ನಾಲ್ಕು ಮತಗಳಿಗಾಗಿ ಉಗ್ರನನ್ನೇ ಉಗ್ರನಲ್ಲ ಎನ್ನುವ ಹಂತದಲ್ಲಿ ಕಾಂಗ್ರೆಸ್ ಇದೆ: ಬಿಜೆಪಿ ಕಿಡಿ
ಬೆಂಗಳೂರು,ಡಿಸೆಂಬರ್ 16: ಮತದಾರರ ಮಾಹಿತಿ ಕಳವು ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಯಾಸ್ಟ್ ಮಾಡಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದು, ಬಿಜೆಪಿ ಪಾಳಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಡಿ.ಕೆ. ಶಿವಕುಮಾರ್ ವಿರುದ್ದ ವಾಗ್ದಾಳಿ ನಡೆಸಿದೆ.
ಕುಕ್ಕರ್ ಸ್ಫೋಟದ ಭಯೋತ್ಪಾದಕ ಪ್ರಕರಣವನ್ನು "ಭಯೋತ್ಪಾದಕ ಕೃತ್ಯ" ಎಂದು ಡಿಜಿಪಿಯವರು ತನಿಖೆಯ ಆಧಾರದಲ್ಲಿ ಘೋಷಿಸಿದರೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕೆಂಡಾಮಂಡಲವಾಗಿದ್ದಾರೆ. ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ "ನಮ್ಮ ಬ್ರದರ್ಸ್" ಎನ್ನಬೇಕಿತ್ತೇನು? ದೇಶದ ಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್ ಉಗ್ರರ ಪರ ನಿಲ್ಲುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
ಉಗ್ರರನ್ನು ಉಗ್ರ ಎಂದು ಕರೆದರೆ ಬೇಸರವಾಗುವುದು ಉಗ್ರನ ತಂದೆ ತಾಯಿಗೆ ಅಥವಾ @DKShivakumarಗೆ ಮಾತ್ರ. ಈಗ ಜನರು ನಿರ್ಧರಿಸಬೇಕಿದೆ. ಉಗ್ರರನ್ನು ಮಟ್ಟಹಾಕುವ ಪ್ರಧಾನಿ @narendramodiಯವರ ನೇತೃತ್ವದ ಬಿಜೆಪಿ ಸರ್ಕಾರ ಬೇಕೋ, ಉಗ್ರರು-ರೌಡಿಗಳ ಪಾಲನೆ ಪೋಷಣೆ ಮಾಡಿ ಉಗ್ರರನ್ನು ಬ್ರದರ್ಸ್ ಎನ್ನುವ ಕಾಂಗ್ರೆಸ್ ಬೇಕೋ?#CommunalCongress
— BJP Karnataka (@BJP4Karnataka) December 15, 2022
10/10
ಕುಕ್ಕರ್ ಸ್ಫೋಟದ ಬಳಿಕ ಎನ್ ಐ ಎ ಪ್ರಕರಣವನ್ನು ತೀವ್ರಗತಿಯಲ್ಲಿ ಪರಿಗಣಿಸಿ ಡಿಕೆಶಿ 'ಬ್ರದರ್'ನನ್ನು ಬಂಧಿಸಿದ ನಂತರ ಉಗ್ರಗಾಮಿ ಸಂಘಟನೆಗಳು ನೇರವಾಗಿ ಬೆಂಬಲ ಘೋಷಿಸಿದ್ದೂ ಅಲ್ಲದೇ 'ನಮ್ಮ ಹುಡುಗ ಯಶಸ್ವಿಯಾಗಿದ್ದಾನೆ' ಎಂದು ಹೇಳಿಕೆ ನೀಡಿತ್ತು. ಹಾಗಾದರದೂ ಉಗ್ರವಾದವಲ್ಲವೇ ಎಂದು ಪ್ರಶ್ನಿಸಿದೆ.

