ಚಿಕಿತ್ಸೆ, ವಿಶ್ರಾಂತಿಗಾಗಿ ಕೇರಳಕ್ಕೆ ತೆರಳಲಿರುವ ಯಡಿಯೂರಪ್ಪ
Recommended Video

ಬೆಂಗಳೂರು, ನವೆಂಬರ್ 30: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್, ಯಡಿಯೂರಪ್ಪ ವಿಧಾನಸಭೆ ಚಳಿಗಾಲದ ಅಧಿವೇಶನ ಮತ್ತು ಲೋಕಸಭೆ ಚುನಾವಣೆ ಸಿದ್ಧತೆಗೂ ಮುನ್ನ ಆರೋಗ್ಯದ ಕಡೆ ಗಮನ ಹರಿಸುವ ಸಲುವಾಗಿ ಚಿಕತ್ಸೆಗಾಗಿ ಕೇರಳಕ್ಕೆ ತೆರಳಲಿದ್ದಾರೆ.
ಯಡಿಯೂರಪ್ಪ ಶುಕ್ರವಾರ ಸಂಜೆ ಕೇರಳಕ್ಕೆ ತೆರಳಲಿದ್ದು, ಡಿಸೆಂಬರ್ 6ರ ಬಳಿಕ ವಾಪಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆರು ದಿನ ವಿಶ್ರಾಂತಿ ಪಡೆಯಲಿರುವ ಅವರು, ಪ್ರಕೃತಿ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಜತೆಗೆ ಬಿಡುವಾದರೆ ದೇವಸ್ಥಾನಗಳಿಗೂ ಭೇಟಿ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಮುಂದಿನ ತಿಂಗಳು ವಿಧಾನಸಭೆ ಚಳಿಗಾಲದ ಅಧಿವೇಶ ನಡೆಯಲಿದೆ. ಜತೆಗೆ ಈಗಾಗಲೇ ಮುಂಬರುವ ಲೋಕಸಭೆ ಚುನಾವಣೆ ಸಂಬಂಧ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ತಯಾರಿಗಳು ಆರಂಭವಾಗಿವೆ. ಹೀಗಾಗಿ ಡಿಸೆಂಬರ್ ಬಳಿಕ ಯಡಿಯೂರಪ್ಪ ಬಿಡುವಿಲ್ಲದಂತೆ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಿದೆ. ರಾಜ್ಯದಾದ್ಯಂತ ಪ್ರವಾಸ ಚಟುವಟಿಕೆಗಳನ್ನು ನಡೆಸಬೇಕಿದೆ.
ಇದಕ್ಕೆ ಮಾನಸಿಕ ಹಾಗೂ ದೈಹಿಕವಾಗಿ ಸಿದ್ಧಗೊಳ್ಳಲು ಮತ್ತು ಆರೋಗ್ಯದ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ಅವರು ಕೇರಳಕ್ಕೆ ವಿಶ್ರಾಂತಿಗಾಗಿ ತೆರಳಲಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ಅವರು ಒತ್ತಡ ನಿರ್ವಹಣೆ ಚಿಕಿತ್ಸೆಗಾಗಿ ಕೇರಳಕ್ಕೆ ತೆರಳಿದ್ದರು.












Click it and Unblock the Notifications