ನೇಹಾ ಹಿರೇಮಠ ಹತ್ಯೆ: ನಾಳೆ ಬೀದಿಗಿಳಿದು ಹೋರಾಟಕ್ಕೆ ಕರೆ ನೀಡಿದ ಬಿ.ವೈ ವಿಜಯೇಂದ್ರ

ಬೆಂಗಳೂರು, ಏಪ್ರಿಲ್‌ 21: ಗುರುವಾರ ಹುಬ್ಬಳ್ಳಿಯಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್‌ ಕಾರ್ಪೋರೆಟರ್ ಮಗಳು ನೇಹಾ ಹಿರೇಮಠ ಹತ್ಯೆ ಖಂಡಿಸಿ, ನ್ಯಾಯಕ್ಕಾಗಿ ಭಾರತೀಯ ಜನತಾ ಪಕ್ಷ ನಾಳೆ ಅಂದರೆ ಏಪ್ರಿಲ್‌ 22 ರಾಜ್ಯಾದ್ಯಂತ ಬೀದಿಗಿಳಿದು ಹೋರಾಟಕ್ಕೆ ಕರೆ ನೀಡಿದೆ. ಈ ಬಗ್ಗೆ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಚುನಾವಣೆಯ ಗಡಿಬಿಡಿಯಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು. ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಅಮಾನುಷ ಘಟನೆ. ಇದನ್ನು ಪೊಲೀಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ.

BJP State President BY Vijayendra Called Protest To Condemn Neha Murder Case

ಆದರೆ ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆಯುತ್ತಿರುವುದು ಸ್ಪಷ್ಟವಾಗಿದೆ. ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ.

ಭಾರತೀಯ ಜನತಾ ಪಾರ್ಟಿ ಸಿದ್ಧಾಂತಕ್ಕಾಗಿ ಜನ್ಮ ತಾಳಿದ ಪಕ್ಷ,ನಮ್ಮ ಆದ್ಯತೆ ಏನಿದ್ದರೂ 'ಧ್ಯೇಯ'ಕ್ಕೆ ಹೊರತು ಅಧಿಕಾರಕ್ಕಲ್ಲ. ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22 ರ ಸೋಮವಾರದಂದು ನಮ್ಮ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್‌ 22 ಧಾರವಾಡ ಬಂದ್‌ಗೆ ಕರೆ

ಇನ್ನು ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ನೇಹಾ ಹಿರೇಮಠ ಹತ್ಯೆ ಖಂಡಿಸಿ ಏಪ್ರಿಲ್‌ 22) ಧಾರವಾಡ ಬಂದ್‌ಗೆ ಕರೆ ನೀಡಿದ್ದಾರೆ. ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿರುವುದು ದುರ್ದೈವದ ಸಂಗತಿ. ನಮ್ಮ ಮಹಾನಗರದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಘಟನೆಯನ್ನು ಖಂಡಿಸುತ್ತೇವೆ. ನಮ್ಮ ಸಮುದಾಯದಿಂದ ನಾಳೆ (ಏಪ್ರಿಲ್‌ 22) ಅರ್ಧ ದಿನ ಸ್ವಯಂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತೇವೆ. ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಅಂಗಡಿ ಧಾರವಾಡ ಬಂದ್ ಇರಲಿದೆ. ಅಂಗಡಿಗಳ ಮೇಲೆ ಜಸ್ಟೀಸ್ ಫಾರ್ ನೇಹಾ ಅಂತ ಸ್ಟಿಕ್ಕರ್ ಹಚ್ಚುತ್ತೇವೆ ಎಂದು ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್​ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+