ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೋಗಿ ಬಗ್ಗೆ ದಿನೇಶ್ ಹೇಳಿಕೆಗೆ ಬಿಜೆಪಿ ಖಂಡನೆ

By Mahesh
|
Google Oneindia Kannada News

ಬೆಂಗಳೂರು, ಏಪ್ರಿಲ್ 15: ಮಣಿ ಶಂಕರ್ ಅಯ್ಯರ್ ಅವರನ್ನು ನೆನಪಿಸುವಂಥ ಸನ್ನಿವೇಶ, ಬೆಂಗಳೂರಿನಲ್ಲಿ ಕಂಡು ಬಂದಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಏಕವಚನ ಬಳಸಿ ಮಾತನಾಡಿದ್ದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತೀವ್ರವಾಗಿ ಖಂಡಿಸಿದ್ದಾರೆ.

ಅವರು ಯೋಗಿ ಅವರು ಢೋಂಗಿ, ಅವರನ್ನು ಸಿಎಂ ಸ್ಥಾನದಿಂದ ಪ್ರಧಾನಿ ಕೂಡಲೇ ಕಿತ್ತು ಹಾಕಬೇಕು, ಜಮ್ಮು ಹಾಗೂ ಉತ್ತರಪ್ರದೇಶದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳನ್ನು ಕೆಪಿಸಿಸಿ ತೀವ್ರವಾಗಿ ಖಂಡಿಸುತ್ತದೆ ಎಂದು ಮೇಣದಬತ್ತಿ ಹಿಡಿದು ಪ್ರತಿಭಟನೆ ಮಾಡುತ್ತಾ ದಿನೇಶ್ ಗುಂಡೂರಾವ್ ಹೇಳಿದರು.

BJP sees red as Dinesh Gundu says, Adityanath not a Yogi but Dongi

'ಯೋಗಿ ಆದಿತ್ಯನಾಥ್ ಅವರು ಕರ್ನಾಟಕಕ್ಕೆ ಬಂದರೆ, ವಾಪಸ್ ಕಳಿಸಿ, ಚಪ್ಪಲಿಯನ್ನು ಹೊಡೆದು ಹೊರಕ್ಕೆ ಹಾಕಿ ಎಂದು ಆಕ್ರೋಶ'

ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ದಿನೇಶ್ ಗುಂಡೂರಾವ್ ಅವರನ್ನು ವಜಾಗೊಳಿಸಿ, ಇಲ್ಲದಿದ್ದರೆ ರಾಜ್ಯವ್ಯಾಪ್ತಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.

BJP sees red as Dinesh Gundu says, Adityanath not a Yogi but Dongi

ದಿನೇಶ್ ಅವರ ಮಾತು ನನಗೆ ತೀವ್ರ ಆಘಾತ ತಂದಿದೆ. ಮುಖ್ಯಮಂತ್ರಿ ಹಾಗೂ ನಾಥ ಪಂಥದ ಸಂತರಿಗೆ ನೀಡುವ ಮರ್ಯಾದೆ ಇದಲ್ಲ. ಇದರಿಂದ ಕರ್ನಾಟಕದಲ್ಲಿರುವ ಲಕ್ಷಾಂತರ ನಾಥ ಪಂಥ ಅನುಯಾಯಿಗಳಿಗೆ ತೀವ್ರ ಅವಮಾನವಾಗಿದೆ. ದಿನೇಶರ ಕಾಂಗ್ರೆಸ್ ನ ಸಂಸ್ಕೃತಿಯನ್ನು ಕಟುವಾಗಿ ಖಂಡಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

English summary
There was another Mani Shankar Aiyer moment in Karnataka. This time it was the turn of KPCC working president, Dinesh Gundu Rao who took on Uttar Pradesh Chief Minister, Yogi Adityanath.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X