ರಾಜ್ಯ ರಾಜಕೀಯದಲ್ಲಿ ಸಂʼಕ್ರಾಂತಿʼ: ಬಿಜೆಪಿ ರಾಜ್ಯಾಧ್ಯಕ್ಷ, ವಿರೋಧಪಕ್ಷದ ನಾಯಕ ಬದಲಾವಣೆ: ಪ್ರಿಯಾಂಕ್ ಖರ್ಗೆ
ಕಲಬುರಗಿ: ರಾಜ್ಯ ಸರ್ಕಾರಕ್ಕೆ ಎರಡುವರೆ ವರ್ಷ ಪೂರ್ಣಗೊಂಡಿದ್ದು, ಕೈ ಪಾಳಯದಲ್ಲಿ ನಂವೆಬರ್, ಡಿಸೆಂಬರ್ ಕ್ರಾಂತಿ ಬಗ್ಗೆ ತೀವ್ರ ಚರ್ಚೆಯಾಗುತ್ತಿತ್ತು. ಇದೀಗ ಮಕರ ಸಂಕ್ರಾಂತಿ ನಂತರ ರಾಜ್ಯದಲ್ಲಿ ಭಾರೀ ಬದಲಾವಣೆಯಾಗುತ್ತಿದೆ ಎಂದು ಬಿಜೆಪಿ ನಾಯಕರು ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆವ್ಯಂಗ್ಯವಾಡಿದ್ದು, ಹೌದು. ಸಾಕಷ್ಟು ಬದಲಾವಣೆ ಯಾಗಲಿವೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧಪಕ್ಷದ ನಾಯಕರು ಬದಲಾಗಲಿದ್ದಾರೆ ಎಂದು ಹೇಳಿದ್ದಾರೆ.
ಕಲಬುರಗಿ ಯ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಕೇಂದ್ರ ಸರ್ಕಾರದ ವಿ.ಬಿ ಜಿ- ರಾಮ್- ಜಿ ಕಾಯ್ದೆ ಸಂವಿಧಾನ ವಿರೋಧಿಯಾಗಿದ್ದು, ಅದರ ವಿರುದ್ದ ರಾಜ್ಯ ಸರ್ಕಾರ ಈಗಾಗಲೇ ನಿರ್ಣಯ ಕೈಗೊಂಡಿದೆ. ಜೊತೆಗೆ ಕಾನೂನು ಹೋರಾಟ ರೂಪಿಸುತ್ತಿದೆ ಎಂದು ಹೇಳಿದರು. ಕಳೆದ 20 ವರ್ಷದಿಂದ ನರೇಗಾ ಕಾಯ್ದೆ ಜಾರಿಗೆ ಬಂದಿದೆ. ಇವರು ಕಳೆದ 11 ವರ್ಷದಿಂದಲೂ ಅಧಿಕಾರದಲ್ಲಿದ್ದರು ಭ್ರಷ್ಟಾಚಾರ ನಡೆದಿದ್ದರೆ ಆಗ ವಿರೋಧಸದೆ ಏನು ಕತ್ತೆ ಕಾಯುತ್ತಿದ್ದರಾ? ಆಗಲಿಂದಲೂ ಇವರಿಗೆ ಪಾಲೂ ಹೋಗಿತ್ತಾ ? ಅಥವಾ ಹೋಗಿರುವ ಪಾಲು ಕಡಿಮೆಯಾಗಿತ್ತಾ ಎಂದು ಪ್ರಶ್ನಿಸಿದರು.

ಕೇಂದ್ರದ ವಿಬಿ. ಜಿ- ರಾಮ್- ಜಿ ಕಾಯ್ದೆ ದಶರಥನ ರಾಮನೂ ಅಲ್ಲ, ಸೀತಾರಾಮನೂ ಅಲ್ಲ. ಅದು ನಾಥೂರಾಮ.ನಾಥೂರಾಮ ಎಂದರೆ ಅದು ಆರ್ ಎಸ್ ಎಸ್ ತತ್ವದ ರಾಮ. ಆರ್ ಎಸ್ ಎಸ್ ತತ್ವಗಳು ಹೇಗಿರುತ್ತವೆ ಎಂದು ಗೊತ್ತಿದೆಯಲ್ಲ? ಅವು ಬಡವರ ವಿರುದ್ದವಾಗಿರುತ್ತವೆ. ಧರ್ಮದ ನಶೆಯಲ್ಲಿ ಜನರನ್ನು ತೇಲಾಡಿಸುವುದು ಆಗಿದೆ ಎಂದು ತೀಕ್ಷ್ಣ ವಾಗಿ ಪ್ರತಿಕ್ರಿಯಿಸಿದ ಅವರು ಕಾಯ್ದೆ ವಿರುದ್ದ ನಿರ್ಣಯ ಕೈಗೊಳ್ಳಲಾಗಿದೆ. ಕಾಯ್ದೆ ಬಗ್ಗೆ ವಿವರವಾಗಿ ಚರ್ಚಿಸಲು ಎರಡು ದಿನಗಳ ವಿಶೇಷ ಅಧಿವೇಶನ ಕರೆಯಲು ಕೂಡಾ ತೀರ್ಮಾನಿಸಲಾಗಿದೆ ಅವರು ಅವರ ವಿಚಾರ ಹೇಳಲಿ. ನಾವು ನಮ್ಮ ವಿಚಾರ ಹೇಳುತ್ತೇವೆ. ಇದರ ಜೊತೆಗೆ ಕಾನೂನು ಹೋರಾಟ ರೂಪಿಸಲಾಗುತ್ತಿದೆ. ರಾಜ್ಯ ಸರ್ಕಾರ ದೊಂದಿಗೆ ಮಹಿಳಾ ಸಂಘಟನೆಗಳು, ಕೂಲಿ ಕಾರ್ಮಿಕರ ಸಂಘಟನೆಗಳು ಕೈಜೋಡಿಸಲು ಮುಂದಾಗಿವೆ. ಮೂರು ಕೃಷಿಕಾಯ್ದೆಗಳು ವಾಪಸ್ ಪಡೆದಂತೆ ಇದು ಕೂಡಾ ವಾಪಸ್ ಆಗಲಿದೆ ಎಂದರು.
