BY Vijayendra: ಲಿಂಗಾಯತ ಸಭೆಗಳಿಗೆ ಬ್ರೇಕ್ ಹಾಕಿದ ವಿಜಯೇಂದ್ರ, ಕಾರಣವೇನು?
ಲಿಂಗಾಯತ ಸಮುದಾಯದ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಹಾಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಡೆ ಅಚ್ಚರಿ ಮೂಡಿಸಿದೆ. ಇತ್ತೀಚೆಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಣವು ಲಿಂಗಾಯತ ಸಮುದಾಯದ ನಾಯಕರ ಪ್ರತ್ಯೇಕ ಸಭೆ ನಡೆಸಿ, ಗಮನ ಸೆಳೆದಿತ್ತು. ಅದರಂತೆ ವಿಜಯೇಂದ್ರ ಬಣ ಕೂಡ ಲಿಂಗಾಯತ ಸಮುದಾಯದ ಸರಣಿ ಸಭೆಗಳಿಗೆ ಪ್ಲ್ಯಾನ್ ಮಾಡಿಕೊಂಡಿದ್ದರು. ಇದಕ್ಕೆ ವಿಜಯೇಂದ್ರ ಅವರೇ ಮಧ್ಯಪ್ರವೇಶಿಸಿ ತಡೆ ನೀಡಿದ್ದಾರೆ. ಇದಕ್ಕೆ ಕಾರಣವೇನು ಎಂಬುದು ಕುತೂಹಲ ಮೂಡಿಸಿದೆ.
ಈ ಬಗ್ಗೆ ಬಿವೈ ವಿಜಯೇಂದ್ರ ಅವರು ನಿನ್ನೆ ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ ಬಣದ ನಾಯಕರಿಗೆ ಸಭೆ ನಡೆಸದಂತೆ ಹೇಳಿದ್ದಾರೆ. ಸಮಸಮಾಜ ಕಟ್ಟಲು ತಮ್ಮನ್ನು ಸಮರ್ಪಿಸಿಕೊಂಡ ಅಣ್ಣ ಬಸವಣ್ಣನವರ ತತ್ವ ಅನುಸರಿಸಿ, ಬಿ.ಎಸ್.ಯಡಿಯೂರಪ್ಪನವರು ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು ಎಂಬ ಧ್ಯೇಯ ಪಾಲಿಸಿ ಆಡಳಿತ ನಡೆಸಿದವರು. ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿರುವ ನಾನು ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದವನು ಎಂಬ ಬಗ್ಗೆ ಕಾಳಜಿ ಪೂರ್ವಕ ಹೆಮ್ಮೆ ಇರಿಸಿಕೊಂಡಿದ್ದೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಈ ನಿಟ್ಟಿನಲ್ಲಿ ನಾನು ಸಮಾಜದ ಆಶಯಕ್ಕೆ ಪೂರಕವಾಗಿ ಸರ್ವಸಮಾಜಗಳ ಬಗ್ಗೆ ಸಮಭಾವ ಇಟ್ಟುಕೊಂಡು ಒಟ್ಟು ಸಮಾಜದ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಚಿಂತಿಸುವವನು. ಆ ಮೂಲಕ ಸಮಗ್ರ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಮಹಾಸಂಕಲ್ಪದ ಗುರಿ ಸಾಧಿಸಲು ಪರಿಶ್ರಮಿಸುತ್ತಿರುವ ಬಿಜೆಪಿ ಸಿದ್ಧಾಂತ ಪ್ರತಿಪಾದಿಸುವ ಒಬ್ಬ ನಿಷ್ಠ ಕಾರ್ಯಕರ್ತನಾಗಿ ಹೆಜ್ಜೆ ಇಡುತ್ತಿದ್ದೇನೆ ಎಂದಿದ್ದಾರೆ.
ಕೆಲವು ಹಿತೈಷಿಗಳು ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನನ್ನ ಹಾಗೂ ತಂದೆ ಬಿ.ಎಸ್.ಯಡಿಯೂರಪ್ಪನವರ ಮೇಲಿನ ಅಭಿಮಾನದ ಕಾರಣಕ್ಕಾಗಿ ವೀರಶೈವ ಲಿಂಗಾಯತ ಸಮುದಾಯದ ಸರಣಿ ಸಭೆಗಳನ್ನು ನಡೆಸಲು ಹೊರಟಿದ್ದಾರೆ. ಈ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣದಲ್ಲೇ ಇದನ್ನು ನಿಲ್ಲಿಸುವಂತೆ ತಿಳಿಸಿದ್ದೇನೆ. ಇದರಿಂದ ಪಕ್ಷಕ್ಕೂ ಸಹ ಮುಜುಗರದ ಸನ್ನಿವೇಶ ಸೃಷ್ಟಿ ಮಾಡಲಿದೆ ಎಂದು ಹೇಳಿದ್ದಾರೆ. ಆದ್ದರಿಂದ ನಮ್ಮ ಹಿತೈಷಿಗಳು ಹಾಗೂ ಅಭಿಮಾನಿಗಳು ತಮ್ಮ ಗಮನವನ್ನು ಪಕ್ಷ ಸಂಘಟನೆಯತ್ತ ಕೇಂದ್ರೀಕರಿಸಬೇಕೇ ಹೊರತು, ಸಮಾಜದ ಹೆಸರಿನಲ್ಲಿ ಸಭೆಗಳನ್ನು ಸಂಘಟಿಸುವ ಪ್ರಯತ್ನಗಳಲ್ಲ. ಇದನ್ನು ಈ ಕೂಡಲೇ ನಿಲ್ಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಲಿಂಗಾಯತ ನಾಯಕರ ಪ್ರತ್ಯೇಕ ಸಭೆ ನಡೆಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಬಣದವರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದ್ದರು. ಬಿಜೆಪಿ ಹೈಕಮಾಂಡ್‌ಗೆ ಲಿಂಗಾಯತ ನಾಯಕರ ಮೇಲೆ ಹೆಚ್ಚಿನ ಒಲವಿರುವ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಲಿಂಗಾಯತ ನಾಯಕರನ್ನೇ ಕಣಕ್ಕಿಳಿಸೋಣ ಎಂದು ನಿರ್ಧರಿಸಿದ್ದರು. ಅದರಂತೆ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಸಂಸದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ಬಸನಗೌಡ ಪಾಟೀಲ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆಯಾಗಿತ್ತು. ಇದಕ್ಕೆ ಟಕ್ಕರ್ ಕೊಡಲು ಮುಂದಾಗಿದ್ದ ವಿಜಯೇಂದ್ರ ಬಣಕ್ಕೆ ಈಗ ಮೂಗುದಾರ ಬಿದ್ದಿದೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್












Click it and Unblock the Notifications