ಚುನಾವಣೆ ಗೆಲ್ಲಲು ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಕಾರ್ಯತಂತ್ರ
ನವದೆಹಲಿ, ಜನವರಿ 01: ಕರ್ನಾಟಕ ಸರ್ಕಾರದಲ್ಲಿ ಏಳು ಮಂದಿ ಒಕ್ಕಲಿಗ ಸಚಿವರಿದ್ದಾರೆ. ಕೇಂದ್ರದಲ್ಲಿಯೂ ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲಾಗಿದೆ. ಹಳೆ ಮೈಸೂರು ಭಾಗದ ನಾಯಕರನ್ನು ಬಿಜೆಪಿ ಪಂಚಾಯಿತಿಯಿಂದ ಸಂಸತ್ತಿನವರೆಗೆ ಅವಕಾಶ ನೀಡಲು ಆಹ್ವಾನಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
ಬಿಜೆಪಿಯು ಹಳೆ ಮೈಸೂರು ಭಾಗದಲ್ಲಿ ನೆಲೆಯೂರಲೂ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಶನಿವಾರ ಈ ಭಾಗದಲ್ಲಿ ಬೃಹತ್ ಸಮಾವೇಶ ನಡೆಯಿತು. ಇದರ ಬೆನ್ನಲ್ಲೆ ರಾಷ್ಟ್ರ ರಾಜಧಾನಿಯಲ್ಲಿ ಮಾತನಾಡಿದ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ಸಿ.ಟಿ ರವಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿಯಲ್ಲಿ ಎಲ್ಲಾ ಸಮುದಾಯಗಳಿಗೂ ಜಾಗವಿದೆ. ನಾವು 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಪಕ್ಷದ ತತ್ವವಾಗಿದೆ. ಮುಂಬರಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯು ಹಳೇ ಮೈಸೂರು ಭಾಗದಿಂದ ಹಲವಾರು ಒಕ್ಕಲಿಗ ನಾಯಕರನ್ನು ಪಂಚಾಯತ್‌ನಿಂದ ಸಂಸತ್ತಿಗೆ ಸೆಳೆಯಲಿದ್ದೇವೆ ಎಂದರು.
ಬಿಜೆಪಿಯ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಚುನಾವಣಾ ಪೂರ್ವದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ವು ಹಳೆ ಮೈಸೂರು ಭಾಗದಲ್ಲಿ ಈಗಾಗಲೇ ಕೆಳ ಹಂತದಲ್ಲಿ ರಾಜಕೀಯ ಕಾರ್ಯಚಟುವಟಿಕೆ ಆರಂಭವಾಗಿದೆ. ಈ ಬಾರಿ ಬಿಜೆಪಿ ಹಳೆ ಮೈಸೂರು ಭಾಗದಲ್ಲಿ ದಾಖಲೆ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲಿದೆ. ಈ ಸಂಬಂಧ ಬೂತಮಟ್ಟದಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ಹೇಳಿದರು.

'ಸಾಂಸ್ಕೃತಿಕ ರಾಷ್ಟ್ರೀಯತೆ' ಮತ್ತು 'ಅಭಿವೃದ್ಧಿಯ ರಾಜಕೀಯ' ದಲ್ಲಿ ಬಿಜೆಪಿಗೆ ನಂಬಿಕೆ ಇದೆ. ಬಿಜೆಪಿ ಕೇವಲ ಒಂದು ಸಮುದಾಯದ ನಿರ್ದಿಷ್ಟ ಪಕ್ಷ ಎಂಬಂತೆ ನೋಡಬಾರದು. ಇಲ್ಲಿ ಎಲ್ಲರಿಗೂ ಅವಕಾಶ ಇದೆ. ಹಳೇ ಮೈಸೂರು ಭಾಗದಲ್ಲಿ 59 ಕ್ಷೇತ್ರಗಳಿವೆ. 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ ಒಂಬತ್ತು ಕ್ಷೇತ್ರ ಗೆದ್ದಿದೆ. ಈ ಬಾಗಿ ಅಧಿಕ ಕ್ಷೇತ್ರ ಗೆಲ್ಲುವ ವಿಶ್ವಾಸ ವಿದೆ. ಒಕ್ಕಲಿಗರು ಕರ್ನಾಟಕದ ಜನಸಂಖ್ಯೆಯ ಶೇ.15ರಷ್ಟಿದ್ದಾರೆ. ಅವರು ಲಿಂಗಾಯ ಸಮುದಾಯದ ನಂತರ ರಾಜ್ಯದ ಎರಡನೇ ಅತ್ಯಂತ ಪ್ರಭಾವಶಾಲಿ ಮತಬ್ಯಾಂಕ್ ಎಂದು ಪರಿಗಣಿಸಲಾಗಿದೆ ಎಂದು ತಿಳಿಸಿದರು.
ಈ ಭಾಗವು ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರದಂತಹ ಜಿಲ್ಲೆಗಳನ್ನು ಒಳಗೊಂಡಿದೆ ಎಂದರು.












Click it and Unblock the Notifications