ಬಾಣಂತಿಯರು, ಶಿಶುಗಳ ಸಾವು: ಆರೋಗ್ಯ ಸಚಿವ ವಿರುದ್ಧ ಲೋಕಾಯುಕ್ತರಿಗೆ ಮನವಿ ಸಲ್ಲಿಸಿದ ಬಿಜೆಪಿ ನಿಯೋಗ

ಬೆಂಗಳೂರು: ಬಳ್ಳಾರಿ ಹಾಗೂ ರಾಜ್ಯದ ವಿವಿಧ ಜಿಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಮತ್ತು ಶಿಶುವಿನ ಮರಣ ಸಂಬಂಧ ರಾಜ್ಯ ಬಿಜೆಪಿ ನಿಯೋಗವು ಶುಕ್ರವಾರ ಲೋಕಾಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ವೈದ್ಯಕೀಯ ಪ್ರಕೋಷ್ಟದ ರಾಜ್ಯ ಸಂಚಾಲಕ ಡಾ.ನಾರಾಯಣ್, ಸಹ ಸಂಚಾಲಕ ಡಾ.ಎಂ.ಎಸ್.ಸದಾನಂದ, ರಾಜ್ಯ ಸಮಿತಿ ಸದಸ್ಯರಾದ ಡಾ. ಲಕ್ಷ್ಮಣ್, ಡಾ. ಸಾಯಿ ಆದರ್ಶ್ ಅವರ ನಿಯೋಗವು ಈ ಮನವಿ ಸಲ್ಲಿಸಿದೆ. ಬಾಣಂತಿಯರ ಸಾವು, ಶಿಶುಗಳ ದುರ್ಮರಣದ ಕುರಿತು ಗಮನ ಸೆಳೆಯಿತಲ್ಲದೆ ಮಧ್ಯಪ್ರವೇಶ ಮಾಡುವಂತೆ ಒತ್ತಾಯಿಸಿತು.

BJP Submits Petition To Lokayukta Against Health Minister

ಈ ದುರ್ಘಟನೆ ಸಂಬಂಧ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ಕೊಡಬೇಕೆಂದು ನಿಯೋಗವು ಮನವಿಯಲ್ಲಿ ಕೋರಿದೆ. ಸಾವಿನ ಹಿಂದಿರುವ ಕಾರಣ, ಕಳಪೆ ಔಷಧಿ ಖರೀದಿಯ ಹಿಂದಿರುವವರು ಮತ್ತು ವಿಷಯವನ್ನು ಹತ್ತಿಕ್ಕಲು ಮುಂದಾದವರ ವಿಷಯ ಹೊರಬರುವ ದೃಷ್ಟಿಯಿಂದ ನ್ಯಾಯಾಂಗ ತನಿಖೆ ಮಾಡಿಸುವಂತೆ ಮನವಿ ತಿಳಿಸಿದೆ.

ಆಸ್ಪತ್ರೆಯ ಆಡಳಿತವರ್ಗ, ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳು ಇದರ ಹಿಂದಿದ್ದು, ಘಟನೆಗೆ ಕಾರಣರಾದವರು ಕಾನೂನಿನಡಿ ಶಿಕ್ಷೆ ಎದುರಿಸುವಂತಾಗಬೇಕು; ಆರೋಗ್ಯ ಕ್ಷೇತ್ರದಲ್ಲಿ ಭ್ರಷ್ಟಾಚಾರ ಮತ್ತು ನಿರ್ಲಕ್ಷ್ಯವನ್ನು ಸಹಿಸಲಾಗದು ಎಂದು ತಿಳಿಸಲಾಗಿದೆ.

