ರಾಜ್ಯಾಧ್ಯಕ್ಷ ಸ್ಥಾನಕ್ಕೆ ಭುಗಿಲೆದ್ದ ಫೈಟ್! ಶೋಭಾ ಹೆಸರು ಎಂಟ್ರಿ, ಅಖಾಡಕ್ಕಿಳಿದ DVS; ರಾಜಾಹುಲಿ ಸೈಲೆಂಟ್ ಆಗಿದ್ದು ಯಾಕೆ?
ಬೆಂಗಳೂರು, ಅಕ್ಟೋಬರ್ 23: ಈ ಹಿಂದೆ ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಬಿಜೆಪಿ ವಿಧಾಮಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಳಿಕ ಹೈಕಮಾಂಡ್ ಕರ್ನಾಟಕ ಬಿಜೆಪಿಯನ್ನ ಕಡೆಗಣಿಸಿದೆ ಎನ್ನುವ ಚರ್ಚೆ ಬಿಜೆಪಿ ಪಾಳಯದಲ್ಲಿ ಶುರುವಾಗಿದೆ.
ಹೌದು, ಸ್ವತಃ ಬಲದ ಮೇಲೆ ಅಧಿಕಾರಕ್ಕೆ ಬರುವ ಮೂಲಕ ಕರ್ನಾಟಕದಲ್ಲಿ ಮತ್ತೆ ಕಮಲ ಅರಳಿಸಬೇಕು ಎಂಬ ನಿರೀಕ್ಷೆಯೊಂದಿಗೆ ಬಿಜೆಪಿ ಹೈಕಮಾಂಡ್ ರಾಜ್ಯಾದ್ಯಂತ ಅಬ್ಬರದ ಪ್ರಚಾರವನ್ನ ನಡೆಸಿದ್ರೂ ಆದರೆ, ರಾಜ್ಯದಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಆರು ತಿಂಗಳಾದರೂ ರಾಜ್ಯಾಧ್ಯಕ್ಷರ ಹಾಗೂ ವಿಪಕ್ಷ ನಾಯಕರ ಆಯ್ಕೆಯಾಗಿಲ್ಲ. ಈಗಾಗಲೇ ಎರಡು ಸ್ಥಾನಗಳ ಆಯ್ಕೆ ವಿಳಂಬವಾಗುತ್ತಿರುವ ಕುರಿತು ಬಿಜೆಪಿ ನಾಯಕರೇ ಹೈಕಮಾಂಡ್ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು. ವಿಪಕ್ಷ ನಾಯಕನಿಲ್ಲದೇ ಮೊದಲ ಬಾರಿಗೆ ಬಜೆಟ್ ಅಧಿವೇಶನವೂ ನಡೆದಿದೆ. ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರು ಸಾಕಷ್ಟು ಟೀಕೆಗಳಿಂದ ರಾಜ್ಯ ಬಿಜೆಪಿ ಸಾಕಷ್ಟು ಮುಜುಗರವನ್ನು ಅನುಭವಿಸಿದ್ದು, ಇದೀಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯಾಧ್ಯಕ್ಷ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಮುಂದಾಗಿದ್ದು, ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೆಸರು ಅಂತಿಮವಾಗಿದೆ ಎನ್ನುವ ಮಾತು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.
ಇತ್ತ ಈ ಬಾರೀ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಕೈ ತಪ್ಪಲಿದೆ ಎನ್ನುವ ವರದಿಗಳು ಕೇಳಿ ಬಂದಿದ್ದು, ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಕೆ ವಿಳಂಬವಾಗುತ್ತಿರುವ ಕುರಿತು ಮಾಜಿ ಸಿಎಂ ಸದಾನಂದಗೌಡರು ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಸದಾನಂದಗೌಡರಿಗೆ ಹೈಕಮಾಂಡ್ ಬುಲಾವ್ ನೀಡಿತ್ತು.

ಇನ್ನೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಸದಾನಂದಗೌಡರು ಬಹಿರಂಗವಾಗಿ ಬೇಡಿಕೆ ಇಡದಿದ್ದರೂ ಇದೀಗ ಫುಲ್ ಆಕ್ಟೀವ್ ಆಗಿದ್ದಾರೆ. ಬಿಜೆಪಿಯಲ್ಲಿ ಯಾವ ನಾಯಕರು ತೋರಿಸಿದ ಉತ್ಸಾವವನ್ನ ಸದಾನಂದಗೌಡರು ತೋರಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ಮುಂದಾಗಿದ್ದಾರೆ.
ಏಕಾಏಕಿ ರಾಜಾಹುಲಿ ಬಿ ಎಸ್ ಯಡಿಯೂರಪ್ಪ ಅವರು ಸೈಲೆಂಟ್ ಆಗಿದ್ಯಾಕೆ!
ಹೌದು, ಪುತ್ರ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನವನ್ನ ಕೊಡಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಲವು ಪ್ರಯತ್ನಗಳನ್ನ ನಡೆಸಿದ್ರು. ಆದರೆ, ಹೈಕಮಾಂಡ್ ಮಟ್ಟದಲ್ಲಿ ಬಿಜೆಪಿ ಹಿರಿಯ ಮಹಿಳೆ ಹಾಗೂ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೆಸರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಫೈನಲ್ ಆಗಿದೆ ಎಂಬ ಚರ್ಚೆಗಳು ಬಿಜೆಪಿ ಪಾಳಯದಲ್ಲಿ ಶುರುವಾಗಿದ್ದು, ಬಿ ಎಸ್ ಯಡಿಯೂರಪ್ಪ ಫುಲ್ ಸೈಲೆಂಟ್ ಆಗಿದ್ದಾರೆ.
ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿ ಪಟ್ಟ ಕಟ್ಟುವ ಕುರಿತು ಹೈಕಮಾಂಡ್ ನಾಯಕರ ಜೊತೆಗೆ ಚರ್ಚಿಸಿದ್ರೂ ಎನ್ನಲಾಗಿತ್ತು. ಆದರೆ, ಹೈಕಮಾಂಡ್ ನಾಯಕರ ಮಟ್ಟದಲ್ಲಿ ಆಗಿರುವ ಚರ್ಚೆಯಿಂದಾಗಿ ಹೈಕಮಾಂಡ್ ನಾಯಕರಿಂದಲೂ ಯಡಿಯೂರಪ್ಪ ಅವರು ಅಂತರ ಕಾಯ್ದುಕೊಂಡಿದ್ದು, ಎಲ್ಲಾ ಹೋರಾಟಗಳಿಂದಲೂ ದೂರ ಉಳಿದಿದ್ದಾರೆ. ಅಲ್ಲದೇ ಕಳೆದ ವಾರ ದೆಹಲಿಯಲ್ಲಿ ನಡೆದ 5 ರಾಜ್ಯಗಳ ಚುನಾವಣೆ ಕುರಿತ ಸಂಸದೀಯ ಮಂಡಳಿ ಸಭೆಗೂ ಗೈರಾಗಿದ್ದಾರೆ ಎನ್ನಲಾಗಿದೆ.












Click it and Unblock the Notifications