ಶೆಟ್ಟರ್, ಸವದಿ ಸೋಲಿಸಲು ಬಿಜೆಪಿ ಮಹಾತಂತ್ರ: ಇಬ್ಬರನ್ನು ಸೋಲಿಸುವ ಮೂಲಕ ನೇರ ಸಂದೇಶ ರವಾನೆ- ಏನಿದು ಇನ್‌ಸೈಡ್ ಸ್ಟೋರಿ
ಬೆಂಗಳೂರು, ಏಪ್ರಿಲ್ 27: ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಶತಾಯಗತಾಯ ಸೋಲಿಸಲೇಬೇಕೆಂದು ಬಿಜೆಪಿ ಪಣತೊಟ್ಟು ನಿಂತಿದೆ. ಈ ಇಬ್ಬರು ನಾಯಕರನ್ನು ಸೋಲಿಸುವ ಮೂಲಕ ನೇರ ಸಂದೇಶವೊಂದನ್ನು ರವಾನಿಸಲು ಕೇಸರಿ ಪಕ್ಷ ಯೋಜನೆ ರೂಪಿಸಿದೆ.
ಬಿಜೆಪಿ ತೊರೆದು ಕಾಂಗ್ರೆಸ್ ಅಡಿ ಸ್ಪರ್ಧಿಸುತ್ತಿರುವ ನಾಯಕರನ್ನು ಸೋಲಿಸುವುದು ಕೇಸರಿ ಪಕ್ಷಕ್ಕೆ ಪ್ರತಿಷ್ಠಿಯಾಗಿ ಮಾರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯು ಹಲವಾರ ಸಿದ್ದತೆಗಳನ್ನು ಮಾಡಿಕೊಂಡಿದೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧಿಸುತ್ತಿದ್ದು, ಅವರ ವಿರುದ್ಧ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಕಣಕ್ಕಿಳಿದಿದ್ದಾರೆ. ಸಂಘ ಪರಿವಾರ ಶಕ್ತಿಶಾಲಿಯಾಗಿರುವ ಈ ಪ್ರದೇಶದಲ್ಲಿ ಟೆಂಗಿನಕಾಯಿ ಅವರನ್ನು ಗೆಲ್ಲಿಸಲು ಬಿಜೆಪಿ ಪಣತೊಟ್ಟಿದೆ.
ಬೆಳಗಾವಿ ಅಥಣಿ ಕ್ಷೇತ್ರವು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಲಕ್ಷ್ಮಣ ಸವದಿ ಅವರು ಕೆಲ ದಿನಗಳ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಅವರ ವಿರುದ್ಧ ಬಿಜೆಪಿಯಿಂದ ಮಹೇಶ್ ಕುಮಠಳ್ಳಿ ಅವರು ಸ್ಪರ್ಧಿಸುತ್ತಿದ್ದಾರೆ.
ಶೆಟ್ಟರ್ ಹಾಗೂ ಸವದಿಯನ್ನು ಸೋಲಿಸಲು ಬಿಜೆಪಿ ಗುಪ್ತ ಯೋಜನೆಗಳನ್ನು ರೂಪಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಗೆ ಭೇಟಿ ನೀಡಿದ್ದಾರೆ. ಆ ಸಂದರ್ಭದಲ್ಲಿ ಧಾರವಾಡ, ಬೆಳಗಾವಿ ಮತ್ತು ಉತ್ತರ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಪ್ರಚಾರದಲ್ಲಿ ತೊಡಗಿರುವ ಕಾರ್ಯಕರ್ತರ ಜೊತೆಗೆ ಸಂವಾದ ನಡೆಸಿದ್ದಾರೆ. ಈ
ಈ ಜಿಲ್ಲೆಗಳಿಗೆ ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿರುವ ಕಾರ್ಯಕರ್ತರನ್ನು ಹೊರತುಪಡಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಹೆಚ್ಚಿನ ರ್ಯಾಲಿ ಹಾಗೂ ರೋಡ್‌ಶೋಗಳನ್ನು ಈ ಭಾಗದಲ್ಲಿ ಆಯೋಜಿಸಲು ಪಕ್ಷ ನಿರ್ಧರಿಸಿದೆ.

ಧಾರವಾಡ ಲೋಕಸಭಾ ಸದಸ್ಯ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಧಾರವಾಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿಯನ್ನು ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಹ ಈ ಕ್ಷೇತ್ರಗಳಲ್ಲಿ ಬೀಡಾರ ಹೂಡಿ ಪ್ರಚಾರ ನಡೆಸಲಿದ್ದಾರೆ.
ವಿಶೇಷವಾಗಿ, ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ನಲ್ಲಿ ಶೆಟ್ಟರ್ ಅವರನ್ನು ಸೋಲಿಸಲು ಸುಫಾರಿ ಪಡೆದುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಆರ್‌ಎಸ್‌ಎಸ್ ತನ್ನದೇ ಆದ ಗುಪ್ತ ಪ್ರಚಾರಗಳನ್ನು ಮಾಡುತ್ತಿದೆ ಎಂದು ತಿಳಿದುಬಂದಿದೆ. ನಾಗಪುರದಿಂದಲೇ ನೇರವಾಗಿ ಆರ್‌ಎಸ್‌ಎಸ್ ಕಾರ್ಯಕರ್ತರು ಹುಬ್ಬಳ್ಳಿಗೆ ಬಂದಿಳಿದಿದ್ದಾರೆ ಎಂದು ವರದಿಗಳಾಗಿವೆ.
ಇನ್ನು ಲಕ್ಷ್ಮಣ ಸವದಿ ಪ್ರತಿನಿಧಿಸುತ್ತಿರುವ ಅಥಣಿಯಲ್ಲಿ ಬಿಜೆಪಿ ಭಾರೀ ಪ್ರಚಾರ ಕೈಗೊಂಡಿದೆ. ಲಕ್ಷ್ಮಣ ಸವದಿ ಅವರನ್ನು ಸೋಲಿಸಲು ಮಾಜಿ ಸಚಿವ, ಗೋಕಾಕದ ಶಾಸಕ ರಮೇಶ್ ಜಾರಕಿಹೊಳಿ ಅವರು ಪಣತೊಟ್ಟಿದ್ದಾರೆ. ಅಥಣಿಯಲ್ಲಿ ಪಂಚಮಸಾಲಿ ಮತಗಳು ಹೆಚ್ಚಿದ್ದು, ಅಲ್ಲಿ ಪಂಚಮಸಾಲಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೂ ಬಳಸಿಕೊಳ್ಳಲಾಗುತ್ತಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ











Click it and Unblock the Notifications