Breaking: ಸತೀಶ್ ಜಾರಕಿಹೊಳಿ-ಬಿವೈ ವಿಜಯೇಂದ್ರ ದಿಢೀರ್ ಭೇಟಿ; ಏನಿದು ಬೆಳವಣಿಗೆ

ಬೆಂಗಳೂರು, ಅಕ್ಟೋಬರ್‌ 07: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ನಡೆಯುತ್ತಿರುವ ಹೊತ್ತಲಿ, ಮಲ್ಲಿಕಾರ್ಜುನ್‌ ಖರ್ಗೆ ಅವರನ್ನ ದಲಿತ ನಾಯಕ ಹಾಗೂ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ ಮಾಡಿರುವುದು ಹಲವು ಪ್ರಶ್ನೆಗಳು ಮೂಡುವಂತೆ ಮಾಡಿತ್ತು. ಇದೀಗ ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ‌ಯನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದಿಢೀರ್ ಭೇಟಿಯಾಗಿದ್ದಾರೆ.

ಭಾನುವಾರವಷ್ಟೇ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಅವರನ್ನ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿಯಾಗಿದ್ದು, ಇಂದು ಶಿವಾನಂದ ಸರ್ಕಲ್ ಬಳಿಯ ಸರ್ಕಾರಿ ನಿವಾಸದಲ್ಲಿ ವಿಜಯೇಂದ್ರ ಅವರು ಸಚಿವ ಸತೀಶ್‌ ಜಾರಕಿಹೊಳಿ ಅವರನ್ನ ಭೇಟಿಯಾಗಿದ್ದಾರೆ. ಇಬ್ಬರು ನಾಯಕರ ಭೇಟಿ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ.

BJP State President By Vijayendra Meets Satish Jarakiholi

ಮುಡಾ ಪ್ರಕರಣದಿಂದಾಗಿ ಸಿದ್ದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕಿದ್ದು, ಮುಡಾ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ A2 ಆರೋಪಿಯಾಗಿದ್ದಾರೆ. ಈ ಹಿನ್ನೆಲೆ ಮುಡಾ ಕೇಸ್​ನಲ್ಲಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ, ಸಿಎಂ ಬದಲಾವಣೆಯ ಕೂಗು ಕೇಳಿಬಂದಿತ್ತು. ಕೈ ಪಾಳಯದಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಗಳು ಫುಲ್‌ ಆ್ಯಕ್ಟೀವ್ ಆಗಿದ್ದಾರೆ. ಇಷ್ಟು ದಿನ ಸೈಲೆಂಟ್‌ ಆಗಿದ್ದ ಸತೀಶ್ ಜಾರಕಿಹೊಳಿ ದಿಢೀರ್ ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಇತ್ತ ಪರಮೇಶ್ವರ್ ಮತ್ತು ಸತೀಶ್ ಜಾರಕಿಹೊಳಿ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ.

ಈ ಎಲ್ಲಾ ಬೆಳವಣೆಗೆಗಳ ಮಧ್ಯೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೀಗ ಸತೀಶ್ ಜಾರಕಿಹೊಳಿಯನ್ನು ಬಿವೈ ವಿಜಯೇಂದ್ರ ಭೇಟಿ ಮಾಡಿರೋದು ಕುತೂಹಲ ಮೂಡಿಸಿದ್ದು, ಸತೀಶ್‌ ಜಾರಕಿಹೊಳಿ ಭೇಟಿ ಕುರಿತು ಬಿ ವೈ ವಿಜಯೇಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ.

ಶಿವಮೊಗ್ಗ-ಶಿಕಾರಿಪುರ ಮಾರ್ಗದಲ್ಲಿರುವ ಕುಟ್ರಳ್ಳಿ ಬಳಿ ಟೋಲ್ ಗೇಟ್ ತೆರವು ಮಾಡುವಂತೆ ಮನವಿ ಮಾಡಿದ್ದೇನೆ. ಈ ಟೋಲ್‌ ಬೇರೆಡೆ ಶಿಫ್ಟ್​ ಮಾಡಲು ಮನವಿ ಮಾಡಿದ್ದೇವೆ. ರಾಜ್ಯ ಹೆದ್ದಾರಿಯಲ್ಲಿ ಎರಡು ಟೋಲ್ ಬರುತ್ತವೆ. ಇದರಿಂದ ರೈತರಿಗೆ ಅನಾನುಕೂಲವಾಗಿದೆ. ಮಕ್ಕಳು ಶಾಲೆಗೆ ಹೋಗುವುದು ತೊಂದರೆ ಆಗಿದೆ. ಟೋಲ್ ಶಿಫ್ಟ್​ಗೆ ಹೋರಾಟಗಳು ನಡೆದಿವೆ. ಸಚಿವರಾದ ಸತೀಶ್‌ ಜಾರಕಿಹೊಳಿ ಅವರು ಸಕಾರಾತ್ಮಕವಾಗಿ ಭರವಸೆ ಕೊಟ್ಟಿದ್ದಾರೆ. ಶೀಘ್ರದಲ್ಲೇ ಸಭೆ ಕರೆಯುವುದಾಗಿ ಹೇಳಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+