ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಇಲ್ಲ?

ಬೆಂಗಳೂರು, ಫೆ.20 : ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಕರ್ನಾಟಕ ಬಿಜೆಪಿ ಮತ್ತೊಂದು ಮಾನದಂಡ ನಿಗದಿ ಪಡಿಸಲು ಆಲೋಚನೆ ನಡೆಸಿದೆ. ಹಾಲಿ ಶಾಸಕರು ಮತ್ತು ವಿಧಾನಪರಿಷತ್ತಿನ ಸದಸ್ಯರಿಗೆ ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಇದು ಜಾರಿಗೆ ಬಂದರೆ, ಟಿಕೆಟ್ ಆಕಾಂಕ್ಷಿಗಳಾಗಿರುವ ಹಲವು ಶಾಸಕರಿಗೆ ನಿರಾಸೆ ಉಂಟಾಗಲಿದೆ.

ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಮಂಗಳವಾರ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದರೆ, ಆ ಕ್ಷೇತ್ರವನ್ನು ಮರಳಿ ಪಕ್ಷ ಪಡೆಯುವುದು ಕಷ್ಟವಾಗಲಿದೆ ಎಂಬ ಹಿನ್ನಲೆಯಲ್ಲಿ ಈ ಬಗ್ಗೆ ಚಿಂತನೆ ನಡೆಸಲಾಗಿದೆ.

BJP

ಹಲವು ಬಿಜೆಪಿ ನಾಯಕರು ಮತ್ತು ಸಂಘ ಪರಿವಾರದ ನಾಯಕರು ಶಾಸಕರು ಮತ್ತು ವಿಧಾನಪರಿಷತ್ತಿನ ಸದಸ್ಯರಿಗೆ ಟಿಕೆಟ್ ನೀಡಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸ್ಪರ್ಧೆ ಅಗತ್ಯವಿರುವ ಬಿ.ಎಸ್.ಯಡಿಯೂರಪ್ಪ ಮತ್ತು ಜೂನ್ ನಲ್ಲಿ ವಿಧಾನಪರಿಷತ್ ಅವಧಿ ಮುಗಿಯುವ ಡಿವಿ ಸದಾನಂದ ಗೌಡರಿಗೆ ಮಾತ್ರ ಟಿಕೆಟ್ ನೀಡುವ ಕುರಿತು ಚರ್ಚಿಸಲಾಗಿದೆ. [ಡಿವಿಎಸ್ ಮೈಸೂರಿಗೆ, ಅಶೋಕ್ ಉತ್ತರಕ್ಕೆ?]

ಶಿಕಾರಿಪುರದ ಕ್ಷೇತ್ರದ ಶಾಸಕರಾದ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವು ಅನಿವಾರ್ಯವಾಗಿದೆ. ಅವರನ್ನು ಬಿಟ್ಟು ಬೇರೆ ಅಭ್ಯರ್ಥಿ ಪ್ರಬಲ ಪೈಪೋಟಿ ನೀಡಲು ಸಾಧ್ಯವಿಲ್ಲ ಎಂದು ಅವರನ್ನು ಕಣಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಇನ್ನು ಸದಾನಂದಗೌಡರ ಪರಿಷತ್‌ ಸದಸ್ಯತ್ವ ಜೂನ್‌ನಲ್ಲಿ ಪೂರ್ಣಗೊಳ್ಳಲಿದೆ. ಆದ್ದರಿಂದ ಅವರಿಗೂ ಲೋಕಸಭೆ ಟಿಕೆಟ್ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. [ಶಿವಮೊಗ್ಗದಲ್ಲಿ ಬಿಎಸ್ವೈ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರು]

ಅಶೋಕ್ ಕೈ ತಪ್ಪಲಿಗೆ ಟಿಕೆಟ್ : ಒಂದು ವೇಳೆ ಬಿಜೆಪಿ ತನ್ನ ಈ ನಿರ್ಧಾರವನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದರೆ ಬೆಂಗಳೂರು ಉತ್ತರ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಡಿಸಿಎಂ ಆರ್.ಅಶೋಕ್, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಸಿಟಿ ರವಿ, ಮೈಸೂರಿನಿಂದ ಟಿಕೆಟ್ ಬಯಸುತ್ತಿರುವ ಮಾಜಿ ಸಚಿವ ಅಪ್ಪಚ್ಚು ರಂಜನ್, ಚಿಕ್ಕಬಳ್ಳಾಪುರ ಟಿಕೆಟ್ ಆಕಾಂಕ್ಷಿ ವೈ.ನಾರಾಯಣ ಸ್ವಾಮಿ ಮುಂತಾದವರಿಗೆ ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಲಿದೆ. [ಚಿಕ್ಕಬಳ್ಳಾಪುರ ಟಿಕೆಟ್ ಗಾಗಿ ಪೈಪೋಟಿ]

ಬಿಜೆಪಿ ಪಟ್ಟಿ ರೆಡಿ : ಲೋಕಸಭೆ ಚುನಾವಣೆಗೆ ರಾಜ್ಯದ 18 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧವಾಗಿದ್ದು, ಫೆ.21 ಅಥವಾ 22 ರಂದು ಪ್ರಕಟಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಪಟ್ಟಿಯ ಬಗ್ಗೆ ರಾಷ್ಟ್ರ ನಾಯಕರೊಂದಿಗೆ ಚರ್ಚೆ ನಡೆಸಲಾಗಿದೆ ಎರಡು ಮೂರು ದಿನಗಳಲ್ಲಿ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+