ಉಗ್ರಗಾಮಿಗಳೇ "ಉಗ್ರ ನಮ್ಮವನು" ಎಂದು ಅಬ್ಬರಿಸಿದರು ಡಿ ಕೆ ಶಿವಕುಮಾರ್ ಒಪ್ಪಿಕೊಳ್ಳದಿರುವುದು ಯಾಕಾಗಿ? ಒಂದು ಸಮುದಾಯದಿಂದ ಸಿಗೋ ನಾಲ್ಕು ಮತಗಳಿಗಾಗಿ ಉಗ್ರನನ್ನೇ ಉಗ್ರನಲ್ಲ ಎನ್ನುವ ಹಂತದಲ್ಲಿ ಕಾಂಗ್ರೆಸ್ ಇದೆ ಎಂದರೆ, ಇವರಿಗೆ ಅಧಿಕಾರ ಕೊಟ್ಟರೆ ಉಗ್ರರ ಟೆಕ್ ಪಾರ್ಕ್‌ನ್ನೇ ನಿರ್ಮಿಸಿದರೂ ಅಚ್ಚರಿಯಿಲ್ಲ ಎಂದು ವ್ಯಂಗ್ಯವಾಡಿದೆ.
ಕಾಂಗ್ರೆಸ್ ಇಷ್ಟು ವರ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಮಾಡಿದ್ದೆಲ್ಲವೂ ಇಂಥದ್ದೇ. ನಿಜವಾದ ಉಗ್ರರನ್ನು ಬಚ್ಚಿಟ್ಟು, ಹಿಂದೂಗಳ ಮೇಲೆಯೇ ಉಗ್ರರು ಎಂದು ಸುಳ್ಳು ಕೇಸ್ ಹಾಕುತ್ತಾ ಕುಳಿತಿದ್ದಕ್ಕೇ ಅಲ್ಲವೇ ಮುಂಬೈ ತಾಜ್ ಮೇಲೆ ಉಗ್ರರ ದಾಳಿಯಾಗಿದ್ದು? ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸವಿದ್ದಿದ್ದು? ಮಂಗಳೂರು ಕುಕ್ಕರ್ ಸ್ಪೋಟವನ್ನು ಸಮರ್ಥಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಅಧ್ಯಕ್ಷರು ತಮ್ಮದು ಭಯೋತ್ಪಾದನಾ ಸಮರ್ಥಕರ ಪಕ್ಷ ಎಂದು ಘೋಷಿಸಿಕೊಂಡಿದೆ. ಚುನಾವಣೆ ಸಮೀಪಿಸಿದಾಗ ಭಾವನಾತ್ಮಕ ಸಂಗತಿಗಳ ಹರಡುವಿಕೆ ಎನ್ನುವ ಡಿಕೆಶಿಯವರು, ದೇಶದ ಭದ್ರತೆಗೆ ಕಂಟಕ ತರುವ ಹೇಳಿಕೆ ನೀಡಿದ್ದಾರೆ.
ಮಂಗಳೂರು ಕುಕ್ಕರ್ ಸ್ಫೋಟವನ್ನು ಇಡೀ ಸಮಾಜ ಖಂಡಿಸಿದೆ. ಮುಸಲ್ಮಾನ ಸಮಾಜವೂ ಅದನ್ನು ಖಂಡಿಸಿದೆ. ಆದರೆ ಕಾಂಗ್ರೆಸ್ ಅಧ್ಯಕ್ಷರು ಮಾತ್ರ ಅದನ್ನು ಸಮರ್ಥಿಸಿಕೊಳ್ಳುತ್ತಾರೆ! ಆ ಮೂಲಕ ತಾವು ಅಧಿಕಾರಕ್ಕೆ ಬಂದರೆ ಏನಾಗುತ್ತದೆ ಎಂಬುದರ ಮುನ್ಸೂಚನೆಯನ್ನು ನೀಡಿದ್ದಾರೆ.

