗಳೆಲ್ಲ ನಿಮ್ಮ ಚಹದ ಬಟ್ಟಲಲ್ಲ, ಹಿಂದು-ಮುಸ್ಲಿಂ, ಕೋಮುವಾದ, ಪಾಕಿಸ್ತಾನ, ಮುಸ್ಲಿಂ ಲೀಗ್ ಮೊದಲಾದ ವಿಚಾರಗಳನ್ನು ಜನರ ತಲೆಗೆ ತುಂಬಿ ಸೌಹಾರ್ದತೆಯಿಂದ ಬಾಳುತ್ತಿದ್ದ ಜನರನ್ನು ಪರಸ್ಪರ ಸಂಘರ್ಷಕ್ಕಿಳಿಸಿ ರಾಜಕೀಯ ಲಾಭ ಪಡೆಯುವುದಕ್ಕಷ್ಟೇ ನೀವು ಸಮರ್ಥರು. ಯಾರು ಸುಳ್ಳು ರಾಮಯ್ಯ, ಯಾರು ಸತ್ಯ ರಾಮಯ್ಯ ಎನ್ನುವುದನ್ನು ರಾಜ್ಯದ ಜನ ತಿಳಿದುಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರು ನಿಮಗೆ ಉತ್ತರವನ್ನೂ ನೀಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ಕೊಟ್ಟಿದ್ದಾರೆ.
ಸನ್ಮಾನ್ಯ @BJP4Karnataka ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ. ದಿನಕ್ಕೊಂದು ಸುಳ್ಳು ಹೇಳುತ್ತಾ, ಆ ಸುಳ್ಳು ಬಯಲಾದಾಗ ಮತ್ತೆ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನು ನೀವೇ ಬತ್ತಲೆ ಮಾಡಿಕೊಳ್ಳಬೇಡಿ.
— Siddaramaiah (@siddaramaiah) April 8, 2024
ಕಳೆದ ವರ್ಷದ… https://t.co/7L9wOYc3AF
ಸಿದ್ದರಾಮಯ್ಯ ಅಲ್ಲ ಸಾಲರಾಮಯ್ಯ ಎಂದ ಬಿಜೆಪಿ!
'ಸಿದ್ದರಾಮಯ್ಯ ಅಲ್ಲ ಸಾಲರಾಮಯ್ಯ. ಸಿಎಂ ಸಾಲರಾಮಯ್ಯನವರು ಕರ್ನಾಟಕವನ್ನು ದಿವಾಳಿ ಮಾಡಿಯೇ ಸಿದ್ಧ ಎಂದು ಸನ್ನದ್ಧರಾಗಿದ್ದಾರೆ. ಸಿಎಂ ಸಿದ್ದರಾಮಯ್ಯನವರ ಸರ್ಕಾರ ಏಪ್ರಿಲ್ - ಜೂನ್ ತಿಂಗಳ ತ್ರೈಮಾಸಿಕದಲ್ಲಿ ಮತ್ತೆ ₹10,000 ಕೋಟಿ ಸಾಲ ಮಾಡುತ್ತಿದೆ. ಕನ್ನಡಿಗರನ್ನು ಇನ್ನಿಲ್ಲದಂತಹ ಸಾಲದ ಸುಳಿಗೆ ಸಿಲುಕಿಸಿ, ಕರ್ನಾಟಕವನ್ನು ದಿವಾಳಿ ಮಾಡುವುದೇ ಕಾಂಗ್ರೆಸ್ ಸರ್ಕಾರದ ಒನ್ ಲೈನ್ ಅಜೆಂಡಾ ಆಗಿರುವುದಂತು ಸ್ಪಷ್ಟ' ಎಂದು ಬಿಜೆಪಿ ಸಿದ್ದರಾಮಯ್ಯ ಅವರನ್ನು ಕೆಣಕಿದೆ.
-
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್









Click it and Unblock the Notifications