ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ : ಬಿಜೆಪಿ ಟಿಕೆಟ್ ಹಂಚಿಕೆಗೆ ಎ, ಬಿ, ಸಿ ಸೂತ್ರ!

|
Google Oneindia Kannada News

Recommended Video

Karnataka Elections 2018 : ಬಿಜೆಪಿ ಟಿಕೆಟ್ ಹಂಚಿಕೆಗೆ ಎ, ಬಿ, ಸಿ ಸೂತ್ರಗಳು | Oneindia Kannada

ಬೆಂಗಳೂರು, ಮಾರ್ಚ್ 21 : ಕರ್ನಾಟಕ ಬಿಜೆಪಿ 2018ರ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆಗೆ ಸಿದ್ಧವಾಗಿದೆ. ದೆಹಲಿಯಿಂದ ಆಗಮಿಸಿದ್ದ ತಂಡ ರಾಜ್ಯದ 224 ಕ್ಷೇತ್ರಗಳಲ್ಲಿ ಸಮೀಕ್ಷೆ ಮುಗಿಸಿ, ವಾಪಸ್ ಆಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ತಂಡ ವರದಿ ನೀಡಲಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಮಾರ್ಚ್ ಅಂತ್ಯದ ವೇಳೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಮೂರು ಸಮೀಕ್ಷೆಗಳನ್ನು ಮಾಡಲಾಗಿದ್ದು, ಈ ವರದಿಯ ಆಧಾರದ ಮೇಲೆ ಅಭ್ಯರ್ಥಿ ಯಾರು? ಎಂದು ತೀರ್ಮಾನ ಕೈಗೊಳ್ಳಲಾಗುತ್ತದೆ.

ಬಿಜೆಪಿ ಮೊದಲ ಪಟ್ಟಿ, ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್?ಬಿಜೆಪಿ ಮೊದಲ ಪಟ್ಟಿ, ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್?

ಹಾಲಿ ಶಾಸಕರಿಗೆಲ್ಲ ಈ ಬಾರಿಯ ಚುನಾವಣೆ ಟಿಕೆಟ್ ಖಚಿತವಾಗಿದೆ. ಬೇರೆ ಪಕ್ಷದಿಂದ ಬಂದವರು, ವಿಧಾನಪರಿಷತ್ ಸದಸ್ಯರು, ಸಂಸದರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇವರಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ? ಎನ್ನುವುದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ.

ಬೆಂಗಳೂರು ನಗರದ 24 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿಬೆಂಗಳೂರು ನಗರದ 24 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಸಮೀಕ್ಷೆ ವರದಿಯ ಆಧಾರದ ಮೇಲೆ ರಾಜ್ಯದ 224 ಕ್ಷೇತ್ರಗಳನ್ನು ಎ, ಬಿ ಮತ್ತು ಸಿ ಎಂದು ಮೂರು ವಿಭಾಗಗಳಾಗಿ ವಿಂಗಡನೆ ಮಾಡಲಾಗುತ್ತದೆ. ಟಿಕೆಟ್ ಹಂಚಿಕೆ, ಪ್ರಚಾರ ಕಾರ್ಯದಲ್ಲೂ ಈ ಎ, ಬಿ, ಸಿ ಸೂತ್ರ ಕೆಲಸ ಮಾಡಲಿದೆ....

ಎ ವ್ಯಾಪ್ತಿಯಲ್ಲಿ ಬರುವ ಕ್ಷೇತ್ರಗಳು

ಎ ವ್ಯಾಪ್ತಿಯಲ್ಲಿ ಬರುವ ಕ್ಷೇತ್ರಗಳು

'ಎ' ವಿಧಾನಸಭಾ ವ್ಯಾಪ್ತಿಯಲ್ಲಿ ಬರುವ ಕ್ಷೇತ್ರಗಳಲ್ಲಿ ಹಾಲಿ ಶಾಸಕರು ಮತ್ತು ಪಕ್ಷದ ಪ್ರಮುಖ ನಾಯಕರು ಇರುತ್ತಾರೆ. ಈ ಕ್ಷೇತ್ರಗಳಲ್ಲಿ ಪಕ್ಷ ಪ್ರಬಲವಾಗಿದ್ದು ಗೆಲುವು ಸುಲಭವಾಗಿದೆ.