ಸರ್ಜಿಕಲ್ ಸ್ಟ್ರೈಕನ್ನು ಅಲ್ಲಗೆಳೆದರು, ಏರ್ ಸ್ಟ್ರೈಕನ್ನು ಅಲ್ಲಗೆಳೆದರು, ಪುಲ್ವಾಮಾ ದಾಳಿಯನ್ನು ಪಾಕಿಸ್ಥಾನದಲ್ಲ ಎಂದು ಸಮರ್ಥಿಸಿಕೊಂಡರು. ದೇಶದಲ್ಲಿ ನಡೆದ ಬಹುತೇಕ ಭಯೋತ್ಪಾದನಾ ಘಟನೆಗಳನ್ನೂ ಸಮರ್ಥಿಸಿಕೊಂಡರು. ಕಾಂಗ್ರೆಸ್ ಏನನ್ನು ಹೇಳಲು ಹೊರಟಿದೆ? ಭಯೋತ್ಪಾದಕರನ್ನು ಭಯೋತ್ಪಾದಕೆನ್ನಲು ಕಾಂಗ್ರೇಸಿಗೇಕೆ ಭಯ? ಕಾಂಗ್ರೆಸ್ ಆಡಳಿತಾವಧಿಯಲ್ಲಿ ಉಗ್ರ ಯಾಸಿನ್ ಮಲಿಕ್‌ಗೆ ಪ್ರಧಾನಿಗಳ ಕಚೇರಿಯವರೆಗೂ ಸಂಪರ್ಕ-ಸಂಬಂಧ-ಬಾಂಧವ್ಯವಿತ್ತು. ಕಾಂಗ್ರೆಸ್ ಸರ್ಕಾರವಿಲ್ಲದಿರುವ ಈಗ ಪೊಲೀಸರು ಉಗ್ರರು ಯಾರು ಎಂದು ಡಿ.ಕೆ.ಶಿವಕುಮಾರ್ ರನ್ನ ಕೇಳಿ ನಿರ್ಧರಿಸಬೇಕೆಂದರೆ, ಅಧಿಕಾರವಿದ್ದಾಗ ಎಷ್ಟು ಉಗ್ರರನ್ನು ಧರ್ಮ ಪ್ರಚಾರಕರನ್ನಾಗಿಸಿರಬಹುದು?
ಓಲೈಕೆ ರಾಜಕಾರಣದ ಕುಳಿಗೆ ಬಿದ್ದ ಕಾಂಗ್ರೆಸಿಗೆ ಸ್ವತಃ ತಾನೇ ಕುಳಿಗೆ ಬಿದ್ದಿದೆ ಕುಕ್ಕರ್ ಬಾಂಬ್ ಸ್ಪೋಟವನ್ನು ಸಮರ್ಥಿಸುವ ಮೂಲಕ ಕರ್ನಾಟಕವನ್ನು ಭಯೋತ್ಪಾದಕರ ಸ್ವರ್ಗ ಮಾಡಲು ಹೊರಟಿದೆ. ಮುಂದಿನ ಚುನಾವಣೆಯಲ್ಲಿ "ಸ್ಪೋಟಕ್ಕೆ ಬೆಂಬಲ", "ಸ್ಪೋಟಕ್ಕೆ ಸಮರ್ಥನೆ" ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ್ದರೂ ಆಶ್ಚರ್ಯವಿಲ್ಲ!. ಉಗ್ರರನ್ನು ಉಗ್ರ ಎಂದು ಕರೆದರೆ ಬೇಸರವಾಗುವುದು ಉಗ್ರನ ತಂದೆ ತಾಯಿಗೆ ಅಥವಾ ಡಿ ಕೆ ಶಿವಕುಮಾರ್ ಮಾತ್ರ. ಈಗ ಜನರು ನಿರ್ಧರಿಸಬೇಕಿದೆ. ಉಗ್ರರನ್ನು ಮಟ್ಟಹಾಕುವ ಪ್ರಧಾನಿ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಬೇಕೋ, ಉಗ್ರರು-ರೌಡಿಗಳ ಪಾಲನೆ ಪೋಷಣೆ ಮಾಡಿ ಉಗ್ರರನ್ನು ಬ್ರದರ್ಸ್ ಎನ್ನುವ ಕಾಂಗ್ರೆಸ್ ಬೇಕೋ? ಎಂದು ಬಿಜೆಪಿ ಪ್ರಶ್ನಿಸಿದೆ.
-
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್












Click it and Unblock the Notifications