ದೆಹಲಿ ತಲುಪಿದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿವಾದ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 22 : 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್' ವಿಚಾರ ದೆಹಲಿ ತಲುಪಿದೆ. ಮಂಗಳವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಕರ್ನಾಟಕ ಬಿಜೆಪಿಯಲ್ಲಿನ ಗೊಂದಲಗಳು ಇತ್ಯರ್ಥವಾಗುವ ಸಾಧ್ಯತೆ ಇದೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೆ.ಎಸ್.ಈಶ್ವರಪ್ಪ ಸೇರಿದಂತೆ ಕೆಲವು ನಾಯಕರು ಇಂದು ಸಂಜೆ ದೆಹಲಿಗೆ ತೆರಳಿದ್ದಾರೆ. ರಾತ್ರಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್‌ ಲಾಲ್ ಜೊತೆ ಉಭಯ ನಾಯಕರ ಸಭೆ ನಡೆಯಲಿದೆ.[ಈಶ್ವರಪ್ಪ ಕಿವಿ ಹಿಂಡಲು ಹೈಕಮಾಂಡಿಗೆ ದೂರು?]

BJP state core committee meeting in Delhi on August 23, 2016

ಮಂಗಳವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರದ ಕುರಿತಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.[ರಾಯಣ್ಣ ಬ್ರಿಗೇಡಿಗೆ ಸೆಡ್ಡು ಹೊಡೆಯಲು ಯುವ ಅಹಿಂದ ಸ್ಥಾಪನೆ?]

ಯಡಿಯೂರಪ್ಪ ದೂರು : ಭಾನುವಾರ ಮಂಗಳೂರಿಗೆ ಅಮಿತ್ ಶಾ ಅವರು ಆಗಮಿಸಿದಾಗ ಯಡಿಯೂರಪ್ಪ ಅವರು ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆಯಿಂದ ಪಕ್ಷದ ಸಂಘಟನೆಗೆ ಹಿನ್ನಡೆ ಉಂಟಾಗಲಿದೆ ಎಂದು ದೂರು ನೀಡಿದ್ದಾರೆ.[ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಚನೆ ರಹಸ್ಯ ಬಯಲು!]

ಶನಿವಾರ ಹುಬ್ಬಳ್ಳಿಯಲ್ಲಿ ಆರ್‌ಎಸ್‌ಎಸ್ ನಾಯಕರನ್ನು ಭೇಟಿ ಮಾಡಿದ ಕೆ.ಎಸ್.ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಚನೆಯನ್ನು ಸಮರ್ಥಿಸಿಕೊಂಡಿದ್ದಾರೆ. ಉಭಯ ನಾಯಕರ ನಡುವೆ ಬ್ರಿಗೇಡ್ ವಿಚಾರದಲ್ಲಿ ಜಟಾಪಟಿ ಮುಂದುವರೆದಿದ್ದು, ದೆಹಲಿಯಲ್ಲಿ ಈ ಗೊಂದಲಗಳು ನಿವಾರಣೆಯಾಗುವ ಸಾಧ್ಯತೆ ಇದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka BJP will be holding its core committee meeting in New Delhi on Monday. Senior party leaders and members of the committee.
Please Wait while comments are loading...