ಬಿಜೆಪಿಯವರು ಪ್ರಧಾನಿ ಹುದ್ದೆಯನ್ನು ಈ ಜಾತಿಯವರಿಗೆ ಬಿಟ್ಟುಕೊಡಲಿ: ಸಿದ್ದರಾಮಯ್ಯ ಸವಾಲ್‌

ಬೆಂಗಳೂರು, ಜುಲೈ 19: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ರಾಜ್ಯ ಕಾಂಗ್ರೆಸ್‌ ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ರೀತಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.

ಬಿಜೆಪಿಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು, ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

BJP Should Give Up The Post Of Prime Minister To A Scheduled Caste Siddaramaiah

ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಕೃಷ್ಣಾನದಿ ನೀರು ಹಂಚಿಕೆ ಬಗ್ಗೆ ಕೇಂದ್ರ ಇದುವರೆಗೂ ಅಧಿಸೂಚನೆಯನ್ನು ಹೊರಡಿಸಿಲ್ಲದಿರುವುದು ರಾಜ್ಯದ ಮೇಲೆ ಒತ್ತಡ ಹೇರಿದಂತಾಗಿದೆಯೇ ಬಗ್ಗೆ ಪ್ರತಿಕ್ರಿಯೆ ನೀಡಿ, ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಆದರೆ ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಅಧಿಸೂಚನೆ ಹೊರಡಿಸಿಲ್ಲ.

ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ನಡುವೆ ಅಂತರ ರಾಜ್ಯ ಜಲವಿವಾದವಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆಯ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ ಮತ್ತು ತೀರ್ಪಿನನ್ವಯ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವುದೇ ನಷ್ಟವೂ ಆಗುವುದಿಲ್ಲ. ಆಲಮಟ್ಟಿ ಜಲಾಶಯದ ಎತ್ತರವನ್ನು 524.26 ಮೀ ಗಳಿಗೆ ಹೆಚ್ಚಿಸಲು ಅನುಮತಿ ನೀಡಿದ್ದಾರೆ ಎಂದರು.

ಆರ್ ಸಿ ಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಆಯೋಗದ ವರದಿಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಮುಂದಿನ ಸಚಿವ ಸಂಪುಟದಲ್ಲಿ ತನಿಖಾ ವರದಿಯ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ನಿವೃತ್ತ ನ್ಯಾಯಾಧೀಶರೊಬ್ಬರು ಪ್ರಕರಣದ ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತುವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ ಐ ಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ , ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಬೆಂಗಳೂರಿನ ಸುಮಾರು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇದು ಹುಸಿ ಬಾಂಬ್ ಕರೆಯಿರಬಹುದೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದರು. ಸುಳ್ಳು ಹೇಳಿ ಅಪಪ್ರಚಾರ , ಪ್ರಚೋದನೆಗೊಳಿಸುವ ಕೃತ್ಯಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಕಾನೂನು ರೂಪಿಸಲಾಗುತ್ತಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+