ರಾಜ್ಯ ಸರ್ಕಾರದಿಂದ ಹಿಂದೂಗಳಿಗೆ ಅನ್ಯಾಯ ಎಂದ ಬಿಜೆಪಿ, ಯಾಕೆ ?

ವಕ್ಫ್‌ ಬೋರ್ಡ್‌ ಹಾಗೂ ರೈತರ ನಡುವಿನ ಜಮೀನು ಸಂಘರ್ಷ ಹೊಸ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದೀಗ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿಯನ್ನೇ ನಡೆಸಿದೆ. ಯಾವುದೇ ಕಾರಣಕ್ಕೂ ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿಯು ಹೇಳಿದೆ.

ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

BJP says injustice to Hindus by the state government why

ರಾಜ್ಯ ಕಾಂಗ್ರೆಸ್‌ ಸರ್ಕಾರವು ಒಂದು ಸಮುದಾಯವನ್ನು ಮಾತ್ರ ಓಲೈಕೆ ಮಾಡುತ್ತಿದೆ. ಈಗ ವಕ್ಫ್‌ ಹೆಸರಿನಲ್ಲಿ ರೈತರ ಜಮೀನು ಕಬಳಿಕೆ ಹುನ್ನಾರ ನಡೆಯುತ್ತಿದೆ. ನಾವು ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಬಿಜೆಪಿಯು ರಚಿಸಿರುವ ವಕ್ಫ್‌ ಮಂಡಳಿಯಿಂದ ರೈತರ ಭೂಮಿ ಕಬಳಿಕೆ ತಡೆಗೆ ರಚಿಸಲಾದ ಕಾರ್ಯಪಡೆ ಸದಸ್ಯ ಹಾಗೂ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು.

ವಿಜಯಪುರದಲ್ಲಿ ರೈತರ ಜಮೀನಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿರುವುದನ್ನ ಖಂಡಿಸುತ್ತೇವೆ. ಇದೊಂದು ಅತಿಯಾದ ಕ್ರಮ ಆಗಿದೆ. ವಿಜಯಪುರ ಜಿಲ್ಲಾಧಿಕಾರಿಗಳ ಜೊತೆಗೆ ಭೇಟಿ ಚರ್ಚೆ ಮಾಡಿ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ರೈತರ ಒಂದಿಚ್ಚು ಜಾಗವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳುತ್ತೇವೆ ಎಂದ ಅವರು ಪುನರುಚ್ಚರಿಸಿದ್ದಾರೆ.

ವಕ್ಫ್ ಮಂಡಳಿ ನೋಟಿಸ್ ನೀಡಿರುವುದನ್ನು ಖಂಡಿಸಿ ಬಿಜೆಪಿ ನಾಯಕರಾದ ಗೋವಿಂದ ಕಾರಜೋಳ, ಎನ್ ರವಿಕುಮಾರ್ ಸೇರಿದಂತೆ ಕೆಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ವಕ್ಫ್ ಬೋರ್ಡ್ ರೈತರಿಂದ ಅಕ್ರಮವಾಗಿ ಮತ್ತು ಬಲವಂತವಾಗಿ ಭೂಮಿ ವಶಪಡಿಸಿಕೊಳ್ಳುತ್ತಿದೆ.ಇದನ್ನು ತಡೆಯಲು ರಾಜ್ಯಾದ್ಯಂತ ಪ್ರತಿಭಟನೆಗಳನ್ನು ಮಾಡುತ್ತೇವೆ. ಈ ಕುರಿತು ಹಿಂದೂಗಳಿಗೆ ಆಗುತ್ತಿರುವ ಅನ್ಯಾಯ ಕುರಿತು ಜನರನ್ನು ಎಚ್ಚರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಭಾರಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಮದರಸಾಗಳಿಗೆ ಸಿಮೀತವಾಗಿದ್ದ ಕಾಂಗ್ರೆಸ್ ಸರ್ಕಾರ ಈಗ ಬಡವರು, ದಲಿತರ ಆಸ್ತಿಯನ್ನು ಕಬಳಿಸುತ್ತಿದೆ. ಸರ್ಕಾರ ಹಾಗೂ ವಕ್ಫ್‌ ವಿರುದ್ಧ ದೀರ್ಘ ಹೋರಾಟ ಮಾಡುತ್ತೇವೆ. ನಾವು 5 ಜನರ ತಂಡ ಮಾಡಿಕೊಂಡು ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಏನೆಲ್ಲಾ ಅನ್ಯಾಯ ಆಗಿದೆ ಎನ್ನುವ ಮಾಹಿತಿಯನ್ನು ಕಲೆ ಹಾಕಿದ್ದೇವೆ.

ಯಾವುದೇ ಕಾರಣಕ್ಕೂ ರೈತರ ಜಮೀನನ್ನು ಕಬಳಿಕೆ ಮಾಡಲು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಮುಸ್ಲಿಂ ತುಷ್ಟೀಕರಣ ಮಾಡುವಂತಹ ಕೆಲಸ ಮಾಡುತ್ತಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾಗೂ ಹಳೆಹುಬ್ಬಳ್ಳಿ ಪ್ರಕರಣದಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡುತ್ತಿದೆ ಎಂದು ಶಾಸಕ ಟೆಂಗಿನಕಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ವಕ್ಫ್‌ ಬೋರ್ಡ್‌ ರೈತರಿಗೆ ನೋಟಿಸ್‌ ನೀಡಿದೆ ಎನ್ನುವ ವಿಚಾರದಲ್ಲಿ ಇದೀಗ ರಾಜ್ಯ ಕಾಂಗ್ರೆಸ್‌ ಸರ್ಕಾರವು ಯೂಟರ್ನ್‌ ತೆಗೆದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+