ಸಂತ್ರಸ್ತ ಕುಟುಂಬಗಳಿಗೆ ಸಮರ್ಪಕ ಪರಿಹಾರ ಕೊಡಬೇಕು. ವೈದ್ಯಕೀಯ ಕ್ಷೇತ್ರಕ್ಕೆ ಅಗತ್ಯ ಆಡಳಿತಾತ್ಮಕ ಸುಧಾರಣೆ ತಂದು ಭ್ರಷ್ಟಾಚಾರ ಮತ್ತು ಕಳಪೆ ಗುಣಮಟ್ಟದ ಔಷಧಿ ಮತ್ತು ಇತರ ಸಲಕರಣೆಗಳ ಸರಬರಾಜಾಗದಂತೆ ನೋಡಿಕೊಳ್ಳಬೇಕು ಎಂದು ನಿಯೋಗ ತನ್ನ ಮನವಿಯಲ್ಲಿ ತಿಳಿಸಿತು. ದುರ್ಘಟನೆಯ ಹೊಣೆ ಹೊತ್ತು ದಿನೇಶ್ ಗುಂಡೂರಾವ್ ಅವರು ಸಚಿವ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮೈಸೂರಿನಲ್ಲಿ ಭಂಡತನದ ಪ್ರಾಯೋಜಿತ ಸಮಾವೇಶ: ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ, ನಿಮ್ಮ ಕುಟುಂಬ ಪಡೆದ 14 ನಿವೇಶನಗಳೂ ಸೇರಿದಂತೆ ಮುಡಾದಲ್ಲಿ ಲೂಟಿಯಾದ ಸಾವಿರಾರು ಕೋಟಿ ಬೆಲೆ ಬಾಳುವ ಐದು ಸಾವಿರಕ್ಕೂ ಹೆಚ್ಚು ನಿವೇಶನಗಳ ಹಗರಣದ ಕುರಿತು ನಾವು 'ಮೈಸೂರು ಚಲೋ ಬೃಹತ್‌ ಪಾದಯಾತ್ರೆ' ಕೈಗೊಂಡರೆ ಅದಕ್ಕೆ ಪರ್ಯಾಯವಾಗಿ ನಿಮ್ಮ ಭ್ರಷ್ಟತೆಯ ಮುಖ ಮುಚ್ಚಿಕೊಳ್ಳಲು ಮೈಸೂರಿನಲ್ಲಿ ಭಂಡತನದ ಪ್ರಾಯೋಜಿತ ಸಮಾವೇಶ ಏರ್ಪಡಿಸುತ್ತೀರಿ ಎಂದು ಬಿ ವೈ ವಿಜಯೇಂದ್ರ ಹೇಳಿದರು.

ಇದೀಗ ವಿಧಾನಸೌಧವನ್ನು ಖಾಲಿಮಾಡಿ ಮಂತ್ರಿ ಮಹೋದಯರೆಲ್ಲರನ್ನೂ ಕಡ್ಡಾಯವಾಗಿ ಕರೆದುಕೊಂಡು ಹೋಗಿ ಕೋಟಿ ಕೋಟಿ ಖರ್ಚು ಮಾಡಿ ಸಮಾವೇಶಗಳನ್ನು ಸಂಘಟಿಸುತ್ತಿರುವ ನೀವು ಮಾಡಿರುವ ಭ್ರಷ್ಟಾತಿ ಭ್ರಷ್ಟ ಹಗರಣಗಳಿಂದ ಕಾನೂನಿನ ಕುಣಿಕೆಗೆ ಸಿಲುಕಿ ಅಧಿಕಾರ ಕಳೆದುಕೊಳ್ಳುವ ಭಯದಿಂದ ಹಾಗೂ ನಿಮ್ಮ ಸ್ವವೈಭವೀಕರಣಕ್ಕಾಗಿ ಸಂಘಟಿಸುತ್ತಿರುವ ಸಮಾವೇಶಗಳು ಜನಕಲ್ಯಾಣ ಎಂದು ಹೇಗೆ ಅರ್ಥೈಸುತಿದ್ದೀರಿ,
ಇದು ಜನ ಕಲ್ಯಾಣ ವಿರೋಧಿ ಸಮಾವೇಶ, ಅಭಿವೃದ್ಧಿ ವಿರೋಧಿ ಸಮಾವೇಶ, ಭ್ರಷ್ಟತೆಯನ್ನು ಸಮರ್ಥಿಸುವ ಸಮಾವೇಶ, ಆತ್ಮವಂಚನೆ ಮಾಡಿಕೊಂಡು ನೈತಿಕತೆಯನ್ನು ಗಾಳಿಗೆ ತೂರಿ ಲಜ್ಜೆಗೆಟ್ಟ ವರ್ತನೆಯ ಪ್ರತೀಕವಾಗಿ ಸಂಘಟಿಸುವ ಇಂತಹ ಸಮಾವೇಶಗಳಿಗೆ ಕಾಲವೇ ಉತ್ತರ ಹೇಳಲಿದೆ.

ಇಂತಹ ಸಮಾವೇಶಗಳಿಂದ ನಾಡಿನ ಜನರ ತೆರಿಗೆದಾರರ ಹಣ ಎಷ್ಟು ಪೋಲಾಗುತ್ತಿದೆ, ಸರ್ಕಾರಿ ಯಂತ್ರ ಹಾಗೂ ಮಾನವ ಸಂಪನ್ಮೂಲ ಹೇಗೆ ದುರ್ಬಳಕೆ ಯಾಗುತ್ತಿದೆ, ಎಂಬುದರ ಬಗ್ಗೆ ಪರಾಮರ್ಶೆ ನಡೆಯಲಿ. ಆಡಳಿತ ಪಕ್ಷ ಸಂಘಟಿಸುವ ಇಂತಹ ಸಮಾವೇಶಗಳು ಎಷ್ಟು ಸಮರ್ಥನೀಯ ಎಂಬುದರ ಬಗ್ಗೆ ಮುಕ್ತ ಚರ್ಚೆಯಾಗಲಿ ಎಂದು ವಿಜಯೇಂದ್ರ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+