ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಹೊರಹಾಕಿದರು-ಬಿಜೆಪಿ
ಬೆಂಗಳೂರು, ಡಿಸೆಂಬರ್ 5: ಕನ್ನಡಿಗರು ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರ್ಕಾರಿ ಆಚರಣೆಯಾಗಿ ತಂದವರು ಅವರು, ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು..? ಎಂದು ಬಿಜೆಪಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದೆ.
ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿರುವ ಬಿಜೆಪಿ, ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ ಕಾಂಗ್ರೆಸ್ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು ಮತ್ತು ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ.
ಕ್ಷಣವೂ ವಿವೇಚಿಸದೆ ತಲಾಖ್ ಎಂದು ಮಹಿಳೆಯರ ಬದುಕು ಬರ್ಬಾದ್ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ. ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್ ಎನ್ನದೇ ಮತ್ತೇನೆಂದು ಕರೆಯುತ್ತಾರೆ ಎಂದು ಬಿಜೆಪಿ ಪ್ರಶ್ನಿಸಿದೆ.
ಕನ್ನಡಿಗರು @siddaramaiah ರನ್ನು ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು.
— BJP Karnataka (@BJP4Karnataka) December 5, 2022
ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು?
1/8
ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದರಾಮಯ್ಯರಗೆ ಸಿದ್ರಾಮುಲ್ಲಾ ಖಾನ್ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ. ಟಿಪ್ಪು ಎಕ್ಸ್‌ಪ್ರೆಸ್ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ 'ಒಡೆಯರ್' ಎಕ್ಸ್‌ಪ್ರೆಸ್ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ..? ಎಂದಿದ್ದಾರೆ.

ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್ ಭಯೋತ್ಪಾದನೆ ಎಂಬುದನ್ನು ಒಪ್ಪದ ಸಿದ್ದರಾಮಯ್ಯ, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸಿಕತೆಯಲ್ಲಿರುವ ಕಾರಣಕ್ಕೆ ಜನರೇ ಸಿದ್ರಾಮುಲ್ಲಾ ಖಾನ್ ಬ್ರಾಂಡ್ ಮಾಡಿರುವುದು. 26/11 ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್ ಉನ್ನಿಕೃಷ್ಣನ್‌ರವರ ವೀರಗಾಥೆಯುಳ್ಳ "ಕರಾಳ ರಾತ್ರಿ" ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ ಸಿದ್ದರಾಮಯ್ಯ. ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆಯದೇ ಬೇರೆ ಬಿರುದು ಕೊಟ್ಟಾರೆಯೇ ಎಂದು ಬಿಜೆಪಿ ಕಿಡಿಕಾರಿದೆ.
ಹಿಜಾಬ್ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ ಸಿದ್ದರಾಮಯ್ಯ ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ..? ಎಂದು ಬಿಜೆಪಿ ಟ್ವೀಟ್ ಮೂಲಕ ವ್ಯಂಗ್ಯ ಮಾಡಿದೆ.
ಸಿದ್ದರಾಮಯ್ಯನವರ ಭವಿಷ್ಯ ದೇವೇಗೌಡರಿಗೆ ಅಂದೇ ಗೊತ್ತಿತ್ತು ಅನಿಸುತ್ತದೆ. ಅಹಿಂದ ಬಲಪ್ರದರ್ಶನ ಬರಿ ತೋರಿಕೆಗಾಗಿ ಮಾತ್ರ ಹಿಂದುಳಿದವರು ಮತ್ತಯ ದಲಿತರಿಗೆ ಸಿದ್ದರಾಮಯ್ಯನವರು ಮಾಡಿದ್ದಾದರೂ ಏನು..? ಇದನ್ನೆಲ್ಲಾ ಕಂಡ ಈ ನಾಡಿನ ಜನರು ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯನವರ ಭವಿಷ್ಯವನ್ನು ನಿರ್ಧರಿಸಲಿದ್ದಾರೆ ಎಂದು ಬಿಜೆಪಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗುಡುಗಿದೆ.












Click it and Unblock the Notifications