ಶ್ರೀಕಾಂತ್ ಕೇಸ್​ಗಳ ಪಟ್ಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ: ಇಲ್ಲಿವೆ ಹಲವು ಪ್ರಕರಣಗಳ ಲಿಸ್ಟ್‌

ಬೆಂಗಳೂರು, ಜನವರಿ 04: ಕರಸೇವಕ ಶ್ರೀಕಾಂತ್ ಪೂಜಾರಿ ಬೆನ್ನಿಗೆ ನಿಂತ ಬಿಜೆಪಿಗೆ ಈಗ ಸಂಕಷ್ಟ ಎದುರಾಗಿದೆ.ಹಿಂದೂ ಕಾರ್ಯಕರ್ತ ಶ್ರೀಕಾಂತ್ ಕೇಸ್​ಗಳ ಪಟ್ಟಿಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಲೀಸ್‌ ಮಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ರಾಮಭಕ್ತ, ಹಿಂದೂ ಕಾರ್ಯಕರ್ತ, ರಾಮ ಜನ್ಮಭೂಮಿ ಹೋರಾಟಗಾರ ಎಂದು ಬೆಂಬಲಿಸುತ್ತಿರುವ ಆಟೋ ಚಾಲಕ ಶ್ರೀಕಾಂತ ಪೂಜಾರಿ ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ, ಮಟ್ಕಾ, ಜೂಜಾಟ ಮತ್ತಿ ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿ 16 ಕೇಸ್‌ಗಳಲ್ಲಿ ಪೊಲೀಸರಿಗೆ ಬೇಕಾಗಿರುವ ದೊಡ್ಡ ಸಮಾಜಘಾತುಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಮೂಲಕ ಶ್ರೀಕಾಂತ ಪೂಜಾರಿ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮಾಡುತ್ತಿರುವ ಪ್ರತಿಭಟನೆಗೆ ತಿರುಗೇಟು ನೀಡಿದ್ದಾರೆ.

BJP Supporting Rama Bhakta Srikanth Pujari Is Criminal With 16 Cases Said Siddaramaiah

ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ.

ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ.

ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ - ಧಾರವಾಡ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೆಯ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

BJP Supporting Rama Bhakta Srikanth Pujari Is Criminal With 16 Cases Said Siddaramaiah

ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ? ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+