ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಚುನಾವಣೆ : ಬಿಜೆಪಿ ಟಿಕೆಟ್‌ ಹಂಚಿಕೆಗೆ ಮೂರು ಸೂತ್ರ!

|
Google Oneindia Kannada News

Recommended Video

ಕರ್ನಾಟಕ ವಿಧಾನಸಭಾ ಚುನಾವಣೆ 2018 : ಬಿಜೆಪಿ ಟಿಕೆಟ್ ಹಂಚಿಕೆಗೆ 3 ಸೂತ್ರ | Oneindia Kannada

ಬೆಂಗಳೂರು, ಜನವರಿ 18 : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಕ್ಷದ ನಾಯಕರಿಗೆ ಕಟ್ಟಪ್ಪಣೆ ನೀಡಿ ಹಲವು ತಿಂಗಳು ಕಳೆದಿದೆ. ಖುದ್ದಾಗಿ ಅವರು ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಹೈಕಮಾಂಡ್ ಮತ್ತು ರಾಜ್ಯ ನಾಯಕರು ಟಿಕೆಟ್ ಹಂಚಿಕೆಯತ್ತ ಗಮನ ಹರಿಸಿದ್ದಾರೆ. ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ಬಗ್ಗೆ ಅಮಿತ್ ಶಾ ಅವರೇ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಈ ಬಗ್ಗೆ ರಾಜ್ಯ ನಾಯಕರಿಗೂ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಜಯಭೇರಿ ಬಾರಿಸಲು ಅಮಿತ್ ಶಾ 23 ಸೂತ್ರಕರ್ನಾಟಕದಲ್ಲಿ ಜಯಭೇರಿ ಬಾರಿಸಲು ಅಮಿತ್ ಶಾ 23 ಸೂತ್ರ

ಮೂರು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಅಮಿತ್ ಶಾ ಸಿದ್ಧತೆ ನಡೆಸುತ್ತಿದ್ದಾರೆ. ಯಾವ ಕ್ಷೇತ್ರದಲ್ಲಿಯೂ ಟಿಕೆಟ್‌ ವಿಚಾರಕ್ಕೆ ಗೊಂದಲ ಉಂಟಾಗಿ, ಅದರಿಂದ ಪಕ್ಷಕ್ಕೆ ಚುನಾವಣೆಯಲ್ಲಿ ಹಿನ್ನಡೆ ಉಂಟಾಗಬಾರದು ಎಂಬುದು ಅಮಿತ್ ಶಾ ಅವರ ಲೆಕ್ಕಾಚಾರ.

ಅಭ್ಯರ್ಥಿಗಳ ಘೋಷಣೆಗೆ ತಡೆ, ಏನಿದು ಅಮಿತ್ ಶಾ ಲೆಕ್ಕಾಚಾರ?ಅಭ್ಯರ್ಥಿಗಳ ಘೋಷಣೆಗೆ ತಡೆ, ಏನಿದು ಅಮಿತ್ ಶಾ ಲೆಕ್ಕಾಚಾರ?

ಕಾಂಗ್ರೆಸ್ ಮತ್ತು ಜೆಡಿಎಸ್‌ ಪಕ್ಷಗಳಿಗಿಂತ ಮೊದಲು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಬಿಜೆಪಿ ನಿರ್ಧರಿಸಿದೆ. ಆದರೆ, ವಲಸೆ ಬಂದ ನಾಯಕರಿಗೆ ಟಿಕೆಟ್, ಸಂಸದರು, ವಿಧಾನಪರಿಷತ್ ಸದಸ್ಯರಿಗೆ ಟಿಕೆಟ್ ನೀಡುವ ಕುರಿತು ಪಕ್ಷ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ...

ಒಗ್ಗಟ್ಟಾಗಿರಲು ಸೂಚನೆ

ಒಗ್ಗಟ್ಟಾಗಿರಲು ಸೂಚನೆ

ಬಳ್ಳಾರಿ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಟಿಕೆಟ್ ಆಕಾಂಕ್ಷಿ ನಾಯಕರು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಎರಡು ಬಾರಿ ಕರ್ನಾಟಕಕ್ಕೆ ಬಂದು ಹೋದ ಅಮಿತ್ ಶಾ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ. ಆದ್ದರಿಂದ, ಯಾವ ನಾಯಕರು ಟಿಕೆಟ್‌ ಬಗ್ಗೆ ಬಹಿರಂಗ ಹೇಳಿಕೆ ಕೊಡುತ್ತಿಲ್ಲ.

ಅಭ್ಯರ್ಥಿ ಘೋಷಿಸದಂತೆ ನಿರ್ದೇಶನ

ಅಭ್ಯರ್ಥಿ ಘೋಷಿಸದಂತೆ ನಿರ್ದೇಶನ

ನವ ಕರ್ನಾಟಕ ಪರಿವರ್ತನಾ ಯಾತ್ರೆಯಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಬಾರದು ಎಂದು ಅಮಿತ್ ಶಾ ಈಗಾಗಲೇ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರ ನಾಯಕರಿಗೆ ಸೂಚನೆ ನೀಡಿದ್ದಾರೆ.

ಮೂರು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಮೂರು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಹಾಲಿ ಶಾಸಕರು, ಹೊಸದಾಗಿ ಪಕ್ಷಕ್ಕೆ ಸೇರಿದವರು, ಪರಿಷತ್, ಸಂಸತ್ ಸದಸ್ಯರು ಹೀಗೆ ಮೂರು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಮೊದಲು ಹಾಲಿ ಶಾಸಕರು ಇರುವ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಎಲ್ಲಾ ನಿರ್ಧಾರ ಹೈಮಾಂಡ್‌ಗೆ

ಎಲ್ಲಾ ನಿರ್ಧಾರ ಹೈಮಾಂಡ್‌ಗೆ

ಎರಡು ಸಮೀಕ್ಷೆಗಳನ್ನು ಎಲ್ಲಾ ಕ್ಷೇತ್ರಗಳಲ್ಲಿ ನಡೆಸಲಾಗುತ್ತಿದ್ದು ನಂತರ ಯಾರು ಅಭ್ಯರ್ಥಿ? ಎಂಬುದನ್ನು ಅಂತಿಮಗೊಳಿಸಲಾಗುತ್ತದೆ. ಟಿಕೆಟ್ ಹಂಚಿಕೆ ಬಗ್ಗೆ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿದೆ.

ಗೊಂದಲ ನಿವಾರಿಸಲು ತಂತ್ರ

ಗೊಂದಲ ನಿವಾರಿಸಲು ತಂತ್ರ

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ, ಗೊಂದಲ ನಿವಾರಿಸಲು ಬಿಜೆಪಿ ನಿರ್ಧರಿಸಿದೆ. ಜನವರಿ 9ರಂದು ರಾಜ್ಯ ನಾಯಕರ ಜೊತೆ ಅಮಿತ್ ಶಾ ಈ ಕುರಿತು ಚರ್ಚೆ ನಡೆಸಿದ್ದಾರೆ. ಅಭ್ಯರ್ಥಿ ಘೋಷಣೆ ಮಾಡಿದ ಬಳಿಕ ಅವರು ಅಧಿಕೃತವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ.

English summary
BJP will play safe while issuing tickets for Karnataka assembly elections 2018. Party will release candidates list in three phase. BJP president Amit Shah will take final decision on candidate selection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X