ಟಿಕೆಟ್ ಹಂಚಿಕೆ ಮಾಡುವಾಗ 'ಎ' ವ್ಯಾಪ್ತಿಯಲ್ಲಿ ಬರುವ ಕ್ಷೇತ್ರಗಳಿಗೆ ಒಬ್ಬರು ಅಭ್ಯರ್ಥಿಯ ಹೆಸರನ್ನು ಮಾತ್ರ ಅಂತಿಮಗೊಳಿಸಲಾಗುತ್ತದೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಟಿಕೆಟ್ ಆಕಾಂಕ್ಷಿಗಳು ಸಹ ಇರುವುದಿಲ್ಲ.

ಚುನಾವಣಾ ಪ್ರಚಾರ ಮಾಡುವ ಸಂದರ್ಭದಲ್ಲಿಯೂ ಅಷ್ಟೇ. ಈ ಕ್ಷೇತ್ರಗಳತ್ತ ಕಡಿಮೆ ಗಮನ ಹರಿಸಲಾಗುತ್ತದೆ.

‘ಬಿ' ಕ್ಷೇತ್ರಗಳು ಯಾವುದು?

‘ಬಿ' ಕ್ಷೇತ್ರಗಳು ಯಾವುದು?

'ಬಿ' ವ್ಯಾಪ್ತಿಯಲ್ಲಿ ಬರುವ ಕ್ಷೇತ್ರಗಳಲ್ಲಿ ಪಕ್ಷ ಪ್ರಭಾವವನ್ನು ಹೊಂದಿದೆ. ಆದರೆ, ಗೆಲುವು ಸುಲಭವಲ್ಲ. ಸ್ವಲ್ಪ ಪ್ರಯತ್ನ ನಡೆಸಿದರೆ ಗೆಲ್ಲುವ ಕ್ಷೇತ್ರಗಳಿವು. ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಿಂದ ಸೋತ ಕ್ಷೇತ್ರಗಳನ್ನು ಈ ಪಟ್ಟಿಗೆ ಸೇರಿಸಲಾಗಿದೆ.

ಟಿಕೆಟ್ ಹಂಚಿಕೆ ಮಾಡುವಾಗಲೂ ಈ ಕ್ಷೇತ್ರಕ್ಕೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಚುನಾವಣಾ ಸಮಿತಿಗೆ ನೀಡಲಾಗುತ್ತದೆ. ಯಾರಿಗೆ ಟಿಕೆಟ್ ನೀಡಬೇಕು? ಎಂದು ಸಮಿತಿ ತೀರ್ಮಾನವನ್ನು ಕೈಗೊಳ್ಳಲಿದೆ.

ಚುನಾವಣೆ ಪ್ರಚಾರದ ಸಂದರ್ಭದಲ್ಲಿಯೂ ಈ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ರಾಷ್ಟ್ರೀಯ ನಾಯಕರು ಈ ಕ್ಷೇತ್ರಗಳಲ್ಲಿ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಮತ ಯಾಚನೆ ಮಾಡಲಿದ್ದಾರೆ.

‘ಸಿ' ಕ್ಷೇತ್ರದ ವ್ಯಾಪ್ತಿಗೆ ಬರುವ ಕ್ಷೇತ್ರಗಳು

‘ಸಿ' ಕ್ಷೇತ್ರದ ವ್ಯಾಪ್ತಿಗೆ ಬರುವ ಕ್ಷೇತ್ರಗಳು

'ಸಿ' ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಸುಲಭವಾಗಿಲ್ಲ. ಸಾಕಷ್ಟು ಪ್ರಯತ್ನ ನಡೆಸಿದರೆ ಇಲ್ಲಿ ಗೆಲುವು ಸಾಧಿಸಬಹುದಾಗಿದೆ. ಕಾಂಗ್ರೆಸ್ ಪಕ್ಷದ ಸಚಿವರು, ಪ್ರಭಾವಿ ಶಾಸಕರು ಇರುವ ಕ್ಷೇತ್ರಗಳನ್ನು 'ಸಿ' ವ್ಯಾಪ್ತಿಗೆ ಸೇರಿಸಲಾಗಿದೆ.