ಈ ಹಿಂದಿನ ನರೇಗಾ ಯೋಜನೆಯಲ್ಲಿ ಅವ್ಯವಹಾರ ಆಗಿದ್ದು ಅದಕ್ಕೆ ಹೊಸ ಕಾಯ್ದೆ ಅದನ್ನು ತಡೆಯಲು ಜಾರಿಯಾಗುತ್ತಿದೆ. ಹಾಗಾಗಿ ಕಾಂಗ್ತೆಸ್ ವಿರೋಧಿಸಿತ್ತಿದೆ ಎಂದು ಬಿಜೆಪಿ ಹೇಳಿರುವುದರ ಕುರಿತು ಪ್ರಶ್ನಿಸಿದಾಗ ದಿನಕ್ಕೆ ಸುಮಾರು12 ಕೋಟಿ ಕಾರ್ಮಿಕರು ಕೆಲಸ ಮಾಡುವಂತ ಯೋಜನೆ. ಸಾವಿರಾರು ಕುಟುಂಬಗಳು ಜೀವನ ನಿರ್ವಹಣೆ ನಡೆಯುತ್ತಿತ್ತು. ಅಂತಹ ಬೃಹತ್ ಯೋಜನೆಯಲ್ಲಿ ಎಲ್ಲೋ ಒಂದೆರಡು ಕಡೆ ತಪ್ಪುಗಳಾದಾಗ ಇಡೀ ಯೋಜನೆಯನ್ನೇ ರದ್ದು ಗೊಳಿಸಬೇಕಾ? ನೆಗಡಿ ಬಂದರೆ ಮೂಗನ್ನೇ ಕತ್ತರಿಸಿಕೊಳ್ಳಬೇಕಾ? ಪ್ರಧಾನ ಮಂತ್ರಿ ಕೌಶಲ್ಯ ಯೋಜನೆಯಲ್ಲಿ ಸುಮಾರು 14,500 ಕೋಟಿ ಅವ್ಯವಹಾರವಾಗಿದೆ ಎಂದು ವರದಿ ಹೇಳುತ್ತಿದೆ. ಹಾಗಾದಾರೆ, ಅದನ್ನು ಯಾಕೆ ರದ್ದು ಮಾಡಿಲ್ಲ ಎಂದು ಪ್ರಶ್ನಿಸಿದರು.
ಯಾದಗಿರಿಯಲ್ಲಿ ಕ್ರೀಡಾಪಟುವೊಬ್ಬ ಪ್ರತಿಭಟನೆ ಮಾಡಿದ್ದು ನಂತರ ಅವರ ಮೇಲೆ ಕೇಸ್ ದಾಖಲಾಗಿರುವ ಬಗ್ಗೆ ಮತ್ತು ಸಂಗೀತಗಾರರ ಉಪಕರಣಗಳನ್ನು ಒಡೆದು ಹಾಕಿರುವ ಘಟನೆ ಬಗ್ಗೆ ಕೇಳಿದಾಗ, ಆ ಬಗ್ಗೆ ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ದ್ಷೇಷ ಭಾಷಣ ವಿರುದ್ಧದ ಬಿಲ್ ರಾಜ್ಯಪಾಲರ ಬಳಿ ಇರುವ ಕುರಿತು ಪ್ರಶ್ನಿಸಿದಾಗ, ಸರ್ಕಾರದ ಕೆಲವೊಂದು ಬಿಲ್ ಗಳು ಪಾಸಾಗಿವೆ ಕೆಲವೊಂದು ಅವರ ಬಳಿ ಇವೆ. ಸರ್ಕಾರಕ್ಕೆ ಸಲಹೆ ಸೂಚನೆ ಇದ್ದರೆ ಕೊಡಲಿ ಆದರೆ ರಾಜಕೀಯ ದುರುದ್ದೇಶದಿಂದಾಗಿ ತಡೆಹಿಡಿಯುವುದು ಸರಿಯಲ್ಲ ಎಂದ ಪ್ರಿಯಾಂಕ್ ಖರ್ಗೆ ಹೇಳಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications