ಸುಳ್ಳಾಡಿ ನಿಮ್ಮ ಅಲ್ಪ ಸ್ವಲ್ಪ ಮರ್ಯಾದೆಯನ್ನೂ ತೆಗೆದುಕೊಳ್ಳಬೇಡಿ. ಕಾಂಗ್ರೆಸ್, ಜೆಡಿಎಸ್ ವಿರುದ್ದ ಬಿಜೆಪಿ ಕಿಡಿ

ಬೆಂಗಳೂರು, ಜನವರಿ 5: ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ನಮ್ಮ ಒಂದೇ ಒಂದು ಕೋರಿಕೆಯೇನೆಂದರೆ, ಧಾವಂತದಲ್ಲಿ ನಂದಿನಿ-ಅಮುಲ್‌ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳಾಡಿ, ಉಳಿದಿರುವ ನಿಮ್ಮ ಅಲ್ಪ ಸ್ವಲ್ಪ ಮರ್ಯಾದೆಯನ್ನೂ ತೆಗೆದುಕೊಳ್ಳಬೇಡಿ. ಸುಳ್ಳು ನಾಳೆಯೂ ಆಡಬಹುದು, ಮರ್ಯಾದೆ ಮತ್ತೆ ಬರುವುದಿಲ್ಲ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ದ ಬಿಜೆಪಿ ಕಿಡಿಕಾರಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಗುಡ್‌ ಮಾರ್ನಿಂಗ್‌ ಕಾಂಗ್ರೆಸ್ ಹಾಗೂ ಜೆಡಿಎಸ್. ನಮ್ಮ ಪಕ್ಷದ ರಾಷ್ಟ್ರಾಧ್ಯಕ್ಷರಾದ ಜೆ..ಪಿ ನಡ್ಡಾ ಅವರು ರಾಜ್ಯಕ್ಕೆ ಬಂದಿಳಿದಿದ್ದಾರೆ. ಇದು ಸಹಜವಾಗಿಯೇ ತಮಗೆಲ್ಲ ಕಳವಳವಾಗಿರುವುದರಿಂದ, ತಮ್ಮ ಟೂಲ್‌ ಕಿಟ್‌ಗಳನ್ನು ಹೊರ ತೆಗೆದು ಬಿಜೆಪಿ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಲು ಧಾರಾಳವಾಗಿ ಪ್ರಯತ್ನಿಸಬಹುದು ಎಂದು ವ್ಯಂಗ್ಯವಾಡಿದೆ.

ಈಗಾಗಲೇ ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯ 24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವನ್ನು ಭದ್ರಪಡಿಸಿಕೊಳ್ಳುತ್ತಿರುವ ಬಿಜೆಪಿಯನ್ನು ತಡೆಯಬೇಕಾದ್ದು ವಿರೋಧ ಪಕ್ಷಗಳು ಅಗತ್ಯವಾಗಿ ಮಾಡಲೇ ಬೇಕಾದ ಕರ್ಮ. ಆದರೆ ಇದು ಅವರ ವಿಫಲಯತ್ನವಾಗುವುದಂತೂ ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿ ಟೀಕಿಸಿದೆ.

BJP Slams JDS And Congress Leaders

ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರ ಟೂಲ್‌ಕಿಟ್‌ಗಳು ಸಹಜವಾಗಿ ಪ್ರಾದೇಶಿಕತೆ, ಭಾಷೆ, ಜಾತಿ, ಧರ್ಮಗಳನ್ನು ಅವಲಂಬಿಸಿದ್ದು ಇಂಥದ್ದೇ ಯಾವುದಾದರೂ ಸುಳ್ಳು ಸುದ್ದಿಗಳನ್ನು ಹರಿಬಿಡುವುದನ್ನೇ ನಾವು ಎದುರು ನೋಡುತ್ತಿದ್ದೇವೆ. ಆದರೆ ಅವೆಲ್ಲಕ್ಕೂ ನಮ್ಮ ಒಂದೇ ಉತ್ತರವಾಗಿ ನಾವು ಮಾತಾಡಲ್ಲ, ರಾಜ್ಯದ ಅಭಿವೃದ್ಧಿ ಮಾತಾಡುತ್ತದೆ ಎಂದು ಟ್ವೀಟ್ ಮಾಡಿದೆ.

BJP Slams JDS And Congress Leaders

ಸ್ಮಾರ್ಟ್‌ ಸಿಟಿ ಯೋಜನೆಯಡಿ ದಾವಣಗೆರೆ, ತುಮಕೂರಿನಲ್ಲಿ ಆಗಿರುವ ಅಭಿವೃದ್ಧಿಯನ್ನು ಕಾಂಗ್ರೆಸ್ಸು ಕನಸ್ಸಲ್ಲೂ ಕಾಣುವುದಕ್ಕಾಗುವುದಿಲ್ಲ. ಹಾಗೇ ಚಿತ್ರದುರ್ಗದಲ್ಲಿ 1,96,093 ಮನೆಗಳಿಗೆ ಕುಡಿಯುವ ನೀರು ಪೂರೈಕೆ ಎಂಬುದೆಲ್ಲ ಏನೆಂದೂ ಜಾತಿಹುಳು ಜೆಡಿಎಸ್‌ನ ಜಡಮಂಡೆಗೆ ಅರ್ಥವೂ ಆಗುವುದಿಲ್ಲ ಎಂದು ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+