ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡಲಿ: ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು, ಏಪ್ರಿಲ್‌ 08: ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಎಲ್ ಪಿಜಿ ಹಾಗೂ ಇಂಧನ ತೈಲಗಳ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮಂಗಳವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ವ್ಯಂಗ್ಯವಾಡಿದ್ದಾರೆ.

BJP Should Hold A Janakrosha Yatra Against the central government DK Shivakumar

ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆರೆಗಳ ಸಂರಕ್ಷಣೆ, ಕಸ ವಿಲೇವಾರಿ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಪ್ರಮುಖ ತೀರ್ಮಾನಗಳನ್ನು ಕೈಗೊಂಡರು.

ಕೆರೆಗಳ ಸಂರಕ್ಷಣೆ ದೃಷ್ಟಿಯಿಂದ ಸಂಸ್ಕರಿಸಿದ ನೀರನ್ನು ತುಂಬಿಸುವ ಜವಾಬ್ದಾರಿಯನ್ನು ಬೆಂಗಳೂರು ಜಲ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ)ಗೆ ವಹಿಸಲು ನಿರ್ಣಯ ಕೈಗೊಳ್ಳಲಾಯಿತು. ಇದರ ಜತೆಗೆ ಬೆಂಗಳೂರು ನಗರ ಜಿಲ್ಲೆಗೆ ಬಂದೊದಗಬಹುದಾದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳಿಗೆ ಸೂಚನೆ ನೀಡಿದರು. ಇನ್ನು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿ ವತಿಯಿಂದ ಕುಡಿಯುವ ನೀರು ಪೂರೈಸಲು ಚಿಂತನೆ ನಡೆಸಲಾಯಿತು.

BJP Should Hold A Janakrosha Yatra Against the central government DK Shivakumar

ಬೆಂಗಳೂರಿನಲ್ಲಿ ಕಟ್ಟಡ ಭಗ್ನ ಅವಶೇಷಗಳನ್ನು (ಕಟ್ಟಡ ತ್ಯಾಜ್ಯ) ಎಲ್ಲೆಂದರಲ್ಲಿ ಸುರಿಯುತ್ತಿರುವುದನ್ನು ತಪ್ಪಿಸಲು ಈ ತ್ಯಾಜ್ಯಗಳನ್ನು ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಲಾರಿಗಳು ಕಸವನ್ನು ಎಲ್ಲಿಂದ ಸಂಗ್ರಹಿಸಿ ಎಲ್ಲಿ ವಿಲೇವಾರಿ ಮಾಡುತ್ತವೆ ಎಂದು ಮೇಲ್ವಿಚಾರಣೆ ಮಾಡಲು ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಂತರ ಸುಮನಹಳ್ಳಿಯ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ಯಶವಂತಪುರ ವೃತ್ತದ ಬಳಿ ಸುಮಾರು 10-15 ಲೋಡ್ ಗಳಷ್ಟು ಕಟ್ಟಡ ತ್ಯಾಜ್ಯಗಳನ್ನು ರಸ್ತೆ ಪಕ್ಕದಲ್ಲಿ ಸುರಿದಿರುವುದನ್ನು ನಾನು ಹಾಗೂ ಪಾಲಿಕೆ ಆಯುಕ್ತರು ನೋಡಿದೆವು. ಹೀಗಾಗಿ ಎಲ್ಲಾ ತ್ಯಾಜ್ಯ ಸಾಗಿಸುವ ಲಾರಿ ಹಾಗೂ ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು ಎಂದು ಸೂಚಿಸಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+