ಚಲೋ ದಿಲ್ಲಿ ಬದಲು ಚಲೋ ಹಳ್ಳಿ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ: ಬಿ.ವೈ ವಿಜಯೇಂದ್ರ

ಬೆಂಗಳೂರು, ಫೆಬ್ರವರಿ 06: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಸಾಧ್ಯವಾಗದೇ, ಆರ್ಥಿಕ ಸಮತೋಲನ ಕಾಯ್ದುಕೊಳ್ಳುವಲ್ಲಿ ವಿಫಲವಾಗಿ ಬೊಕ್ಕಸ ಬರಿದು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ, ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಬಾಕಿಯ ನೆಪ ಮಾಡಿಕೊಂಡು ಕೇಂದ್ರ ಸರ್ಕಾದ ವಿರುದ್ಧ ಪ್ರತಿಭಟಿಸಲು ಹೊರಟಿದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಿ.ವೈ ವಿಜಯೇಂದ್ರ, ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುವುದೂ ಕೂಡ ವಂಚನೆಯ ಇನ್ನೊಂದು ಮುಖ, ಕರ್ನಾಟಕದ ಇದನ್ನು ಗಂಭೀರವಾಗಿ ಪರಿಗಣಿಸಲಿದೆ, ಕಾಂಗ್ರೆಸ್ ಸರ್ಕಾರದ ಭಂಡವಾಳ ಸಾಕ್ಷಿ ಸಮೇತ ಬಯಲಿ ಗೆಳೆಯಲಿದೆ ಎಂದಿದ್ದಾರೆ.

BJP State President BY Vijayendra Lashes Out At Congress On Chalo Dilli Protest

ಸುಮಾರು 60 ವರ್ಷಗಳ ಕಾಲ ಈ ದೇಶವನ್ನಾಳಿದ ಕಾಂಗ್ರೆಸ್ ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ ಎನ್ನುವಂತೆ ನಿರಂತರವಾಗಿ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ. ಇದನ್ನೆಲ್ಲ ಇಷ್ಟರಲ್ಲೇ ಪುಂಖಾನುಪುಂಖವಾಗಿ ನಾವೂ ಬಿಚ್ಚಿಟ್ಟು ಕಾಂಗ್ರೆಸ್‌ನ ಅಸಲಿ ಮುಖವಾಡ ಕನ್ನಡಿಗರ ಮುಂದೆ ಕಳಚಿಡಲಿದ್ದೇವೆ.

ಸ್ವಾವಲಂಬಿ ಬಲಿಷ್ಠ ಭಾರತ ನಿರ್ಮಾಣದ ಮಹಾ ಸಂಕಲ್ಪ ತೊಟ್ಟಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಕರ್ನಾಟಕವೇ ಸ್ಫೂರ್ತಿ, ಅಣ್ಣ ಬಸವಣ್ಣ ನವರ ಕಾಯಕ ತತ್ವವೇ ಪ್ರೇರಣೆ ಇದಕ್ಕೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಸಾಕ್ಷಿ ಸಂಕೇತವಾಗಿದೆ. ಸಮೃದ್ಧ ಕರ್ನಾಟಕ ಮೋದಿ ಅವರ ಆದ್ಯತೆಯಾಗಿರುವಾಗ ಆರ್ಥಿಕ ತಾರತಮ್ಯದ ಸುಳ್ಳು ಕಂತೆ ಹೊತ್ತು ಚಲೋ ದಿಲ್ಲಿ ಬದಲು ಬರಗಾಲದಿಂದ ತತ್ತರಿಸಿರುವ ರೈತರ ಕಣ್ಣೀರೊರೆಸಿ ಪರಿಹಾರ ನೀಡಲು ಚಲೋ ಹಳ್ಳಿ ಕಾರ್ಯಕ್ರಮ ಆರಂಭಿಸಿ ನಿಮ್ಮೊಂದಿಗೆ ನಾವೂ ಬರುತ್ತೇವೆ.

ಕನ್ನಡಿಗರಿಗೆ ಚಲೋ ದಿಲ್ಲಿ ಕರೆ ನೀಡಿದ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾಳೆ(ಫೆಬ್ರವರಿ 06) ಚಲೋ ದಿಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ. ಅನುದಾನ ತಾರತಮ್ಯ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುವ ಹೋರಾಟದಲ್ಲಿ ಕಾಂಗ್ರೆಸ್‌ ಮುಖಂಡರು, ಬಿಜೆಪಿ ಸಂಸದರು ಹಾಗೂ ಎಲ್ಲರೂ ಪಾಲ್ಗೊಳ್ಳುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರದಿಂದ ಕರ್ನಾಟಕದ ಮೇಲೆ ನಡೆಯುತ್ತಿರುವ ಆರ್ಥಿಕ ದೌರ್ಜನ್ಯದ ವಿರುದ್ಧ ಧ್ವನಿಯೆತ್ತೋಣ. ನಾಳೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುವ ಧರಣಿ ಸತ್ಯಾಗ್ರಹದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ನಮ್ಮ‌ ಹಕ್ಕಿಗಾಗಿ ಪ್ರತಿಭಟಿಸೋಣ ಎಂದು ಸಿದ್ದರಾಮಯ್ಯ ರಾಜ್ಯದ ಜನರಿಗೆ ಕರೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+