ಟಿಕೆಟ್ ಹಂಚಿಕೆ ಮಾಡುವಾಗ ಮೂವರ ಹೆಸರನ್ನು ಈ ಕ್ಷೇತ್ರಗಳಿಗೆ ಅಂತಿಮಗೊಳಿಸಲಾಗುತ್ತದೆ. ಯಾರಿಗೆ ಟಿಕೆಟ್ ನೀಡಬೇಕು? ಎಂದು ಚುನಾವಣಾ ಸಮಿತಿ ನಿರ್ಧಾರವನ್ನು ಕೈಗೊಳ್ಳಲಿದೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿಯೂ 'ಸಿ' ವ್ಯಾಪ್ತಿಯಲ್ಲಿ ಬರುವ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಪ್ರಮುಖ ನಾಯಕರು ಈ ಕ್ಷೇತ್ರಗಳಲ್ಲಿ ಸಂಚಾರ ನಡೆಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಯಡಿಯೂರಪ್ಪ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರು

ಯಡಿಯೂರಪ್ಪ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರು

ನವ ಕರ್ನಾಟಕ ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದರು.

ಆದರೆ, ಈಗ ಪಕ್ಷದ ಟಿಕೆಟ್ ಹಂಚಿಕೆ ಮಾನದಂಡ ಬದಲಾಗಿದೆ. ಆದ್ದರಿಂದ, ಘೋಷಿತ ಅಭ್ಯರ್ಥಿಗಳಿಗೆ ಟಿಕೆಟ್ ಸಿಗಲಿದೇಯೇ?, ಇಲ್ಲವೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಒಂದು ವೇಳೆ ಟಿಕೆಟ್ ಸಿಗದಿದ್ದರೆ ಅಭ್ಯರ್ಥಿಗಳು ಬೇರೆ ಪಕ್ಷ ಸೇರುವ ಸಾಧ್ಯತೆಯೂ ಇದೆ.

ಅಭ್ಯರ್ಥಿಗಳ ಪಟ್ಟಿ ಯಾವಾಗ ಬಿಡುಗಡೆ?

ಅಭ್ಯರ್ಥಿಗಳ ಪಟ್ಟಿ ಯಾವಾಗ ಬಿಡುಗಡೆ?

ಅಮಿತ್ ಶಾ ಕಳಿಸಿದ್ದ ತಂಡ ರಾಜ್ಯದಲ್ಲಿ ಸಮೀಕ್ಷೆ ನಡೆಸಿ ದೆಹಲಿಗೆ ವಾಪಸ್ ಆಗಿದೆ. ಈ ವಾರದಲ್ಲಿ ತಂಡ ಸಮೀಕ್ಷೆಯ ವರದಿಯನ್ನು ಹೈಕಮಾಂಡ್ ನಾಯಕರಿಗೆ ನೀಡಲಿದೆ. ಬಳಿಕ ನಾಯಕರು ಸಭೆ ನಡೆಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ.

ರಾಮನವಮಿಯ ಹೊತ್ತಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಹೆಚ್ಚು ಗೊಂದಲಗಳು ಇಲ್ಲದ ಕ್ಷೇತ್ರಗಳಿಗೆ ಮೊದಲು ಅಭ್ಯರ್ಥಿಗಳನ್ನು ಪಕ್ಷ ಅಂತಿಮಗೊಳಿಸಲಿದೆ.

English summary
BJP divided Karnataka's 224 assembly constituency as A, B and C. Party will issue ticket to candidates according to this strategy for 2018 Karnataka assembly elections. Party 1st list may announced in the end of the March.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X