ಕೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ವಿಜಯೇಂದ್ರ ಆಗ್ರಹ
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯಲ್ಲಿ ಮತ್ತೆ ದೊಡ್ಡ ಲೋಪವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಪರೀಕ್ಷಾ ಕೇಂದ್ರವೊಂದರಲ್ಲಿ ಸೀಲ್ ತೆರೆದಿದ್ದ ಪ್ರಶ್ನೆಪತ್ರಿಕೆಯ ಬಂಡಲ್ ಪತ್ತೆಯಾಗಿದ್ದು, ಇದನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಕೂಡ ಒಪ್ಪಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಅನುಮಾನ ಹುಟ್ಟುಹಾಕಿದೆ ಎಂದಿದ್ದಾರೆ.
ಕೆಪಿಎಸ್‌ಸಿಯ ಮತ್ತೊಂದು ಮಹಾಲೋಪ ಬಯಲಾಗಿದೆ. ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ ಕೆಪಿಎಸ್‌ಸಿ ಕರ್ನಾಟಕ ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ ಎಂದು ದೂರಿದ್ದಾರೆ. ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೆ ಒಳಗಾಗಿದ್ದಾರೆ. ಇದೀಗ ಮತ್ತೊಂದು ಪ್ರಮಾದವೆಸಗಿ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಜತೆ ಚೆಲ್ಲಾಟವಾಡಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

ಸೋಮವಾರ ನಡೆದ ಮುಖ್ಯ ಪರೀಕ್ಷೆಯಲ್ಲಿ ಬೆಂಗಳೂರಿನ ಪರೀಕ್ಷಾ ಕೇಂದ್ರವೊಂದರಲ್ಲಿ ಸೀಲ್ ತೆರೆದಿದ್ದ ಪ್ರಶ್ನೆಪತ್ರಿಕೆಯ ಬಂಡಲ್ ಪತ್ತೆಯಾಗಿದೆ. ಇದನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರೂ ಒಪ್ಪಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಅನುಮಾನ ಹುಟ್ಟುಹಾಕಿದೆ. ಕರ್ನಾಟಕ ಲೋಕಸೇವಾ ಆಯೋಗವು ಪದೇ ಪದೇ ಎಡವಟ್ಟುಗಳು, ಗೊಂದಲಗಳನ್ನು ಸೃಷ್ಟಿಸಿ ದೇಶದೆದುರು ಕರ್ನಾಟಕದ ಘನತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಣುಮುಚ್ಚಿ ಕುಳಿತಿರುವುದು ದೌರ್ಭಾಗ್ಯವೇ ಸರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಕೂಡಲೇ ಪರೀಕ್ಷಾ ಕೊಠಡಿಗೆ ಪ್ರಶ್ನೆಪತ್ರಿಕೆಗಳು ಬರುವ ಮುನ್ನವೇ ಬಂಡಲ್ ತೆರೆದಿರುವ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಕೆಪಿಎಸ್‌ಸಿ ಪರೀಕ್ಷಾ ಅಭ್ಯರ್ಥಿಗಳಿಗಾಗುತ್ತಿರುವ ಬಹುದೊಡ್ಡ ಅನ್ಯಾಯ, ದ್ರೋಹಗಳನ್ನು ಸರಿಪಡಿಸದಿದ್ದರೆ ಲಕ್ಷಾಂತರ ವಿದ್ಯಾರ್ಥಿಗಳ ಆಕ್ರೋಶಕ್ಕೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆ ತೆರಬೇಕಾಗುತ್ತೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ನೆಟ್ಟಗೆ ಪರೀಕ್ಷೆ ನಡೆಸಲಾಗದ ನಾಲಾಯಕ್ ಸರ್ಕಾರ!
ಒಂದು ನೇಮಕಾತಿ ಪರೀಕ್ಷೆಯನ್ನ ನೆಟ್ಟಗೆ ನಡೆಸಲು ಕೈಲಾಗದಿರುವ ಈ ನಾಲಾಯಕ್ ಕಾಂಗ್ರೆಸ್ ಸರ್ಕಾರ ಇದ್ದರೆಷ್ಟು ಸತ್ತರೆಷ್ಟು? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಕೆಂಡಕಾರಿದ್ದಾರೆ. ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ. ಈಗ ಮುಖ್ಯ ಪರೀಕ್ಷೆಯ ಪ್ರಶ್ನೆಪತ್ರಿಕೆ ಎರಡು ದಿನಗಳ ಮುಂಚೆಯೇ ಸೋರಿಕೆ ಆಗಿತ್ತು ಎನ್ನುವ ಸುದ್ದಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಮರ್ಮಾಘಾತ ನೀಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಒಂದು ಸ್ಪರ್ಧಾತ್ಮಕ ಪರೀಕ್ಷೆಯನ್ನ ನೆಟ್ಟಗೆ ನಡೆಸಲಾಗದ ತಾವು ಯಾವ ಸೀಮೆ ಮುಖ್ಯಮಂತ್ರಿ ಸ್ವಾಮಿ? ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಕೈಯಲ್ಲಿ ಆಡಳಿತ ನಡೆಸುವುದು ಸಾಧ್ಯವಿಲ್ಲ ಎನ್ನುವುದಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅದು ಬಿಟ್ಟು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಈ ರೀತಿ ಪದೇ ಪದೇ ಯಾಕೆ ತೊಂದರೆ ಕೊಡುತ್ತೀರಿ? ಎಂದು ಅಶೋಕ್ ಹರಿಹಾಯ್ದಿದ್ದಾರೆ.
ಆದರೆ ಮುಖ್ಯ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಕರ್ನಾಟಕ ಲೋಕಸೇವಾ ಆಯೋಗ ಸ್ಪಷ್ಟನೆ ನೀಡಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications