ಜಮೀರ್‌ ಪದಪುಂಜಗಳು ಪುಟ್ ಪಾತ್ ಪೋಕರಿಗಳೂ ನಾಚಿಸುವಂತಿದೆ-ಬಿ.ವೈ ವಿಜಯೇಂದ್ರ

ಬೆಂಗಳೂರು, ನವೆಂಬರ್‌ 12: ರಾಜ್ಯದಲ್ಲಿ ಉಪಚುನಾವಣೆಯ ಕಣ ರಂಗೇರಿದ್ದು, ರಾಜಕೀಯ ನಾಯಕರ ಮಾತು ಭರಾಟೆ ಜೋರಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸಿ.ಪಿ ಯೋಗೇಶ್ವರ ಪರ ಪ್ರಚಾರ ಮಾಡುತ್ತಿರುವ ವೇಳೆ ಸಚಿವ ಜಮೀರ್ ಅಹ್ಮದ್​ ಹೆಚ್​ಡಿ ಕುಮಾರಸ್ವಾಮಿ ಅವರನ್ನು ನಿಂದಿಸುವ ಭರದಲ್ಲಿ ಕರಿಯ ಕುಮಾರಸ್ವಾಮಿ ಎನ್ನುವ ಪದವನ್ನು ಬಳಸಿದ್ದಾರೆ. ಇದು ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಆಕ್ರೋಶಕ್ಕೆ ಕಾರಣವಾಗಿದೆ.

ಜಮೀರ್‌ ಅವರ ಹೇಳಿಕೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಖಂಡಿಸಿದ್ದಾರೆ. ದಿನಕ್ಕೊಂದು ವಿವಾದಗಳನ್ನು ಸೃಷ್ಟಿಸಿ ಕರ್ನಾಟಕವನ್ನು ಗೊಂದಲದ ಗೂಡನ್ನಾಗಿಸಲು ಪಣತೊಟ್ಟಂತೆ ವರ್ತಿಸುತ್ತಿರುವ ಸಚಿವ ಜಮೀರ್‌ ಅಹ್ಮದ್‌ ಇದೀಗ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರನ್ನು ವ್ಯಕ್ತಿಗತವಾಗಿ ನಿಂದಿಸುವ ಭರದಲ್ಲಿ ಸಂಸ್ಕೃತಿ ಹೀನರಂತೆ ವರ್ತಿಸಿದ್ದಾರೆ ಎಂದರು.

BJP State President BY Vijayendra Lashes Out At Minister Zameer Ahmed Khan

ನಾಗರಿಕ ಪರಿಭಾಷೆಯ ಪರಿಚಯವೇ ಇಲ್ಲದಂತೆ ಮಾತನಾಡುವ ಜಮೀರ್ ಅವರ ವರ್ತನೆ ಅತ್ಯಂತ ಖಂಡನೀಯ. ಚನ್ನಪಟ್ಟಣದಲ್ಲಿ ಭಾಷಣ ಮಾಡುವ ವೇಳೆ ಅವರು ಬಳಸಿರುವ ಪದಪುಂಜಗಳು ಪುಟ್ ಪಾತ್ ಪೋಕರಿಗಳೂ ನಾಚಿಸುವಂತಿದೆ. ಇಂಥವರನ್ನು ಸಚಿವರನ್ನಾಗಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಸಹ ಇತ್ತೀಚೆಗೆ ತಮ್ಮ ಹತಾಶೆಯ ಮನಸ್ಥಿತಿಯಿಂದ ಭಂಡ ಸಮರ್ಥನೆಗಿಳಿದು ಮಾಧ್ಯಮದವರ ಮೇಲೆ ಎರಗಿ ಬೀಳುತ್ತಿದ್ದಾರೆ ಎಂದು ಹೇಳಿದರು.

ಜಮೀರ್ ಅಹಮದ್ ರವರು ಮುಸಲ್ಮಾನರನ್ನು ಎತ್ತಿ ಕಟ್ಟುವುದು, ಸಮಾಜದಲ್ಲಿ ವಿದ್ವಾಂಸಕ ಸ್ಥಿತಿ ನಿರ್ಮಾಣ ಮಾಡುವುದು ತಮ್ಮ ಗುರಿ ಎಂದು ಭಾವಿಸಿದಂತಿದೆ. ಇಂತಹ ವರ್ತನೆಗಳನ್ನು ಕಾಂಗ್ರೆಸ್‌ ಪಕ್ಷ ಕೂಡ ವ್ಯವಸ್ಥಿತವಾಗಿ ನೀರೆರೆದು ಪೋಷಿಸುತ್ತಿದೆ. ಚನ್ನಪಟ್ಟಣದ ಮತದಾರರು ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಯನ್ನು ಹೀನಾಯವಾಗಿ ಸೋಲಿಸುವ ಮೂಲಕ ಬುದ್ಧಿ ಕಲಿಸಲು ಸಂಕಲ್ಪ ತೊಟ್ಟಿದ್ದಾರೆ.

BJP State President BY Vijayendra Lashes Out At Minister Zameer Ahmed Khan

ಈಗಾಗಲೇ ಜಮೀರ್ ಅಹಮದ್ ಅವರ ವಿರುದ್ಧ ವರಿಷ್ಠರಿಗೆ ದೂರು ಸಲ್ಲಿಸಿರುವ ಕಾಂಗ್ರೆಸ್'ನ ಹಲವಾರು ಶಾಸಕರು ಉಪಚುನಾವಣೆ ಮುಗಿಯುವುದಷ್ಟನ್ನೇ ಕಾಯುತ್ತಿದ್ದಾರೆ, ಜನ ಬುದ್ಧಿ ಕಲಿಸುವ ಮುನ್ನವೇ ಕಾಂಗ್ರೆಸ್ ಜಮೀರ್ ಅಹಮದ್ ರಂತಹ ಮನಸ್ಥಿತಿ ಇರುವ ವ್ಯಕ್ತಿಗಳ ಭಾರಕ್ಕೆ ತನ್ನಷ್ಟಕ್ಕೆ ತಾನೆ ಕುಸಿದು ನೆಲಕಚ್ಚಲಿದೆ ಎಂದರು.

ತುಷ್ಟೀಕರಣ ರಾಜಕಾರಣ ಒಂದೇ ತಮ್ಮ ಬ್ರಹ್ಮಾಸ್ತ್ರ ಎಂದು ತಿಳಿದಿರುವ ಕಾಂಗ್ರೆಸ್ ಪಕ್ಷದ ಅಮಲು ಇಳಿಸುವ ಕಾಲ ಸನ್ನಿಹಿತವಾಗಿದೆ. ರಾಜ್ಯದ ಉಪಚುನಾವಣೆಗಳ ಫಲಿತಾಂಶ ಅದಕ್ಕೆ ಮುನ್ನುಡಿ ಬರೆಯಲಿದೆ. ಸಮಾಜದಲ್ಲಿ ಅರಾಜಕತೆ ಸೃಷ್ಟಿಸಿ ಸಚಿವ ಸ್ಥಾನದ ಘನತೆಗೆ ತುಕ್ಕು ಹಿಡಿಸುತ್ತಿರುವ ಜಮೀರ್ ಅಹ್ಮದ್ ರವರನ್ನು ರಾಜ್ಯಪಾಲರು ಸಂಪುಟದಿಂದ ವಜಾಗೊಳಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+